ಮಠಾಧೀಶರು ರಾಜಕೀಯಕ್ಕೆ ಬರುವುದು ಅವರ ವೈಯಕ್ತಿಕ ವಿಚಾರ: ಸಚಿವ ಆರ್. ಅಶೋಕ್
ಮಠಾಧೀಶರು ಚುನಾವಣೆಗೆ ಸ್ಪರ್ಧಿಸುವ ವಿಚಾರದ ಬಗ್ಗೆ ಸಚಿವ ಆರ್.ಅಶೋಕ್ ಹೇಳಿದ್ದೇನು?
ಹುಬ್ಬಳ್ಳಿ, ಫೆಬ್ರವರಿ, 26: ಮಠಾಧೀಶರು ರಾಜಕಾರಣಕ್ಕೆ ಬರೋದು, ಬಿಡೋದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ ರಾಜ್ಯದಲ್ಲಿ ಆ ತರಹದ ವಾತಾವರಣವಿಲ್ಲ. ಇದನ್ನು ಜನರು ಕೂಡ ಒಪ್ಪುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹುಬ್ಬಳ್ಳಿಯಲ್ಲಿ ಹೇಳಿದರು.
ನಗರದಲ್ಲಿಂದು ಮಠಾಧೀಶರು ರಾಜಕಾರಣಕ್ಕೆ ಬರುವ ವಿಚಾರವಾಗಿ ಮಾತನಾಡಿದ ಅವರು, ಮಠಾಧೀಶರು ರಾಜಕೀಯಕ್ಕೆ ಬರಲು ಇಲ್ಲಿನ ಪರಿಸ್ಥಿತಿ ಕೂಡ ಹೊಂದಾಣಿಕೆ ಆಗಬೇಕು. ಮಠಾಧೀಶರು ಯಾರು ದೊಡ್ಡ ಸಂಖ್ಯೆಯಲ್ಲಿ ಬಂದಿಲ್ಲ. ದೇಶದಲ್ಲಿ ಯೋಗಿ ಆದಿತ್ಯನಾಥ, ಉಮಾ ಭಾರತಿ ಅಂತವರನ್ನು ಬಿಟ್ಟರೇ ಯಾರು ರಾಜಕೀಯಕ್ಕೆ ಬಂದಿಲ್ಲ ಎಂದರು.

ರಾಜಕಾರಣದಲ್ಲಿ ಟೀಕೆಗಳು ಸಾಮಾನ್ಯವಾಗಿರುತ್ತವೆ
ಇನ್ನು ರಾಜಕಾರಣಕ್ಕೆ ಬಂದ ಮೇಲೆ ರಾಜಕೀಯ ಪಕ್ಷಗಳನ್ನು ಟೀಕೆ ಮಾಡಬೇಕಾಗುತ್ತದೆ. ಸ್ವಾಮೀಜಿಗಳಿಗೆ ಸಮಸ್ಯೆ ಉದ್ಭವಿಸುತ್ತವೆ. ಅಲ್ಲದೇ ಯಾವುದೇ ಒಂದು ಜಾತಿಗೆ ಮಠಾದೀಶರು ಸೀಮಿತ ಆಗಲು ಆಗುವುದಿಲ್ಲ. ಮಠಾಧೀಶರು ಕಾವಿ ಬಟ್ಟೆ ಹಾಕಿಕೊಂಡ ಮೇಲೆ ಎಲ್ಲ ಜನರನ್ನು ಪ್ರೀತಿ ಮಾಡಬೇಕು, ಸಮಾನವಾಗಿ ಕಾಣಬೇಕಾಗುತ್ತದೆ. ಹೀಗಾಗಿ ಈ ಎಲ್ಲ ಕಾರಣದಿಂದ ರಾಜಕೀಯಕ್ಕೆ ಸೂಕ್ತ ಆಗುವ ವ್ಯಕ್ತಿಗಳು ಬರಬೇಕು. ಆದರೆ ಎಲ್ಲರೂ ರಾಜಕೀಯಕ್ಕೆ ಬರುವುದಕ್ಕೆ ಸಾಧ್ಯ ಆಗುವುದಿಲ್ಲ ಎಂದು ಹೇಳಿದರು.
ಯಾವ ಮಠಾಧೀಶರಿಗೆ ರಾಜಕೀಯಕ್ಕೆ ಬರಲು ಆಸಕ್ತಿ ಇದೆಯೋ, ಅವರು ಯೋಗಿ ಆದಿತ್ಯನಾಥ, ಉಮಾ ಭಾರತಿ ಅಂತಹವರ ರೀತಿಯಲ್ಲಿ ಧೈರ್ಯವಾಗಿ ರಾಜಕಾರಣದಲ್ಲಿ ನಿಲ್ಲುವ ಅಭಿಲಾಷೆಯಿಂದ ರಾಜಕಾರಣಕ್ಕೆ ಬರಲು ಪ್ರಯತ್ನ ಮಾಡಬಹುದು. ಅದು ರಾಜಕೀಯ ಪಕ್ಷಗಳ ಮೇಲೆ ಅವಲಂಬನೆ ಆಗಿರುತ್ತದೆ. ಆ ದೃಷ್ಟಿಯಿಂದ ಮಠಾಧೀಶರು ನಮ್ಮನ್ನು ಸಂಪರ್ಕ ಮಾಡಿಲ್ಲ. ಬರುವುದು ಬಿಡುವುದು ಅವರ ವೈಯಕ್ತಿಕ ವಿಚಾರಕ್ಕೆ ಬಿಟ್ಟದ್ದು ಎಂದರು.

ಈಗಾಗಲೇ ಮಠಾಧೀಶರು ರಾಜಕೀಯಕ್ಕೆ ಬರುವ ವಿಚಾರವಾಗಿ ಪರ, ವಿರೋಧವಾಗಿ ಬಹಳಷ್ಟು ಜನರು ಮಾತನಾಡಿದ್ದಾರೆ. ನಾನು ಅವರ ಪರ ಇಲ್ಲ, ಹಾಗೆಯೇ ವಿರೋಧವಾಗಿಲ್ಲ ಎಂದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications