ಸಚಿವ ವಿನಯ್ ಕುಲಕರ್ಣಿ ವಿರುದ್ಧ ಸಾಕ್ಷ್ಯಾಧಾರಗಳಿಲ್ಲ: ಸಿಎಂ

Posted By: Nayana
Subscribe to Oneindia Kannada

ಹುಬ್ಬಳ್ಳಿ, ಡಿಸೆಂಬರ್ 1 : ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ಮಾಡಿರುವ ಆರೋಪಗಳೆಲ್ಲ ಸುಳ್ಳು. ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಗೇಶ್ ಗೌಡ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿದೆ.

No evidence against minister Vinay: CM

ಆದರೆ ವಿನಯ್ ಕುಲಕರ್ಣಿ ಅವರ ಮೇಲಿರುವ ಆರೋಪ ಸುಳ್ಳು. ಈಗಾಗಲೇ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದರು.

ಸಿದ್ದರಾಮಯ್ಯ ಬಚ್ಚಾ ಎಂದು ಯಡಿಯೂರಪ್ಪ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಯಡಿಯೂರಪ್ಪ ಏನು ಮೇಧಾವಿಯಲ್ಲ ಎಂದು ಯಡಿಯೂರಪ್ಪ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಯಡಿಯೂರಪ್ಪ ಅವರು ಮಹಾದಾಯಿ ವಿವಾದ ಬಗೆಹರಿಸಿದರೆ ಸ್ವಾಗತ. ಸರ್ವ ಪಕ್ಷನಿಯೋಗದೊಂದಿಗೆ ದೆಹಲಿಗೆ ಹೋದಾಗ ಮೌನವಾಗಿದ್ದ ಯಡಿಯೂರಪ್ಪ ಈಗ ಸಮಸ್ಯೆ ಬಗೆಹರಿಸುವ ಹೇಳಿಕೆ ನೀಡುತ್ತಿರುವುದು ರಾಜಕೀಯ ಪ್ರೇರಿತವಾಗಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief minister Siddaramaiah said there is no evidence against minister Vinay Kulkarni defending that the BJP has made false against latter.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