ಹುಬ್ಬಳ್ಳಿ; ಕಾರ್ಗೋ ಟರ್ಮಿನಲ್ ಉದ್ಘಾಟನೆ ಕೇಂದ್ರ ಸಚಿವರಿಗೆ ಪತ್ರ
ಹುಬ್ಬಳ್ಳಿ, ಅಕ್ಟೋಬರ್ 04; ಹುಬ್ಬಳ್ಳಿ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್ ಕಟ್ಟಡ ನವೀಕರಣ ಕಾರ್ಯ ಪೂರ್ಣಗೊಂಡಿದೆ. ಶೀಘ್ರವೇ ಕಟ್ಟಡ ಉದ್ಘಾಟನೆ ಮಾಡಬೇಕು ಎಂದು ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಕೇಂದ್ರ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾಗೆ ಈ ಕುರಿತು ಪತ್ರವನ್ನು ಬರೆದಿದ್ದಾರೆ. ಕಾರ್ಗೋ ಸೇವೆ ಆರಂಭಿಸಲು ಅಗತ್ಯ ಸಿಬ್ಬಂದಿ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಹಳೆಯ ಕಟ್ಟಡವನ್ನು 60.6 ಲಕ್ಷ ರೂ. ವೆಚ್ಚದಲ್ಲಿ ಕಾರ್ಗೋ ಟರ್ಮಿನಲ್ ಆಗಿ ನವೀಕರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಹುಬ್ಬಳ್ಳಿಯಿಂದ ಇತರೆ ನಗರಗಳಿಗೆ ಕಾರ್ಗೋ ಸೇವೆ ಆರಂಭಿಸುವ ಉದ್ದೇಶದಿಂದ ಟರ್ಮಿನಲ್ ನಿರ್ಮಾಣ ಮಾಡಲಾಗಿದೆ.

ಕಾರ್ಗೋ ಸೇವೆ ಆರಂಭಕ್ಕೆ ನಾಗರಿಕ ವಾಯುಯಾನ ಭದ್ರತಾ ಮಂಡಳಿ ಅಂತಿಮ ಒಪ್ಪಿಗೆ ಸಿಗಬೇಕಿದೆ. ಭಾರತೀಯ ವಿಮಾನಯಾನ ಪ್ರಾಧಿಕಾರ ಕಾರ್ಗೋ ಲಾಜಿಸ್ಟಿಕ್ ಎಂಡ್ ಮೈತ್ರಿ ಸೇವೆಗಳ ಕಂಪನಿಯೊಂದಿಗೆ ಏರ್ ಕಾರ್ಗೋ ಕಟ್ಟಟದಿಂದ ಸರಕು ಸಾಗಣೆಗೆ ಒಪ್ಪಿಗೆ ಪಡೆಯಬೇಕಿದೆ.
ಬಿಸಿಎಎಸ್ ಒಪ್ಪಿಗೆ ಸಿಕ್ಕಿದರೆ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಮೊದಲ ವಿಮಾನ ಕಾರ್ಗೋ ಟರ್ಮಿನಲ್ ಕಾರ್ಯಾರಂಭ ಮಾಡಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಕೃಷಿ ಮತ್ತು ಕೈಗಾರಿಕೆ ಸರಕುಗಳ ಸಾಗಣೆಗೆ ಸಹಕಾರಿಯಾಗಲಿದೆ.
ಟರ್ಮಿನಲ್ ವಿಶೇಷತೆಗಳು; ಹುಬ್ಬಳ್ಳಿ ವಿಮಾನ ನಿಲ್ದಾಣದ ಹಳೆ ಟರ್ಮಿನಲ್ ಕಟ್ಟಡವನ್ನು 60 ಲಕ್ಷ ರೂ.ಗಳನ್ನು ಕಾರ್ಗೋ ಟರ್ಮಿನಲ್ ಆಗಿ ಪರಿವರ್ತನೆ ಮಾಡಲಾಗಿದೆ. ಕೋಲ್ಡ್ ಸ್ಟೋರೇಜ್, ಅಪಾಯಕಾರಿ ಸರಕುಗಳು, ಬೆಳೆಬಾಳುವ ವಸ್ತುಗಳನ್ನು ಶೇಖರಣೆ ಮಾಡಲು ಪ್ರತ್ಯೇಕ ವಿಭಾಗ ಮಾಡಲಾಗಿದೆ.
