NWKRTC: ಪ್ರಯಾಣಿಕರಿಗೆ ಬಸ್ ಟಿಕೆಟ್ ದರ ಏರಿಕೆಯ ಬರೆ, ಯಾವಾಗಿನಿಂದ?
ಹುಬ್ಬಳ್ಳಿ, ಜೂನ್ 25: ಜನರು ವರ್ಷಗಳಿಂದ ಬರಗಾಲ, ಅತೀವೃಷ್ಟಿ, ಬೆಲೆ ಏರಿಕೆಗೆ ತತ್ತರಿಸಿದ್ದಾರೆ. ಆರ್ಥಿಕ ಒತ್ತಡ ಎದುರಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಇಂಧನ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಹಾಲು, ವಿದ್ಯುತ್, ಬಸ್ ಟಿಕೆಟ್ ದರಗಳೆಲ್ಲವು ಏರಿಕೆ ಆಗುವುದು ಬಹುತೇಕ ಖಚಿತವಾಗಿದೆ.
ಜನ ಸಾಮಾನ್ಯರು ದಿನನಿತ್ಯದ ವಸ್ತುಗಳ ಬೆಲೆ ಏರಿಕೆಗೆ ನಲುಗಿದ್ದಾರೆ. ಈ ನಡುವೆ ಸಾರ್ವಜನಿಕರ ಹಿತಾಸಕ್ತಿಗೆ ಮಹತ್ವ ನೀಡದ ಸರ್ಕಾರಗಳು. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿದ್ದಂತೆ ಇತರ ಎಲ್ಲ ವಸ್ತುಗಳು ದುಬಾರಿಯಾಗಲಿವೆ. ಈ ಆತಂಕ ಜನರಲ್ಲಿರುವಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದೆ ಇಟ್ಟಿವೆ.

ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಈಗ ಸಂಸ್ಥೆಗೆ ಪ್ರತಿ ತಿಂಗಳು 3 ಕೋಟಿ ರೂ. ಆರ್ಥಿಕ ಹೊರೆ ಬೀಳಲಿದೆ. ಈ ಭಾರವನ್ನು ಸರಿದೂಗಿಸಲು ಸಂಸ್ಥೆಯು ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲು ಚಿಂತನೆ ನಡೆಸಿದೆ.
ನಿಗಮಕ್ಕೆ ನಿತ್ಯ 9 ಲಕ್ಷ ರೂ. ಹೊರೆ
ಸರ್ಕಾರ ಜೂನ್ 15ರಿಂದ ರಾಜ್ಯದಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 3.05 ರೂ. ಏರಿಕೆ ಮಾಡಿದೆ. ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ವಾಹನಗಳಿಗೆ ನಿತ್ಯ ಸರಾಸರಿ 3 ಲಕ್ಷ ಲೀಟರ್ ಡೀಸೆಲ್ ಬಳಕೆ ಮಾಡುತ್ತಿದೆ. ಇದರಿಂದ ನಿತ್ಯ 9 ಲಕ್ಷ ರೂ. ಹೊರೆಯಾಗುತ್ತಿದ್ದು, ತಿಂಗಳಿಗೆ 3 ಕೋಟಿ ರೂ. ಹಣವನ್ನು ಇಂಧನಕ್ಕಾಗಿ ಹೆಚ್ಚುವರಿಯಾಗಿ ಪಾವತಿಸಬೇಕಾದ ಪರಿಸ್ಥಿತಿ ಸಂಸ್ಥೆಗೆ ಎದುರಾಗಿದೆ.
2020ರ ಬಳಿಕ ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗಿಲ್ಲ. ಈ ನಡುವೆ ಸತತವಾಗಿ ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲು ಅವಕಾಶ ನೀಡಬೇಕೆಂದು ನಾಲ್ಕು ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಹಿಂದೊಮ್ಮೆ ಪ್ರಸ್ತಾವನೆ ಸಲ್ಲಿಸಿದ್ದವು.

