ಹುಬ್ಬಳ್ಳಿ ನಗರಕ್ಕೆ ಜೂನ್, ಜುಲೈ ತನಕ ನೀರಿನ ಸಮಸ್ಯೆ ಇಲ್ಲ
ಹುಬ್ಬಳ್ಳಿ, ಮಾರ್ಚ್ 27: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭೀಕರ ಬರ ಆವರಿಸಿದೆ. ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಬೆಂಗಳೂರು ನಗರದಲ್ಲಿಯೇ ಸರಿಯಾಗಿ ಕುಡಿಯುವ ನೀರು ಸಿಗುತ್ತಿಲ್ಲ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿ ಪರಿಸ್ಥಿತಿ ಹೇಗಿದೆ?.
ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಲಘಟಗಿ ಮತ್ತು ಹುಬ್ಬಳ್ಳಿಯಲ್ಲಿನ ಬರ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು. ಕುಡಿಯುವ ನೀರು, ಜಾನುವಾರುಗಳಿಗೆ ನೀರು ಪೂರೈಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

"ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು" ಎಂದು ಸೂಚಿಸಿದರು.
ಜಿಲ್ಲಾಧಿಕಾರಿಗಳು ನೀರಸಾಗರ ಹಾಗೂ ಬೆಣಚಿ ಕೆರೆ ವೀಕ್ಷಣೆ ಮಾಡಿದರು. ಬೆಲವಂತರ, ಸೋಮನಕೊಪ್ಪ, ಮುಕ್ಕಲ ಗ್ರಾಮಗಳಿಗೆ ಭೇಟಿ ನೀಡಿ ನೀರು, ಮೇವು ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು.
ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಖಾಸಗಿ ಮಾಲೀಕರಿಂದ ಬೋರ್‌ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದ್ದು, 9 ಗ್ರಾಮ ಪಂಚಾಯತಿಯ 13 ಗ್ರಾಮಗಳಿಗೆ ಒಟ್ಟು 27 ಖಾಸಗಿ ಕೊಳವೆ ಬಾವಿಗಳ ಮೂಲಕ ಅಗತ್ಯ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.
ಕಲಘಟಗಿ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಬೆಣಚಿ ಕೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಕಲಘಟಗಿ ಪಟ್ಟಣ ಪಂಚಾಯತಿಯ ಇಂಜಿನಿಯರ್ ಅಕ್ಕಮಹಾದೇವಿ ತಡಸ ಅವರಿಗೆ ತಿಳಿಸಿದರು.
24*7 ಯೋಜನೆಯಡಿ ಇನ್ನೂ ಎರಡು ಎತ್ತರದ ಟ್ಯಾಂಕ್‍ಗಳನ್ನು ನಿರ್ಮಿಸಲು ಟೆಂಡರ್ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡಲ್ಲಿ ಕಲಘಟಗಿ ಪಟ್ಟಣದ 17 ವಾರ್ಡ್‌ಗಳಿಗೆ ಪ್ರತಿದಿನ ನೀರು ಸರಬರಾಜು ಮಾಡಲಾಗುತ್ತದೆ ಎಂದು ಅಧಿಕಾರಿಗಳು ವಿವರಣೆ ನೀಡಿದರು.
ಕಲಘಟಗಿಯ ತಹಶೀಲ್ದಾರ್ ಕಚೇರಿಗೆ ಡಿಸಿ ಭೇಟಿ ನೀಡಿದರು. ಇ- ಆಫೀಸ್, ಚುನಾವಣೆ ವಿಭಾಗ ಹಾಗೂ ಇತರೆ ವಿಭಾಗಗಳನ್ನು ಪರಿಶೀಲಿಸಿದ ಅವರು ಸಾರ್ವಜನಿಕರ ಅಹವಾಲುಗಳನ್ನು ವಿಳಂಬ ಮಾಡದೆ 15-20 ದಿನಗಳಲ್ಲಿ ಇತ್ಯರ್ಥಗೊಳಿಸಬೇಕು ಎಂದರು.
ಚಿಕ್ಕ-ಚಿಕ್ಕ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಅಲೆಯದಂತೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ನೀಡುವ ಬಗ್ಗೆ ಯೋಚಿಸಲಾಗಿದೆ. ನೌಕರರು ಆಸಕ್ತಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ತಹಶೀಲ್ದಾರ್ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸುವಂತೆ ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರಗೆ ತಿಳಿಸಿದರು.
ನೀರಸಾಗರ ಜಲಾಶಯ ಭೇಟಿ: ಹುಬ್ಬಳ್ಳಿ ಹಾಗೂ ಕುಂದಗೋಳಕ್ಕೆ ಕುಡಿಯುವ ನೀರಿನ ಮೂಲವಾಗಿರುವ ನೀರಸಾಗರ ಜಲಾಶಯಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿದರು. ನೀರಿನ ಮಟ್ಟದ ಬಗ್ಗೆ ಜಲಮಂಡಳಿ ಹಾಗೂ ಕೆಯುಐಡಿಎಫ್‌ಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ತಿಮ್ಮಪ್ಪ ಅವರಿಂದ ಮಾಹಿತಿ ಪಡೆದುಕೊಂಡರು.
ಜಲಾಶಯದ ಒಟ್ಟು ಸಾಮರ್ಥ್ಯ 1.25 ಟಿಎಂಸಿ ಇದ್ದು, ಒಮ್ಮೆ ಸಂಪೂರ್ಣ ಭರ್ತಿಯಾದರೆ 2 ವರ್ಷದವರೆಗೆ ನೀರು ಸರಬರಾಜು ಮಾಡಬಹುದು. ಸದ್ಯ ಜಲಾಶಯದಲ್ಲಿ 0.28 ಟಿಎಂಸಿ ನೀರು ಸಂಗ್ರಹವಿದ್ದು, ಜೂನ್- ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಲಮಂಡಳಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಜಲಾಶಯದ ಸುತ್ತಲಿನ ಕೃಷಿಕರು ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ನಿಗಾವಹಿಸಬೇಕು ಹಾಗೂ ಈ ಕುರಿತು ಗ್ರಾಮಗಳಲ್ಲಿ ಡಂಗುರ ಸಾರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications