NWKRTC; ಉತ್ತರ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ ಶೀಘ್ರ

ಹುಬ್ಬಳ್ಳಿ, ಆಗಸ್ಟ್‌ 29; ಪರಿಸರ ಸ್ನೇಹಿ ಸಾರಿಗೆ ಸೇವೆಗೆ ಆದ್ಯತೆ ನೀಡಿರುವ ಕರ್ನಾಟಕದ ಸಾರಿಗೆ ಸಂಸ್ಥೆಗಳು ಎಲೆಕ್ಟ್ರಿಕ್ ಬಸ್ ಸೇವೆಯನ್ನು ಆರಂಭಿಸುತ್ತಿವೆ. ಈಗಾಗಲೇ ಕೆಎಸ್ಆರ್‌ಟಿಸಿ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಎಲೆಕ್ಟ್ರಿಕ್ ಬಸ್ ಸಂಚಾರವನ್ನು ಆರಂಭಿಸಿ ಯಶಸ್ವಿಯಾಗಿವೆ. ಈಗ ಉತ್ತರ ಕರ್ನಾಟಕ ಭಾಗದಲ್ಲಿಯೂ ಎಲೆಕ್ಟ್ರಿಕ್ ಬಸ್‌ಗಳು ರಸ್ತೆಗೆ ಇಳಿಯಲಿವೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಸ್ ಸೇವೆಗಳನ್ನು ನೀಡುತ್ತಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಶೀಘ್ರವೇ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಆರಂಭಿಸಲಿದೆ. ಹುಬ್ಬಳ್ಳಿಯಲ್ಲಿ ಕೇಂದ್ರ ಕಛೇರಿ ಹೊಂದಿರುವ ಸಂಸ್ಥೆಗೆ ಶೀಘ್ರವೇ ಎಲೆಕ್ಟ್ರಿಕ್ ಬಸ್‌ಗಳು ಸೇರ್ಪಡೆಗೊಳ್ಳಲಿವೆ.

NWKRTC To Induct 450 Electric Buses Soon

ಸದ್ಯದ ಮಾಹಿತಿಯಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 450 ಎಲೆಕ್ಟ್ರಿಕ್ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ಈ ಕುರಿತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ. 6 ಜಿಲ್ಲೆಗಳಲ್ಲಿ ಬಸ್ ಸೇವೆ ಒದಗಿಸುತ್ತಿರುವ ಸಂಸ್ಥೆ ಪ್ರಸ್ತುತ ಸುಮಾರು 4,830 ಬಸ್‌ಗಳನ್ನು ಒಳಗೊಂಡಿದೆ.

ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ; ಈಗಾಗಲೇ ಕರ್ನಾಟಕ ಸರ್ಕಾರ Gross Cost Contract (GCC) ಅಡಿಯಲ್ಲಿ 450 ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಒಪ್ಪಿಗೆಯನ್ನು ನೀಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಈ ಕುರಿತು ಟೆಂಡರ್ ಪ್ರಕ್ರಿಯೆ ಆರಂಭಿಸಲು ಸಿದ್ಧತೆ ನಡೆಸಿದೆ.

ಈ ಮಾದರಿ ಒಪ್ಪಂದದ ಅನ್ವಯ ಖಾಸಗಿ ಕಂಪನಿಗಳು ಡ್ರೈವರ್‌ಗಳ ಸಹಿತ ಎಲೆಕ್ಟ್ರಿಕ್ ಬಸ್‌ಗಳನ್ನು ಪೂರೈಕೆ ಮಾಡಬೇಕು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಂಡಕ್ಟರ್‌ಗಳನ್ನು ಮಾತ್ರ ನೀಡಲಿದೆ. ಪ್ರತಿ ಕಿ. ಮೀ. ಬಸ್ ಸಂಚಾರಕ್ಕೆ ಕಂಪನಿಗೆ ಸಂಸ್ಥೆ ಹಣವನ್ನು ಪಾವತಿ ಮಾಡಲಿದೆ. ಬಸ್‌ಗಳನ್ನು ನೇರವಾಗಿ ಕಂಪನಿಗಳಿಂದ ಖರೀದಿ ಮಾಡುವುದಿಲ್ಲ.

