ಹುಬ್ಬಳ್ಳಿ ಸರ್ಕಾರಿ ಶಾಲೆ ಗೋಡೆ ಮೇಲೆ "ಪಾಕಿಸ್ತಾನ ಜಿಂದಾಬಾದ್"
ಹುಬ್ಬಳ್ಳಿ, ಫೆಬ್ರವರಿ 24: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ ಇ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಸರ್ಕಾರಿ ಶಾಲೆಯೊಂದರ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಸಂಗತಿ ತಿಳಿದುಬಂದಿದೆ. ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯಾರೋ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದಾರೆ.

ಈ ಕೈ ಬರಹದ ಸಂಬಂಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಮಾಹಿತಿ ನೀಡಿದ ನಂತರವೂ ಸ್ಥಳಕ್ಕೆ ಭೇಟಿ ನೀಡದ ಪೊಲೀಸರು ಕಾರ್ಯವೈಖರಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications