ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೇ ಸಿಎಂ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಪೇ ಮೇಯರ್ ಅಭಿಯಾನ ಶುರು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್‌, 28: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದಲ್ಲಿ ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕಾಂಗ್ರೆಸ್‌ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದೆ. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ ಎನ್ನಲಾಗಿದೆ. ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ಮೇಯರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಅಭಿಯಾ‌ನ ನಡೆಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿ ಜನರ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದೇನು?ವಾಣಿಜ್ಯ ನಗರಿ ಹುಬ್ಬಳ್ಳಿ ಜನರ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದೇನು?

ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ

ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳ ವಿರುದ್ದ ಜನಸಾಮಾನ್ಯರು, ವಿವಿಧ ಸಂಘಟನೆಗಳ ಮುಖಂಡರು ಸಿಡಿದೆದಿದ್ದಾರೆ. ಈ ನಡುವೆ ಕಾಂಗ್ರೆಸ್‌ ಮತ್ತು ಬಿಜೆಪಿ ಗದ್ದಲ ಆರೋಪ ಪ್ರತ್ಯಾರೋಪದಿಂದ ಅನ್ನದಾತರು ಕೆಂಡಾಮಂಡಲವಾಗಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಬರಿ ಪೇ ಸಿಎಂ, ಪೇ ಫಾರ್ ಕಾಂಗ್ರೆಸ್ ಸದ್ದು ಗದ್ದಲ ಹಿನ್ನೆಲೆ ಹೀಗೆ ಬರಿ ಆರೋಪಗಳನ್ನು ಮಾಡುತ್ತಿರುವ ರಾಜಕಾರಣಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳು ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸದೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಹೊಂದಿರದ ರಾಜಕೀಯ ಪಕ್ಷ ಹಾಗೂ ರಾಜಕಾರಣಿಗಳಿಗೆ ಜನರು ಛೀಮಾರಿ ಹಾಕುತ್ತಿದ್ದಾರೆ.

Pay Mayor campaign started in Hubballi

ಮಂಡ್ಯದಲ್ಲಿ 'ಪೇ ಫಾರ್ಮರ್‌' ಅಭಿಯಾನ

ಇನ್ನೂ ಮಂಡ್ಯ ರೈತರಿಂದ 'ಪೇ ಫಾರ್ಮರ್‌' ಅಭಿಯಾನ ಶುರು ಮಾಡಲಾಗಿತ್ತು. ಜಿಲ್ಲೆಯ ಸಂಜಯ್ ವೃತ್ತದಲ್ಲಿ ರೈತರು ಅಭಿಯಾನ ಕೈಗೊಂಡಿದ್ದು, ಒಂದು ಟನ್ ಕಬ್ಬಿಗೆ 4,500 ರೂಪಾಯಿ‌ ನಿಗದಿ ಮಾಡುವಂತೆ ರೈತರು ಒತ್ತಾಯಿಸಿದ್ದರು. ಇಲ್ಲದಿದ್ದರೆ ದಸರಾದಲ್ಲಿ ಹೆದ್ದಾರಿ ತಡೆದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಭಿಯಾನ ಮಾಡಿದ್ದು, ಸಕ್ಕರೆ ನಾಡಿನಲ್ಲಿ ಅಭಿಯಾನ ತೀವ್ರತೆ ಪಡೆದುಕೊಂಡಿತ್ತು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೈತರು ಪೋಸ್ಟ್ ಹಿಡಿದು ನಿಂತ್ತಿದ್ದು, ಕೆಎಸ್‌ಆರ್‌ಟಿಸಿ, ಐರಾವತ, ರಾಜಹಂಸ ಬಸ್​ಗಳನ್ನು ತಡೆದು 'ಪೇ ಫಾರ್ಮರ್‌' ಪೋಸ್ಟ್ ಅಂಟಿಸಿದ್ದರು. ಜೊತೆಗೆ ಸರ್ಕಾರದ ವಿರುದ್ದ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಮಧುಚಂದನ್, ಪ್ರಸನ್ನಗೌಡ, ಸೇರಿದಂತೆ ಹಲವರು ಭಾಗಿ ಆಗಿದ್ದರು.

ಅಷ್ಟೇ ಅಲ್ಲದೇ ನಾವು ಏನು ಕಡಿಮೆ ಇಲ್ಲವೆಂಬಂತೆ ತೋರಿಸಲು ಬಿಜೆಪಿಯವರು ಕೂಡ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದರಿಂದ ಬೇಸತ್ತ ಜನರು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

ಹುಬ್ಬಳ್ಳಿಗೆ ರಾಷ್ಟ್ರಪತಿ ಆಗಮನ: ಉಡುಗೊರೆಯಾಗಿ ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಧಾರವಾಡ ಪೇಡಹುಬ್ಬಳ್ಳಿಗೆ ರಾಷ್ಟ್ರಪತಿ ಆಗಮನ: ಉಡುಗೊರೆಯಾಗಿ ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಧಾರವಾಡ ಪೇಡ

