ಮೋದಿ ಪ್ರತಿಕೃತಿ ನೇಣಿಗೇರಿಸಿ ಹುಬ್ಬಳ್ಳಿಯಲ್ಲಿ ಬಂದ್ ಆಚರಣೆ
ಹುಬ್ಬಳ್ಳಿ, ಜೂನ್ 12: ಕರ್ನಾಟಕ ಬಂದ್ ಪ್ರಯುಕ್ತ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ಸಚಿವರು ಹಾಗೂ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಅಣಕು ಹಾರಾಜು ಪ್ರಕ್ರಿಯೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ವಿವಿಧ ಸಂಘಟನೆಗಳು ಹರಾಜು ಹಾಕುವ ಮೂಲಕ ಕೇಂದ್ರ ಹಾಗೂ ನೆರೆ ರಾಜ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
In Pics : ಕರ್ನಾಟಕ ಬಂದ್ ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ
ಕರವೇ ಪ್ರವೀಣ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದ್ದು, ಮಹಾದಾಯಿ ವಿಷಯದಲ್ಲಿ ಪ್ರಧಾನಿ ನಿರ್ಲಕ್ಷ್ಯ ತೊರಿಸಿದ್ದರೆಂದು ಆಕ್ರೋಶ ವ್ಯಕ್ತಪಡಿಸಿ, ಚೆನ್ನಮ್ಮ ವೃತ್ತದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ನೇಣಿಗೇರಿಸಲಾಯಿತು.

ಹುಬ್ಬಳ್ಳಿಯಲ್ಲಿ ಮಧ್ಯಾಹ್ನದ ನಂತರ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ನವಲಗುಂದ ಹಾಗೂ ಗದಗ ಜಿಲ್ಲೆಯ ನರಗುಂದದಲ್ಲಿ ಬಂದ್ ಯಶಸ್ವಿಯಾಗಿದೆ. ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿಗೊಂಡಿದೆ.












Click it and Unblock the Notifications