NWKRTC: ಉದ್ಯೋಗ ಮೇಳ 2024: ಹುಬ್ಬಳ್ಳಿ-ರಾಜಧಾನಿಗೆ ಹೆಚ್ಚುವರಿ ವಿಶೇಷ ಬಸ್: ಯಾವಾಗ? ವಿವರ
ಹುಬ್ಬಳ್ಳಿ, ಫೆಬ್ರವರಿ 21: ಬೆಂಗಳೂರಿನಲ್ಲಿ ಇದೇ ತಿಂಗಳ ಕೊನೆ ವಾರ ಹಮ್ಮಿಕೊಳ್ಳಲಾಗಿರುವ 'ಬೃಹತ್ ರಾಜ್ಯ ಮಟ್ಟದ ಉದ್ಯೋಗ ಮೇಳ -2024'ದಲ್ಲಿ ಭಾಗವಹಿಸುವವರಿಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಯು ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಿದೆ. ಎಲ್ಲಿಂದ ಎಲ್ಲಿ, ಮಾರ್ಗಗಳು ಸೇರಿದಂತೆ ಇತರ ಮಾಹಿತಿ ಇಲ್ಲಿ ತಿಳಿಯಬಹುದು.
ಕರ್ನಾಟಕ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ಹಾಗೂ 27ರಂದು 'ಬೃಹತ್ ರಾಜ್ಯಮಟ್ಟದ ಉದ್ಯೋಗ ಮೇಳ- 2024' ಆಯೋಜಿಸಿದೆ. ಇದರಲ್ಲಿ ಪಾಲ್ಗೊಳ್ಳುವವರಿಗೆ ಅನುಕೂಲವಾಗಲೆಂದು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯು ಮೇಳದ ಎರಡು ದಿನ ವಿಶೇಷ ಬಸ್ ಗಳನ್ನು ಕಾರ್ಯಾಚರಣೆ ಮಾಡಲಿದೆ.

ಈ ಕುರಿತು ಮಾಹಿತಿ ನೀಡಿರುವ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಅವರು, ನಿಗಮದಿಂದ ಫೆಬ್ರವರಿ 25 ರವಿವಾರ ಹಾಗೂ 26 ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೆಚ್ಚುವರಿ ವಿಶೇಷ ಬಸ್ಸುಗಳು ಸಂಚಾರ ನಡೆಸಲಿವೆ. ಮೇಳದಲ್ಲಿ ಪಾಲ್ಗೊಳ್ಳುವವರು ಇದರಲ್ಲಿ ಪ್ರಯಾಣಿಸಬಹುದು ಎಂದು ತಿಳಿಸಿದರು.
ಈ ಉದ್ಯೋಗ ಮೇಳ-2024 ಆಯೋಜಿಸಿದೆ. ಉದ್ಯೋಗಾಕಾಂಕ್ಷಿಗಳಿಗೆ ಅವರ ವಿದ್ಯಾರ್ಹತೆ ಅನುಗುಣವಾಗಿ ವಿವಿಧ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ. ಇದು ನಿರುದ್ಯೋಗಿಗಳಿಗೆ, ಪದವಿ, ಉನ್ನತ ವ್ಯಾಸಂಗ ಮುಗಿಸಿ ಸೂಕ್ತ ಹುದ್ದೆಗೆ ಕಾಯುತ್ತಿರುವವರಿಗೆ ಅತ್ಯುತ್ತಮ ವೇದಿಕೆ ಆಗಿದೆ.

ಹೆಚ್ಚುವರಿ ಬಸ್‌ಗಳ ಸಂಚಾರ ದಿನಾಂಕ ತಿಳಿಯಿರಿ
ಈ ಮೇಳದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಬೆಂಗಳೂರಿಗೆ ತೆರಳಲಿದ್ದಾರೆ. ಅವಳಿ ನಗರ ಹುಬ್ಬಳ್ಳಿ- ಧಾರವಾಡ ದಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಹಾಗೂ ಅವರ ಪೋಷಕರು ಮೇಳದಲ್ಲಿ ಭಾಗವಹಿಸುವ ಸಾಧ್ಯತೆಗಳು ಇವೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಫೆಬ್ರವರಿ 25 ರವಿವಾರ ಹಾಗೂ 26 ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ಅವರು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಈ ಉದ್ಯೋಗ ಮೇಳದಲ್ಲಿ ನೋಂದಣಿ ಆರಂಭವಾಗಿದೆ.
ಉದ್ಯೋಗಿಗಳು, ಉದ್ಯೋಗದಾತರು, ಆಕಾಂಕ್ಷಿಗಳು ಎಲ್ಲರೂ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿಗಾಗಿ ನೀವು ಈ ಲಿಂಕ್ https://skillconnect.kaushalkar.com/ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.












Click it and Unblock the Notifications