ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ನಿರೀಕ್ಷಿತ ಪ್ರಮಾಣದ ಕೋವಿಡ್ ಚಿಕಿತ್ಸೆ ಸಿಗುತ್ತಿಲ್ಲ

|
Google Oneindia Kannada News

ಹುಬ್ಬಳ್ಳಿ, ಮೇ 22: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದ ಬಳಿಕ ಸಂಸ್ಥೆಯ ಮುಖ್ಯಸ್ಥರು ಹಾಗೂ ನಾನಾ ವಿಭಾಗಗಳ ಮುಖ್ಯಸ್ಥರನ್ನು ಉದ್ದೇಶಿಸಿ ಶನಿವಾರ ಸಚಿವರು ಮಾತನಾಡಿದರು.

18 ರಿಂದ 44 ವಯೋಮಾನದ ಈ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ18 ರಿಂದ 44 ವಯೋಮಾನದ ಈ ಆದ್ಯತೆ ಗುಂಪುಗಳಿಗೆ ಕೋವಿಡ್ ಲಸಿಕೆ

ಕಿಮ್ಸ್ ಸಂಸ್ಥೆಯಲ್ಲಿ ಒಂದು ಸಾವಿರ ವೈದ್ಯರಿದ್ದಾರೆ. 1030 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಮಾಣದಲ್ಲಿ ವೈದ್ಯರು ರೋಗಿಗಳ ಅನುಪಾತ ಯಾವ ದೇಶದಲ್ಲೂ ಇಲ್ಲ. ಎಷ್ಟು ಪರಿಣಾಮಕಾರಿಯಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದೇವೆ ಎಂಬುದನ್ನು ನೀವೆ ಪ್ರಶ್ನೆ ಮಾಡಿಕೊಳ್ಳಬೇಕು. ಇತರೆ ಸಿಬ್ಬಂದಿಯನ್ನು ಲೆಕ್ಕ ಹಾಕಿದರೆ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಮಂದಿ ಇದ್ದೀರಿ. ಆದರೆ ನಿರೀಕ್ಷಿತ ಪ್ರಮಾಣದ ಆರೋಗ್ಯ ಸೇವೆ ಏಕೆ ಲಭ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ನ್ಯಾಯ ಸಮ್ಮತ ಬಳಕೆ ಆಗಲಿ

ನ್ಯಾಯ ಸಮ್ಮತ ಬಳಕೆ ಆಗಲಿ

ಆಕ್ಸಿಜನ್ ಮತ್ತು ಸ್ಟಿರಾಯ್ಡ್‌ನ ನ್ಯಾಯ ಸಮ್ಮತ ಬಳಕೆ ಆಗಬೇಕು. ಅದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು. ಪ್ರತಿದಿನ ಇವುಗಳ ಆಡಿಟ್‌ ಮಾಡಬೇಕು. ಕೋವಿಡ್‌ಯೇತರ ರೋಗಿಗಳಿಗೆ ತುರ್ತು ಇದ್ದಲ್ಲಿ ಮಾತ್ರ ಚಿಕಿತ್ಸೆಗೆ ತೆಗೆದುಕೊಳ್ಳಬೇಕು. ಈ ಭಾಗದಲ್ಲಿ ಕಿಮ್ಸ್ ಪ್ರಾದೇಶಿಕ ಆರೋಗ್ಯ ಕೇಂದ್ರ ಆಗಿರುವುದರಿಂದ ಶೇ.75ರಷ್ಟು ಹಾಸಿಗೆ ಕೋವಿಡ್‌ಗೆ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಹಿರಿಯ ವೈದ್ಯರು, ತಜ್ಞರು, ಬೇರೆ ಬೇರೆ ವಿಭಾಗಗಳ ಮುಖ್ಯಸ್ಥರು ಕೋವಿಡ್ ವಾರ್ಡುಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಅದು ನಿಜವೂ ಇದೆ ಎಂದು ತಿಳಿದುಬಂದಿದೆ. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವವರು ಬಂದು ಸಹಿ ಮಾಡಿ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೆಲವರಿಂದ ಇಡೀ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತಿದೆ. ಇಂತವರ ಬಗ್ಗೆ ನಿರ್ದೇಶಕರು ತಕ್ಷಣ ಕ್ರಮ ಕೈಗೊಳ್ಳಬೇಕು. ಇವರಿಂದ ಕೆಲಸ ಮಾಡುವ ಇತರರ ಉತ್ಸಾಹ ಕುಗ್ಗುತ್ತದೆ. ಕೆಲಸ ಕದಿಯುತ್ತಿರುವ ಇಂತಹವರು ಎಷ್ಟೇ ದೊಡ್ಡವರಿದ್ದರೂ ಸರಿಯೇ ಮುಲಾಜಿಲ್ಲದೆ, ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