Pay Mayor campaign started in Hubballi

ಬಳ್ಳಾರಿಯಲ್ಲಿ ಸ್ಕ್ಯಾಂ ಸಿದ್ದರಾಮಯ್ಯ ಅಭಿಯಾನ

ಇನ್ನು ಬಳ್ಳಾರಿ ಜಿಲ್ಲೆಯ ಮೂರು ನಾಲ್ಕು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಬಿಜೆಪಿ ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಅವರು ಹೊಸ ಬಾಂಬ್ ಸಿಡಿಸಿದ್ದರು. ಸ್ಕ್ಯಾಮ್ ಸಿದ್ದರಾಮಯ್ಯ ಅಭಿಯಾನ ಮತ್ತು ಕಾಂಗ್ರೆಸ್ ವಿರುದ್ಧ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಶಾಸಕರು ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಜಿಲ್ಲೆಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವುದಕ್ಕೆ ಚರ್ಚೆ ನಡೆಸುತ್ತಿದ್ದಾರೆ. ಸಿನಿಮಾ ಈಗ ಶುರು ಆಗಿದೆ. ಮುಂದೆ ನೋಡಿ ನಿಮಗೆ ಗೊತ್ತಾಗುತ್ತದೆ. ಬಿಜೆಪಿಯಲ್ಲಿದ್ದವರು ಕಾಂಗ್ರೆಸ್‌ಗೆ ಹೋಗಿದ್ದಾರೆ. ಅವರು ನಮ್ಮನ್ನು ಕಾಂಗ್ರೆಸ್‌ಗೆ ಆಹ್ವಾನಿಸುವುದೇನು? ಅವರೇ ಬಿಜೆಪಿಗೆ ಸೇರಲಿದ್ದಾರೆ. ಈಗಾಗಲೇ ಜಿಲ್ಲೆಯ ಮೂರ್ನಾಲ್ಕು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವುದಕ್ಕೆ ಮಾತುಕತೆ ನಡೆಸುತ್ತಿದ್ದಾರೆ," ಎಂದು ತಿಳಿಸಿದ್ದರು.

ಕಾಂಗ್ರೆಸ್ ಮುಳುಗುವ ಹಡುಗು. ಅಲ್ಲಿಗೆ ಯಾವುದೇ ಕಾರಣಕ್ಕೂ ಯಾರು ಹೋಗುವುದಿಲ್ಲ. ರಾಹುಲ್ ಗಾಂಧಿ ಅವರು ಐರನ್ ಲೆಗ್ ಇದ್ದಂತೆ, ಅವರು ಬಳ್ಳಾರಿಗೆ ಬಂದರೆ ನಮ್ಮ ಗೆಲುವು ಖಚಿತ. ಇಲ್ಲಿ "ಭಾರತ ಜೋಡೋ" ಯಾತ್ರೆ ನಡೆಸುತ್ತಿದ್ದಾರೆ. ರಾಜಸ್ಥಾನದಲ್ಲಿ "ಕಾಂಗ್ರೆಸ್ ತೋಡೋ" ಯಾತ್ರೆ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದರು. ಈಗ ಸಿನಿಮಾ ಆರಂಭವಾಗಿದ್ದು, ಮುಂದೆ ಇನ್ನು ಬಹಳ ನೋಡುವುದು ಇದೆ. ಯಾರು ಎಲ್ಲಿಗೆ ಹೋಗುತ್ತಾರೆ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ರಾಹುಲ್ ಗಾಂಧಿ ಐರನ್ ಲೆಗ್ ಇದ್ದಂತೆ. ಕಳೆದ ಬಾರಿ ಬಳ್ಳಾರಿಗೆ ಬಂದಿದ್ದರು. ಆಗ ಕಾಂಗ್ರೆಸ್ ಪಕ್ಷ ಸೋತು ಹೋಗಿತ್ತು. ಈ ಬಾರಿಯೂ ಬಳ್ಳಾರಿಗೆ ಬಂದರೆ ನಮ್ಮ ಗೆಲವು ಖಚಿತ. ಜನಾರ್ಧನ್‌ ಎಲ್ಲಿಯೂ ಸ್ಪರ್ಧೆ ಮಾಡುವುದಿಲ್ಲ. ಅವಳಿ ಜಿಲ್ಲೆಯ ಹತ್ತು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ಬಿಜೆಪಿ ಘಟಕದಿಂದ ಸ್ಕ್ಯಾಮ್ ಸಿದ್ದರಾಮಯ್ಯ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ನಗರದ ಗಡಗಿ ಚೆನ್ನಪ್ಪ ಸರ್ಕಲ್‌ನಲ್ಲಿ ಅಭಿಯಾನವನ್ನು ಹಮ್ಮಿಕೊಂಡಿದ್ದರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸ್ಕ್ಯಾಮ್ ರಾಮಯ್ಯ ಪೋಸ್ಟರ್‌ ಅನ್ನು ಅಂಟಿಸಿದರು. ಶಾಸಕ ಜಿ.ಸೋಮಶೇಖರ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಹೀಗೆ ಒಬ್ಬರ ಮೇಲೆ ಒಬ್ಬರು ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಲೇ ಇದ್ದಾರೆ. ಆದರೆ ಜನಪ್ರತಿನಿಧಿಗಳು ಜನರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ಆದ್ದರಿಂದ ಸಿಡಿದೆದ್ದ ಜನರು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

English summary
Pay mayor campaign started on Bengaluru model In Hubballi, caused of discussion, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X