39 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೊಕ್ ಸುದ್ದಿಗೆ ಡಿಕೆಶಿ ಹೇಳಿದ್ದೇನು
ಹುಬ್ಬಳ್ಳಿ, ಜೂನ್ 9: 'ಕಾಂಗ್ರೆಸ್‌ನ 39 ಶಾಸಕರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ತಪ್ಪಲಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಇದು ಕೇವಲ ಉಹಾಪೋಹದ ವರದಿ' ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಾಗಿರುವ ಶಾಸಕರ ಕ್ಷೇತ್ರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಯನ ನಡೆಸುತ್ತಿದ್ದಾರೆ. ಚುನಾವಣೆಗೆ ಇನ್ನೂ ಸಮಯ ಇರುವುದರಿಂದ ಒಂದು ವೇಳೆ ಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ಪಕ್ಷದಲ್ಲಿ ಆಗಿರುವ ಸಣ್ಣ-ಪುಟ್ಟ ಲೋಪಗಳನ್ನು ಸರಿಪಡಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.[ಸಚಿವ ಡಿಕೆ ಶಿವಕುಮಾರ್ ಜನ್ಮದಿನ ಆಚರಣೆ ಬೇಡ ಅಂದಿದ್ಯಾಕೆ?]

ಇದು ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಎಲ್ಲ ಪಕ್ಷಗಳಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಎಂದು ಅವರು ಹೇಳಿದರು.
ವಿದ್ಯುತ್ ಖರೀದಿಯಲ್ಲಿ ಅವ್ಯಹಾರ ನಡೆದಿದ್ದು, ಈ ಅವ್ಯವಹಾರದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವರು, ವಿದ್ಯುತ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಂದು ವೇಳೆ ಕುಮಾರಸ್ವಾಮಿ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.












Click it and Unblock the Notifications