ಏರ್ ಇಂಡಿಯಾ, ಇಂಡಿಗೋ, ಸ್ಟಾರ್ ಏರ್ ಮುಂತಾದ ವಿಮಾನಯಾನ ಸಂಸ್ಥೆಗಳು ಹುಬ್ಬಳ್ಳಿಯಿಂದ ಪ್ರಯಾಣಿಕರ ಜೊತೆ ಸರಕುಗಳನ್ನು ಸಹ ಸಾಗಣೆ ಮಾಡಲಿವೆ. ಬೆಂಗಳೂರು, ಚೆನ್ನೈ, ಮುಂಬೈ ನಗರಗಳಿಗೆ ಸರಕುಗಳನ್ನು ಸಾಗಿಸಲು ಯೋಜನೆ ರೂಪಿಸಲಾಗಿದೆ.
ಹುಬ್ಬಳ್ಳಿ ವಿಮಾನ ಅಭಿವೃದ್ಧಿಗೊಳಿಸಿ ಹೊಸ ಟರ್ಮಿನಲ್ ನಿರ್ಮಾಣ ಮಾಡಿದ ಬಳಿಕ ಹಳೆ ಟರ್ಮಿನಲ್ ಕಟ್ಟಡ ಖಾಲಿ ಇತ್ತು. ಇದನ್ನು ಕಾರ್ಗೋ ಟರ್ಮಿನಲ್ ಆಗಿ ಅಭಿವೃದ್ಧಿಗೊಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಟಾಟಾ ಮೋಟಾರ್ಸ್, ಮೈಕ್ರೋ ಫಿನಿಶ್ ಟ್ರೇಡಿಂಗ್ ಸೇರಿದಂತೆ ಇತರೆ ಕಂಪನಿಗಳು ಬರಲಿದ್ದು, ಇದರಿಂದಾಗಿ ಹುಬ್ಬಳ್ಳಿಯಲ್ಲಿನ ಕಾರ್ಗೋ ಟರ್ಮಿನಲ್‌ಗೆ ಬೇಡಿಕೆ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 140 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ದರ್ಜೆಯ ವಿಮಾನ ನಿಲ್ದಾಣವಾಗಿ ಅಭಿವೃದ್ಧಿಗೊಳಿಸಲಾಯಿತು. ನೂತನ ಟರ್ಮಿನಲ್, ರನ್ ವೇ ನಿರ್ಮಾಣ ಮಾಡಲಾಯಿತು. ಉಳಿ ಉಡಾನ್ ಯೋಜನೆಗೆ ವಿಮಾನ ನಿಲ್ದಾಣ ಸೇರಿತು.
ಪ್ರಸ್ತುತ ಹುಬ್ಬಳ್ಳಿಯಿಂದ ಮುಂಬೈ, ಗೋವಾ, ಕೊಚ್ಚಿ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ವಿವಿಧ ನಗರಗಳಿಗೆ ವಿಮಾನ ಹಾರಾಟ ನಡೆಸುತ್ತಿದೆ. 2020ರಲ್ಲಿ ರಾಜ್ಯದ ಬ್ಯುಸಿಯೆಸ್ಟ್ ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ಸೇರಿತ್ತು.
ಹುಬ್ಬಳ್ಳಿ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಬೆಂಗಳೂರು, ಮುಂಬೈ, ದೆಹಲಿ ಮುಂತಾದ ನಗರಗಳ ಜೊತೆ ವ್ಯಾಪಾರ ವಹಿವಾಟು ಹೊಂದಿದೆ. ಆದ್ದರಿಂದ ಕಾರ್ಗೋ ಸೇವೆ ಆರಂಭವಾದರೆ ಉದ್ಯಮಿಗಳಿಗೆ ಅನುಕೂಲವಾಗಲಿದೆ.
2018ರಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರಕು ಸಾಗಣೆ ಸೇವೆ ಪ್ರಾರಂಭ ಮಾಡುವ ಪ್ರಯತ್ನ ಆರಂಭವಾಯಿತು. ಬಳಿಕ ಟರ್ಮಿನಲ್ ಕಟ್ಟಡವನ್ನು ನವೀಕರಣ ಮಾಡಲಾಗಿದ್ದು, ಈಗ ಸೇವೆ ಆರಂಭಿಸಲು ತಯಾರಿ ನಡೆದಿದೆ.
ಕಾರ್ಗೋ ಸೇವೆ ಆರಂಭವಾದರೆ ಉತ್ತರ ಕರ್ನಾಟಕದ ಹೆಬ್ಬಾಗಿಲಾದ ಹುಬ್ಬಳ್ಳಿ ಮುಂಬೈ , ದೆಹಲಿ, ಬೆಂಗಳೂರು, ಚೆನ್ನೈ ಹಾಗೂ ಇತರ ನಗರಗಳೊಂದಿಗೆ ವ್ಯಾಪಾರ ವಹಿವಾಟು ನಡೆಸಲು ಸಹಾಯಕವಾಗಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications