NWKRTC: ಮೇ 7ಕ್ಕೆ ಮತದಾನ: ಪುಣೆ, ಗೋವಾದಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ: ವೇಳಾಪಟ್ಟಿ
ಹುಬ್ಬಳ್ಳಿ, ಮೇ 4: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಸಿರುವ ಕರ್ನಾಟಕದ ಉತ್ತರ ಭಾಗದ 14 ಜಿಲ್ಲೆಗಳಿಗೆ ಇದೇ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ಸಲುವಾಗಿ NWKRTC ಘಕಟದಿಂದ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಹೌದು, ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ಮತದಾನಕ್ಕಾಗಿ ದೂರದ ಊರುಗಳಿಂದ ಆಗಮಿಸುವವರು ಹಾಗೂ ಇತರೆ ಪ್ರಯಾಣಿಕರ ಅನುಕೂಲ ಕಲ್ಪಿಸುವ ಉದ್ದೇಶದಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಲ್ಲಿ ಮೇ 7ರಂದು ಲೋಕಸಭೆಗೆ ಮತದಾನ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮತದಾನದ ಹಕ್ಕು ಚಲಾಯಿಸಲು ಇಲ್ಲಿಗೆ ಆಗಮಿಸುವವರು ಹಾಗೂ ಹಿಂದಿರುಗುವವರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಪುಣೆ, ಗೋವಾ ಸೇರಿ ಹೊರ ರಾಜ್ಯಗಳಿಂದಲೂ ಬಸ್ ವ್ಯವಸ್ಥೆ
ಮೇ 3 ಶುಕ್ರವಾರದಿಂದ 7 ಮಂಗಳವಾರದವರೆಗಿನ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಹೀಗಾಗಿ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು, ಮತ್ತಿತರ ಹಲವರು ಮತದಾನ ಮಾಡಲು ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ.
ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ 6 ರಂದು ಸೋಮವಾರದವರೆಗೆ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಪುಣೆ, ಗೋವಾಗೆ ಹಿಂತಿರುಗಲು ಬಸ್ ವ್ಯವಸ್ಥೆ
ಅದೇ ರೀತಿ ಮತದಾನ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮೇ 7ರಂದು ಮಂಗಳವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಹೇಳಿದರು.
ಮುಂಗಡ ಟಿಕೆಟ್ ಬುಕಿಂಗ್‌ನಲ್ಲಿ ರಿಯಾಯಿತಿ
https://www.ksrtc.in ಅಥವಾ KSRTC Mobile App ಹಾಗೂ ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ನೀಡಲಾಗಿದೆ. ಒಂದೇ ಟಿಕೆಟ್ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ.
ತೆರಳುವ ಹಾಗೂ ಹಿಂದಿರುಗುವ ಎರಡು ಕಡೆಗಿನ ಪ್ರಯಾಣಕ್ಕೆ ಆನ್‌ಲೈನ್ ನಲ್ಲಿ ಒಂದೇ ಬಾರಿ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ











Click it and Unblock the Notifications