ಗ್ರಾಮೀಣ ಭಾಗದಲ್ಲಿ ಸಂಚಾರಕ್ಕೆ ಅನುಕೂಲವಾಗುವ 200 ಮತ್ತು ನಗರ ಪ್ರದೇಶದಲ್ಲಿ ಸಂಚಾರ ನಡೆಸುವ 150 ಬಸ್‌ಗಳು ಸೇರಲಿವೆ. ಬಿಆರ್‌ಟಿಸಿ ಮಾದರಿಯ 100 ಬಸ್‌ಗಳು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಲಿವೆ.

ಈ ಮಾದರಿ ಒಪ್ಪಂದದಲ್ಲಿ ಬಸ್‌ಗಳನ್ನು ಹೇಗೆ ಓಡಿಸಬೇಕು? ಎಂಬುದನ್ನು ತಿಳಿಯಲು ಅಧಿಕಾರಿಗಳ ತಂಡವನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಎಲೆಕ್ಟ್ರಿಕ್‌ ಬಸ್ ಸಂಚಾರ ನಡೆಸುತ್ತಿರುವ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಳಿ ಈ ತಂಡ ಮಾಹಿತಿ ಸಂಗ್ರಹಿಸಲಿದೆ.

ಬೆಳಗಾವಿ, ಹುಬ್ಬಳ್ಳಿ ಮತ್ತು ಧಾರವಾಡ ವಿಭಾಗದಲ್ಲಿ ಎಲೆಕ್ಟ್ರಿಕ್‌ ಬಸ್ ಸಂಚಾರ ನಡೆಸಲು ಯೋಜನೆ ರೂಪಿಸಲಾಗಿದೆ. ಇದೇ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ನಡೆಸಲಿದೆ.

ಎಲೆಕ್ಟ್ರಿಕ್‌ ಬಸ್‌ಗಳನ್ನು ಪೂರೈಕೆ ಮಾಡುವ ಕಂಪನಿಯೇ ಬಸ್‌ಗಳ ಚಾರ್ಜಿಂಗ್ ಪಾಯಿಂಟ್‌ಗಳನ್ನು ನಿಲ್ದಾಣದಲ್ಲಿ ಆರಂಭಿಸಲಿದೆ. ಇದಕ್ಕೆ ಅಗತ್ಯವಿರುವ ಮೂಲ ಸೌಲಭ್ಯವನ್ನು ಮಾತ್ರ ಸಂಸ್ಥೆ ನೀಡಲಿದೆ ಎಂಬುದು ಈ ಮಾದರಿ ಒಪ್ಪಂದದಲ್ಲಿ ಸೇರಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಹುಬ್ಬಳ್ಳಿ, ಧಾರವಾಡ, ಶಿರಸಿ, ಬಾಗಲಕೋಟೆ, ಗದಗ, ಬೆಳಗಾವಿ, ಚಿಕ್ಕೋಡಿ, ಹಾವೇರಿ ಮತ್ತು ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಬರುತ್ತವೆ. ಎಲೆಕ್ಟ್ರಿಕ್‌ ಬಸ್‌ಗಳನ್ನು ಯಾವ ಮಾರ್ಗದಲ್ಲಿ ಓಡಿಸಬೇಕು ಎಂದು ಸಂಸ್ಥೆ ಶೀಘ್ರದಲ್ಲಿಯೇ ತೀರ್ಮಾನ ಮಾಡಲಿದೆ.

ಕೆಎಸ್‌ಆರ್‌ಟಿಸಿ ಈಗಾಗಲೇ ಬೆಂಗಳೂರು-ಶಿವಮೊಗ್ಗ, ಬೆಂಗಳೂರು-ಮೈಸೂರು, ಬೆಂಗಳೂರು-ಹಾಸನ ಸೇರಿದಂತೆ ವಿವಿಧ ಮಾರ್ಗದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳನ್ನು ಓಡಿಸುತ್ತಿದೆ. ಈ ಬಸ್‌ಗಳಿಗೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+