NWKRTC: ಪ್ರಯಾಣಿಕರಿಗಾಗಿ ವಿಶೇಷ ಬಸ್‌ಗಳ ಸೌಲಭ್ಯ: ಎಲ್ಲಿಂದ-ಎಲ್ಲಿಗೆ? ಮಾಹಿತಿ
ಹುಬ್ಬಳ್ಳಿ, ಮೇ 13: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಸೇವೆ ನೀಡುತ್ತಿರುವ ಸಾರಿಗೆ ಇಲಾಖೆ ಪ್ರಮುಖ ಘಟಕವಾದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಅವರು,ಬಸವ ಜಯಂತಿ ಹಾಗೂ ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಸಾರ್ವಜನಿಕರಿಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 22 ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದೆ.

ಎರಡು ದಿನ ಬಸ್ ಕಾರ್ಯಾಚರಣೆ
ಬಸವ ಜಯಂತಿಗೆ ಬಂದು ಮರಳಿ ತಮ್ಮ ಊರು, ಕಚೇರಿಯ ಸ್ಥಳಗಳಿಗೆ ತೆರಳುವವರಿಗೆ ಸೋಮವಾರ ಸಂಜೆವರೆಗೂ ಈ ಹೆಚ್ಚುವರಿ ಬಸ್‌ಗಳು ಸೇವೆ ನೀಡಲಿವೆ. ವಾಸ್ತವದಲ್ಲಿ ಈ ಬಸ್‌ಗಳ ಕಾರ್ಯಾಚರಣೆಯನ್ನು ಭಾನುವಾರ ಬೆಳಗ್ಗೆಯಿಂದಲೇ ಆರಂಭಿಸಲಾಗಿದೆ ಎಂದು ಅವರು ಹೇಳಿದರು.
ಬಸವ ಜಯಂತಿ ಹಾಗೂ ಅಕ್ಷಯ ತೃತೀಯ ಸಲುವಾಗಿ ಮೇ 10ರಂದು ಮತ್ತು 11ರಂದು ಎರಡನೇ ಶನಿವಾರ ಹಾಗೂ 12ರಂದು ರವಿವಾರ ಸಾರ್ವಜನಿಕ ರಜೆ ಹಿನ್ನೆಲೆಯಲ್ಲಿ ದೂರದ ಊರುಗಳಲ್ಲಿ ನೆಲೆಸಿರುವ ಹಲವರು ಸ್ವಂತ ಊರುಗಳಿಗೆ ಆಗಮಿಸಿದ್ದರು. ಅವರಿಗೆ ಮರಳಿ ಹೋಗಲು ಈ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ
ಇನ್ನೂ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ, ಗೃಹ ಪ್ರವೇಶ ಮತ್ತಿತರ ಶುಭ ಕಾರ್ಯಗಳಿದ್ದವು. ಆದ್ದರಿಂದ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ಹೆಚ್ಚಾಗಿತ್ತು. ಅದಕ್ಕೆ ತಕ್ಕಂತೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಅಕ್ಕಪಕ್ಕದ ಜಿಲ್ಲೆಗಳಿಗೂ ಹೆಚ್ಚುವರಿ ಬಸ್ ಸಂಚಾರ
ರಜೆ ಮುಗಿಸಿಕೊಂಡು ತಮ್ಮ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರ ಪ್ರಯಾಣಿಕರಿಂದಾಗಿ ಮೇ12ರಂದು ರವಿವಾರ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್ ನಿಲ್ದಾಣಗಳಿಂದ ಮೇ 14ರವರೆಗೂ ತೆರಳುವವರಿಗೆ ಅನುಕೂಲವಾಗಲಿದೆ. ವಾರಾಂತ್ಯ ಹಿನ್ನೆಲೆಯ ಹೆಚ್ಚಿನ ಸಂಖ್ಯೆಯಲ್ಲಿ ಜನ ಓಡಾಡುವವರು ಇರುತ್ತಾರೆ.
ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ವಿಭಾಗದ ಹಿರಿಯ ಅಧಿಕಾರಿಗಳು ಪ್ರಮುಖ ಬಸ್ ನಿಲ್ದಾಣಗಳಲ್ಲಿ ಹಾಜರಿದ್ದಾರೆ. ಇಂದು ಸೋಮವಾರ ತಡರಾತ್ರಿವರೆಗೂ ಈ ಬಸ್‌ಗಲೂ ದೂರದ ಬೆಂಗಳೂರು, ಪುಣೆ ಸೇರಿದಂತೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯು ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಸೇವೆ ನೀಡಲಿವೆ ಎಂದು ತಿಳಿಸಿದರು.
ಮಲ್ಟಿ ಆ್ಯಕ್ಸಲ್ ವೋಲ್ವೋ, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ಒಟ್ಟಾರೆ 22 ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಯಿತು ಎಂದು ಹೇಳಿದರು.












Click it and Unblock the Notifications