NWKRTC Specail Bus: ಸವದತ್ತಿ ಯಲ್ಲಮ್ಮ ನಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ, ಯಾವಾಗ?
ಹುಬ್ಬಳ್ಳಿ, ಅಕ್ಟೋಬರ್ 14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ದೀಪಾವಳಿ ಪ್ರಯುಕ್ತ ವಿಶೇಷ ಬಸ್‌ಗಳನ್ನು ರಾಜ್ಯದ ವಿವಿಧೆಡೆ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ. ಇದರ ಬೆನ್ನಲ್ಲೆ ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ಭಕ್ತರ ಅನುಕೂಲಕ್ಕಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ನಗುಡ್ಡಕ್ಕೆ ವಿಶೇಷ ಬಸ್‌ಗಳನ್ನು ಬಿಡುಗಡೆ ಮಾಡುತ್ತಿದೆ.
ಹೌದು, ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಶೀಗಿ ಹುಣ್ಣಿಮೆಯ ಪ್ರಯುಕ್ತ ಈ ಬಸ್‌ಗಳನ್ನು ವ್ಯವಸ್ಥೆ ಮಾಡುತ್ತಿದೆ. ಕಾರಣ ಹುಣ್ಣಿಮೆ ದಿನ ಯಲ್ಲಮ್ಮನ ಗುಡ್ಡಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತದ್ದಾರೆ. ಈ ಕಾರಣದಿಂದ ಹುಬ್ಬಳ್ಳಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.

ಸೌದತ್ತಿ ಶ್ರೀ ರೇಣುಕಾ ದೇವಿಯ ದರ್ಶನಕ್ಕಾಗಿ ಯಲ್ಲಮ್ಮನ ಗುಡ್ಡಕ್ಕೆ ಹೋಗಿ ಬರುವ ಭಕ್ತಾದಿಗಳು ಹಾಗೂ ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 17ರಂದು ಗುರುವಾರ ಹಾಗೂ 18ರಂದು ಶುಕ್ರವಾರ ಹುಬ್ಬಳ್ಳಿ ಮತ್ತು ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ಸುಗಳ ಸಂಚರಿಸಲಿವೆ.
ಪ್ರತಿ ವರ್ಷವು ಈ ವಿಶೇಷ ಶೀಗಿ ಹುಣ್ಣಿಮೆಯ ದಿನದಂದು ಉತ್ತರ ಕರ್ನಾಟಕದ ಭಾಗದಲ್ಲಿ ಅದರಲ್ಲೂ ಈ ಹುಬ್ಬಳ್ಳಿ, ಧಾರವಾಡ, ನವಲಗುಂದ ಹಾಗೂ ಸುತ್ತಮುತ್ತಲಿನ ಭಾಗದ ಭಕ್ತರು ತಾಯಿ ಸೌದತ್ತಿ ಶ್ರೀ ರೇಣುಕಾ ದೇವಿಯ ದರ್ಶನ ಪಡೆಯುವುದು ವಾಡಿಕೆ. ಪ್ರತಿ ಹುಣ್ಣಿಮೆಯು ಈ ದೇಗುದಲ್ಲಿ ಅತ್ಯಧಿಕ ಭಕ್ತರು ಕಂಡು ಬರುತ್ತಾರೆ. ಈ ಶೀಗಿ ಹುಣ್ಣಿಮೆಗೆ ತುಸು ಹೆಚ್ಚೆ ಭಕ್ತರು ಆಗಮಿಸುತ್ತಾರೆ.
ಹೀಗಾಗಿ ಅಕ್ಟೋಬರ್ 17ರಂದು ಗುರುವಾರ ಶೀಗಿ ಹುಣ್ಣಿಮೆ ಹಾಗೂ 18ರಂದು ಶುಕ್ರವಾರ ಯಮ್ಮನ ವಾರದ ನಿಮಿತ್ಯ ಹೆಚ್ಚಿನ ಜನರ ಸಂಚಾರ ಸಾಧ್ಯತೆ ಇದೆ. ಈ ಅವಧಿಯಲ್ಲಿ ದೇವಿಯ ದರ್ಶನಕ್ಕೆ ತೆರಳುವ ಸಹಸ್ರಾರು ಭಕ್ತರುಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಲುವಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧೆಡೆಯಿಂದ ಯಲ್ಲಮ್ಮ ಗುಡ್ಡಕ್ಕೆ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
NKWRTC ವಿಶೇಷ ಬಸ್ಸುಗಳ ಮಾಹಿತಿ, ಮಾರ್ಗ
ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಈ ವಿಶೇಷ ಬಸ್‌ಗಳು ಹುಬ್ಬಳ್ಳಿಯಿಂದ ನೇರವಾಗಿ ಧಾರವಾಡ, ಅಮ್ಮಿನಭಾವಿ, ಸವದತ್ತಿ ಮಾರ್ಗವಾಗಿ ಯಲ್ಲಮ್ಮನ ಗುಡ್ಡಕ್ಕೆ ಸಂಚರಿಸಲಿವೆ.
ಅದೇ ರೀತಿ ನವಲಗುಂದ ತಾಲೂಕಿನಿಂದ ಗೊಬ್ಬರ ಗುಂಪಿ ಕ್ರಾಸ್, ಗೊಬ್ಬರ ಗುಂಪಿ, ಅಳಗವಾಡಿ ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಯಲ್ಲಮ್ಮನ ಗುಡ್ಡಕ್ಕೆ ಈ ಬಸ್‌ಗಳು ಸಂಚರಿಸಲಿವೆ. ಪ್ರಯಾಣದ ಟಿಕೆಟ್ ದರ ಬದಲಾವಣೆ ಬಗ್ಗೆ ಯಾಉವ ಮಾಹಿತಿ ಇಲ್ಲವಾದ್ದರಿಂದ ಎಂದಿನಂತೆ ಟಿಕೆಟ್ ದರ ಇರಲಿದೆ.












Click it and Unblock the Notifications