NWKRTC Special Bus: ದೀಪಾವಳಿ ಮುಗಿಸಿ ಹಿಂತಿರುಗುವವರಿಗೆ ವಿಶೇಷ ಬಸ್, ಎಲ್ಲಿಂದ ಎಲ್ಲಿಗೆ?

ಹುಬ್ಬಳ್ಳಿ, ನವೆಂಬರ್ 01: ದೀಪಾವಳಿ ಹಬ್ಬ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಸರಣಿ ರಜೆಗಳು ಇವೆ. ಇದರಿಂದಾಗಿ ತಮ್ಮ ಊರುಗಳಿಗೆ ತೆರಳಿರುವ ಪ್ರಯಾಣಿಕರು ಮರಳಲು ವಿಶೇಷ ಬಸ್‌ಗಳ ವ್ಯವಸ್ಥೆ ಆಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ (NWKRTC) ನವೆಂಬರ್ 3 ರವಿವಾರ ಹಾಗೂ 4 ರಂದು ಸೋಮವಾರ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಈ ಕುರಿತು ವಾಯುವ್ಯ ಸಾರಿಗೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ. ಕೆಲಸದ ನಿಮಿತ್ತ ಪರ ಊರುಗಳಲ್ಲಿ ನೆಲೆಸಿರುವವರು ಬೆಳಕಿನ ಹಬ್ಬ ದೀಪಾವಳಿಯ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಿದ್ದಾರೆ. ಅವರಿಗಾಗಿ ಅಕ್ಟೋಬರ್ 29ರಿಂದ ಮೂರು ದಿನ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಯ ಕಡೆಗೆ ಹೆಚ್ಚುವರಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿತ್ತು.

NWKRTC Special Buses Will Run For Return Passengers from Hubballi

ರಾಜಧಾನಿ ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಸಾವಿರಾರು ಜನರು ಹುಬ್ಬಳ್ಳಿ‌-ಧಾರವಾಡ ಸೇರಿದಂತೆ ಜಿಲ್ಲೆಯ ವಿವಿಧ ಊರುಗಳಿಗೆ ಆಗಮಿಸಿದ್ದಾರೆ. ಈ ಸರಣಿ ರಜೆಗಳನ್ನು ಮುಗಿಸಿ ಹಿಂದಿರುಗುವವರ ಅನುಕೂಲಕ್ಕಾಗಿ ನವೆಂಬರ್ 3 ರಿಂದ ಎರಡು ದಿನ ಹೆಚ್ಚುವರಿ ಬಸ್ ಮಾಡಲಾಗಿದೆ.

ಈ ಹೆಚ್ಚುವರಿ ವಿಶೇಷ ಬಸ್ ಗಳಲ್ಲಿ ವೋಲ್ವೋ ಎ.ಸಿ. ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್ ಗಳನ್ನು ನಿಯೋಜಿಸಲಾಗಿದೆ.

ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬೆಂಗಳೂರು,ಹಾವೇರಿ,ದಾವಣಗೆರೆ, ಮಂಗಳೂರು, ಬೆಳಗಾವಿ, ವಿಜಯಪುರ, ಬಾಗಲಕೋಟೆ,ಗದಗ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ.

NWKRTC Special Buses Will Run For Return Passengers from Hubballi

ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದರು.

ಹುಬ್ಬಳ್ಳಿಯಲ್ಲಿ ಎಲ್ಲಿಂದ ಬಸ್ ಹೊರಡಲಿವೆ

ಬೆಂಗಳೂರು, ಹಾವೇರಿ, ದಾವಣಗೆರೆ,ಶಿವಮೊಗ್ಗ, ಮಂಗಳೂರು,ಧರ್ಮಸ್ಥಳ,ಅಂಕೋಲ, ಶಿರಸಿ,ಬೆಳಗಾವಿ ಕಡೆಗೆ ಹೋಗುವ ಬಸ್ಸುಗಳು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.

ಹೊಸೂರು ಬಸ್ ನಿಲ್ದಾಣ ನವಲಗುಂದ, ನರಗುಂದ, ಬಾಗಲಕೋಟೆ, ವಿಜಯಪುರ, ಕಲಬುರಗಿ,ಗದಗ,ಕೊಪ್ಪಳ, ಹೊಸಪೇಟೆ,ಕಲಘಟಗಿ, ಕುಂದಗೋಳ, ಲಕ್ಷ್ಮೇಶ್ವರ, ಶಿರಹಟ್ಟಿ ಕಡೆಗೆ ಹೋಗುವ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ತೆರಳಲಿವೆ.

ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಬುಕಿಂಗ್ ಮಾಡುವವರಿಗೆ ರಿಯಾಯಿತಿ ಇವೆ. ನೀವು https://www.ksrtc.in ಅಥವಾ KSRTC Mobile App ಮೂಲಕ ಆಸನ ಕಾಯ್ದಿರಿಸಬಹುದು. ಒಂದೇ ಟಿಕೆಟ್ ನಲ್ಲಿ ನಾಲ್ಕು ಅಥವಾ ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಎರಡು ಬದಿಯಲ್ಲಿ ಒಂದೇ ಭಾರಿಗೆ ಟಿಕೆಟ್ ಬುಕ್ ಮಾಡಿದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+