ವಿಭಾಗ ಮುಖ್ಯಸ್ಥರು ಹೊಣೆ

ವಿಭಾಗ ಮುಖ್ಯಸ್ಥರು ಹೊಣೆ

ಇನ್ನೊಂದು ತಿಂಗಳು ಕಷ್ಟಪಟ್ಟು ಕೆಲಸ ಮಾಡಿ, ಸಾವುಗಳನ್ನು ತಪ್ಪಿಸಿ. ಪ್ರತಿ ಜೀವಕ್ಕೂ ಬೆಲೆಯಿದೆ. ನಾವ್ಯಾರು ಬಲವಂತದಿಂದ ವೈದ್ಯ ವೃತ್ತಿಗೆ ಬಂದಿಲ್ಲ. ಇಷ್ಟಪಟ್ಟು ಬಂದಿರುವಾಗ ಲೋಪಗಳಿಲ್ಲದಂತೆ ಕೆಲಸ ಮಾಡಬೇಕು. ಆತ್ಮ ವಂಚನೆ ಮಾಡಿಕೊಳ್ಳದೆ ಕೆಲಸ ಮಾಡಿ. ಕೆಲವರು ಮಾಡುವ ತಪ್ಪಿಗೆ ಎಲ್ಲರೂ ತಲೆ ತಗ್ಗಿಸುವಂತೆ ಆಗಬಾರದು ಎಂದು ಕಿವಿಮಾತು ಹೇಳಿದರು.

ವಿಭಾಗಗಳ ಮುಖ್ಯಸ್ಥರು ತಮ್ಮ ತಮ್ಮ ವಿಭಾಗಗಳಲ್ಲಿ ಶಿಸ್ತು ರೂಢಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿ. ಅತ್ಯುತ್ತಮ ಗುಣಮಟ್ಟದ ಉಪಕರಣಗಳನ್ನು ನೀಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಔಷಧಗಳನ್ನು ರವಾನಿಸಲಾಗಿದೆ. ಕೊರತೆ ಇರುವುದನ್ನೂ ಒಂದೆರಡು ದಿನದಲ್ಲಿ ಕೊಡಲಾಗುತ್ತದೆ. ಇವೆಲ್ಲವನ್ನೂ ಪರಿಣಾಮಕಾರಿಯಾಗಿ ಬಳಕೆ ಮಾಡಿ. ಏನೇ ಸಮಸ್ಯೆ ಇದ್ದರೂ ಸ್ಥಳೀಯ ಸಚಿವರು, ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಆಕ್ಸಿಜನ್ ಆಡಿಟ್‌ ಆಗಬೇಕು

ಆಕ್ಸಿಜನ್ ಆಡಿಟ್‌ ಆಗಬೇಕು

ಪ್ರತಿ ರೋಗಿಗೆ ನೀಡುತ್ತಿರುವ ಆಕ್ಸಿಜನ್ ಆಡಿಟ್‌ ಆಗಲೇಬೇಕು. ಇಲ್ಲಿ ಅಧಿಕವಾಗಿ ಬಳಕೆ ಆಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ತಜ್ಞ ಸಿಬ್ಬಂದಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ನಿಯೋಜನೆ ಮಾಡಿ ಅಲ್ಲಿನ ಸಿಬ್ಬಂದಿಗೆ ತರಬೇತಿ ಕೊಡಿಸುವ ವ್ಯವಸ್ಥೆ ಆಗಬೇಕು. ಜಿಲ್ಲಾಧಿಕಾರಿ ತಕ್ಷಣ ಈ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಆದೇಶಿಸಿದರು.

ಹಗಲು-ರಾತ್ರಿ ಪಾಳಿ ನಿಯೋಜನೆ ಮಾಡಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿನ ಸಿಬ್ಬಂದಿ, ಹಾಸಿಗೆಯ ವಿವರಗಳನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು. ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಸಂಸ್ಥೆಗೆ ತಕ್ಷಣವೇ ನೋಡಲ್ ಅಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮರಣ ಪ್ರಮಾಣ ಕಡಿಮೆ ಆಗಲೇಬೇಕು. ಪ್ರತಿದಿನ 40 ಸಾವುಗಳು ಸಂಭವಿಸುತ್ತಿವೆ. ಆದರೆ ಅವುಗಳಿಗೆ ಬೇರೆ ಬೇರೆ ಕಾರಣಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ದಾಖಲು ಮಾಡಿದ ಎಷ್ಟೆಷ್ಟು ತಾಸುಗಳಲ್ಲಿ ಸಾವು ಸಂಭವಿಸಿವೆ ಎಂಬ ವಿವರ, ಡೆತ್‌ ಆಡಿಟ್‌ ವರದಿಗಳು ಆಯಾ ದಿನವೇ ಸಿದ್ಧಪಡಿಸಿ ಕಳುಹಿಸಿಕೊಡಬೇಕು ಎಂದು ಸಂಸ್ಥೆಯ ನಿರ್ದೇಶಕರಿಗೆ ಸೂಚನೆ ನೀಡಿದರು.