ಬಸ್ ಪ್ರಯಾಣ ದರ ಏರಿಕೆಗೆ ಮತ್ತೆ ಮನವಿ
NWKRTC ಶೇ. 18ರಿಂದ 30ರವರೆಗೆ ಪ್ರಯಾಣ ದರದಲ್ಲಿ ಏರಿಕೆ ಮಾಡುವಂತೆ ಕೋರಿತ್ತು. ಆದರೆ, ರಾಜ್ಯ ಸರ್ಕಾರ ವಿವಿಧ ಕಾರಣಗಳಿಂದ ಏರಿಕೆಗೆ ಅನುಮೋದನೆ ನೀಡಿರಲಿಲ್ಲ. ಇದೀಗ, ರಾಜ್ಯ ಸರ್ಕಾರವೇ ಡೀಸೆಲ್ ದರದಲ್ಲಿ ಏರಿಕೆ ಮಾಡಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಲು ಅವಕಾಶ ಕೋರಿ ಮತ್ತೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಸಂಸ್ಥೆಗೆ ಅನಿವಾರ್ಯವಾಗಲಿದೆ ಎನ್ನಲಾಗಿದೆ.
ಡೀಸೆಲ್ ಬೆಲೆ ಏರಿಕೆಯಿಂದ ತಿಂಗಳಿಗೆ 2.7ರಿಂದ 3 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ. ಹಿಂದೊಮ್ಮೆ ಶೇ. 30ರಷ್ಟು ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು NWKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಮಾಹಿತಿ ನೀಡಿದರು.
6 ಜಿಲ್ಲೆ ವ್ಯಾಪ್ತಿಯಲ್ಲಿ 4800 ಕ್ಕೂ ಹೆಚ್ಚು ಬಸ್
ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯು ನಿತ್ಯ 4800ಕ್ಕೂ ಮೇಲ್ಪಟ್ಟು ವಾಹನಗಳಿಂದ 4500ಕ್ಕೂ ಅಧಿಕ ಅನುಸೂಚಿಗಳಲ್ಲಿ ಕಾರ್ಯಾಚರಣೆ ನಡೆಸುತ್ತದೆ. ಸಂಸ್ಥೆಯ ಬಸ್ ಗಳು ನಿತ್ಯ 15.08 ಲಕ್ಷ ಕಿಲೋ ಮೀಟರ್ ಸಂಚರಿಸುತ್ತವೆ. ಪ್ರತಿ ಲೀಟರ್ ಡೀಸೆಲ್‌ಗೆ ಬಸ್ ಸರಾಸರಿ 5ಕಿ.ಮೀ. ಓಡುತ್ತದೆ.
ಬಸ್ ಪ್ರಯಾಣ ದರ ಏರಿಕೆ ನಿಶ್ಚಿತ
ಪ್ರತಿ ಬಾರಿ ಡೀಸೆಲ್ ಬೆಲೆ ಏರಿಕೆಯು ಮೊದಲು ಸಾರಿಗೆ ಸೇವೆ ಮೇಲೆ ಪರಿಣಾಮ ಬೀರುತ್ತದೆ. ಈಗಾಗಲೇ ಮೊದಲ ದಿನದಿಂದಲೇ ನಿಗಮಕ್ಕೆ ಸಂಸ್ಥೆಗೆ ಬಿಸಿ ಮುಟ್ಟಿದೆ. ಶೀಘ್ರದಲ್ಲೇ ಬಸ್ ಪ್ರಯಾಣ ದರ ಏರಿಕೆ ನಿಶ್ಚಿತ ಎಂದೇ ಹೇಳಲಾಗುತ್ತಿದೆ.
ಇನ್ನೂ ಮಹಿಳೆಯರಿಗೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಯಿಂದ ಪ್ರಯಾಣಿಕರ ಸಂಖ್ಯೆ ಸಾಕಷ್ಟು ಹೆಚ್ಚಿದೆ. ಆದರೆ, ಇದೀಗ ಪ್ರಯಾಣ ದರ ಏರಿಕೆ ಮಾಡಿದರೆ ಮಹಿಳೆಯರಿಗೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಪುರುಷರಿಗೆ ಹೊರೆಯಾಗಲಿದೆ.
ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ, ವಾಕರಸಾ ಸಂಸ್ಥೆಗೆ 289 ಕೋಟಿ ರೂ. (ಮೇ ಅಂತ್ಯದವರೆಗೆ) ಪಾವತಿಸುವುದು ಬಾಕಿ ಉಳಿಸಿಕೊಂಡಿದೆ. ಇದರ ನಡುವೆ ಡೀಸೆಲ್ ಬೆಲೆ ಏರಿಕೆಯ ಹೊರೆ ಇನ್ನಷ್ಟು ಸಂಸ್ಥೆಗೆ ಆಗಲಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications