ವೈಯಕ್ತಿಕ ವಿಚಾರ, ಜಾತಿ ಬಳಕೆ ಸರಿಯಲ್ಲ, ಅದು ಗೌರವ ತರುವಂತದ್ದಲ್ಲ: ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಶೆಟ್ಟರ್ ವಾಗ್ದಾಳಿ

ವೈಯಕ್ತಿಕ ವಿಚಾರ, ಜಾತಿ ಬಳಕೆ ಸರಿಯಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಜಗದೀಶ್‌ ಶೇಟ್ಟರ್‌ ಗುಡುಗಲು ಕಾರಣ ಏನು ಅಂತಾ ತಿಳಿಯಿರಿ.

ಹುಬ್ಬಳ್ಳಿ, ಫೆಬ್ರವರಿ, 09: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ರಾಜಕಾರಣದಲ್ಲಿ ವೈಯಕ್ತಿಕ ವಿಷಯ, ಜಾತಿಯ ವಿಷಯಗಳನ್ನು ತೆಗೆದುಕೊಂಡು ಮಾತನಾಡುವುದು ಸರಿಯಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿಯವರು ಹಗುರವಾಗಿ ಮಾತನಾಡುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೊಡ್ಡ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ವೈಯಕ್ತಿಕ ವಿಚಾರಗಳನ್ನು ಹಾಗೂ ಜಾತಿಗಳನ್ನು ಇಟ್ಟುಕೊಂಡು ಮಾತನಾಡಬಾರದು. ಜಾತಿಯ ಬಗ್ಗೆ ಮಾತನಾಡುವುದು ರಾಜಕೀಯ ನಾಯಕರಿಗೆ ಶೋಭೆ ತರುವುದಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಭಾಷೆ ಬಳಕೆ, ಜಾತಿ ಬಳಕೆ ಮಾಡುವುದು ಸರಿಯಲ್ಲ ಎಂದರು.

ರಾಜ್ಯ ಬಜೆಟ್‌ ಬಗ್ಗೆ ಶೆಟ್ಟರ್‌ ಹೇಳಿದ್ದೇನು?

ರಾಜ್ಯ ಬಜೆಟ್ ‌ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಮಾತ್ರವಲ್ಲದೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಲಿದೆ. ಈ ಭಾಗಕ್ಕೆ ಅವಶ್ಯಕತೆ ಇರುವ ಅನುದಾನದ ಬಗ್ಗೆ ಉಲ್ಲೇಖ ಮಾಡುವ ಮೂಲಕ ರಾಜ್ಯ ನಾಯಕರ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ. ಬಜೆಟ್ ಉತ್ತರ ಕರ್ನಾಟಕಕ್ಕೆ ಪೂರಕವಾದ ಬಜೆಟ್ ಇದಾಗಿಲಿದೆ ಎಂಬುವಂತ ಭರವಸೆ ವ್ಯಕ್ತಪಡಿಸಿದರು.

Not right Talking about personal matters: Jagadish Shettar outrage against H. D. Kumaraswamy

ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ

ಕೇಂದ್ರ ಸಚಿವ ಜೋಶಿಯವರು ಕಚೇರಿ ದುರ್ಬಳಕೆ ವಿಚಾರವಾಗಿ ಮಾತನಾಡಿದ ಅವರು, ಟೀಕೆ ಟಿಪ್ಪಣಿಗಳಿಗೆ ಆಸ್ಪದ ಕೊಡದೇ ದಾಖಲೆಗಳಿದ್ದರೇ ದೂರು ಸಲ್ಲಿಸಿ. ಸುಮ್ಮನೆ ಆರೋಪ ಮಾಡುವ ಮೂಲಕ ರಾಜಕೀಯ ಮಾಡುವುದು ಸರಿಯಲ್ಲ ಎಂದರು. ಹಾಗೆಯೇ ಅವರು, ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದ ಬಗ್ಗೆ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಧನಾತ್ಮಕ ವರದಿ ಸಲ್ಲಿಸಿದೆ. ಮುಂದಿನ ಬೋರ್ಡ್ ಮೀಟಿಂಗ್‌ನಲ್ಲಿ ವರದಿ ಕೈಸೇರಲಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+