ಬ್ಲ್ಯಾಕ್ ಫಂಗಸ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ

ಬ್ಲ್ಯಾಕ್ ಫಂಗಸ್ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ

ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲ್ಯಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕ್ರೋಲಾಜಿಸ್ಟ್ (ಶಿಲೀಂಧ್ರ ತಜ್ಞರ) ಸಮಿತಿ ನೇಮಿಸಲಾಗಿದೆ. ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್‌ ಬಳಸಬೇಕು. ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐಸಿಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ. ತಜ್ಞರ ವರದಿ ಆಧರಿಸಿ ಬ್ಲ್ಯಾಕ್ ಫಂಗಸ್ ಸೋಂಕು ಹರಡುವುದನ್ನು ತಡೆಯಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ರಾಜ್ಯದಲ್ಲಿ 250 ಬ್ಲ್ಯಾಕ್ ಫಂಗಸ್ ಸೋಂಕಿತರು

ರಾಜ್ಯದಲ್ಲಿ 250 ಬ್ಲ್ಯಾಕ್ ಫಂಗಸ್ ಸೋಂಕಿತರು

ಬ್ಲ್ಯಾಕ್ ಹಾಗೂ ವೈಟ್ ಫಂಗಸ್‌ನಲ್ಲಿ ವರ್ಣದ ಅಂಶ ಹೊರತು ಪಡಸಿದರೆ ಬೇರೆ ವ್ಯತ್ಯಾಸಗಳು ಇಲ್ಲ. ಸ್ಟಿರಾಯ್ಡ್‌ನ ವಿವೇಚನಾರಹಿತ ಬಳಕೆ ದೇಹದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವಂತೆ ಮಾಡುತ್ತದೆ. ಐಸಿಯುನಲ್ಲಿ ಆಮ್ಲಜನಕದ ಮೇಲೆ ರೋಗಿಗಳು ಹೆಚ್ಚು ಕಾಲ ಇರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಫಂಗಸ್ ಸೋಂಕು ಇವರನ್ನು ತೀವ್ರತರನಾಗಿ ಬಾಧಿಸತ್ತಿದೆ. ದೇಶದಲ್ಲಿ 40 ರಿಂದ 50 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಆದರೆ ಇಂದು ಹಲವು ರಾಜ್ಯಗಳಲ್ಲಿ ಸೊಂಕು ಹೆಚ್ಚಾಗಿ ಹರಡುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 250 ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ. ‌ಎಲ್ಲಾ ಸೊಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೇಶದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಾದ ಔಷಧಗಳ 14,000 ವಯಲ್ಸ್ ಉತ್ಪಾದನೆಯಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವಷ್ಟು ವೈಲ್‌ಗಳನ್ನು ಒದಗಿಸುವುದಾಗಿ ಕೇಂದ್ರ ರಾಸಾಯನಿಕ ‌ಹಾಗೂ ರಸಗೊಬ್ಬರ ಖಾತೆ ಸಚಿವ ಸದಾನಂದಗೌಡ ಅವರು ಆಶ್ವಾಸನೆ ನೀಡಿದ್ದಾರೆ ಎಂದರು. ಪತ್ರಕರ್ತರ ಪಶ್ನೆಗೆ ಉತ್ತರಿಸಿದ ಸಚಿವರು ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ‌ ಹಾಗೂ ಗ್ರೂಪ್ ಡಿ ನೌಕರರಿಗೂ ತುರ್ತು ಸಂದರ್ಭದಲ್ಲಿ ಭತ್ಯೆಯನ್ನು ನೀಡಲಾಗುತ್ತಿದೆ ತಿಳಿಸಿದರು.

ಕಿಮ್ಸ್‌ನಲ್ಲಿ ಪರಿಶೀಲನೆ ನಡೆಸಿದ ಸಚಿವರು

ಕಿಮ್ಸ್‌ನಲ್ಲಿ ಪರಿಶೀಲನೆ ನಡೆಸಿದ ಸಚಿವರು

ಈ ಸಂದರ್ಭದಲ್ಲಿ ಕಿಮ್ಸ್‌ನಲ್ಲಿ ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ವಿಧಿವಿಧಾನ, ಕೈಗೊಳ್ಳಲಾದ ವ್ಯವಸ್ಥೆಗಳು, ಸರ್ಕಾರ ಮಾರ್ಗಸೂಚಿಗಳ ಪಾಲನೆ ಕುರಿತು ಮಾಹಿತಿ ಪಡೆದು, ಪರಿಶೀಲನೆ ನಡಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯದ ರೋಸ್ಟರ್ ಸರಿಯಾಗಿ ನಿಭಾಯಿಸುವಂತೆ ಕಿಮ್ಸ್ ಮುಖ್ಯಸ್ಥರಿಗೆ ತಿಳಿಸಿದರು. ನಂತರ ಕಿಮ್ಸ್ ವೈದ್ಯಾಧಿಕಾರಿಗಳ ಸಭೆ ಜರುಗಿಸಿದರು. ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರಠಾಣಿ, ಜಿ.ಪಂ ಸಿಇಒ ಡಾ.ಬಿ ಸುಶೀಲಾ, ಕಿಮ್ಸ್ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರು, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Recommended Video

lockdownನಲ್ಲಿ ಇಂದಿನಿಂದ ಆಚೆ ಬಂದರೆ ಅರೆಸ್ಟ್ | Oneindia Kannada

English summary
Health Minister Dr K Sudhakar expressed his disappointment that the Karnataka Medical Sciences Institute (KIMS) in Hubballi not Giving Treatment properly for Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X