ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಪ್ಲಾಸ್ಟಿಕ್ ಪತ್ತೆ: ಗೋಡೌನ್ ಸೀಜ್
ಹುಬ್ಬಳ್ಳಿ, ಜುಲೈ 18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಲಕ್ಷ ಲಕ್ಷ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ನಿಷೇಧ ಮಾಡಿದ್ದರೂ ಕೂಡ ಕದ್ದುಮುಚ್ಚಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಜಾಲವನ್ನುವನ್ನು, ಕನ್ನಡಪರ ಸಂಘಟನೆ ಮತ್ತು ಪಾಲಿಕೆ ಅಧಿಕಾರಿಗಳು ಬೆಳಕಿಗೆ ತಂದಿದ್ದು,ಇಡೀ ಗೋಡೌನ್‌ನನ್ನೇ ಸೀಜ್ ಮಾಡಿದ್ದಾರೆ.
ಸ್ವಚ್ಛತೆ, ನೈರ್ಮಲ್ಯ ಕಾಪಾಡುವ ಹಿತದೃಷ್ಟಿಯಿಂದ ಪ್ಲ್ಯಾಸ್ಟಿಕ್ ನಿಷೇಧ ಕಾಯಿದೆ ಜಾರಿ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು, ಹುಬ್ಬಳ್ಳಿಯಲ್ಲಿ ಪಾಲನೆ ಮಾಡದೇ ಎಗ್ಗಿಲ್ಲದೇ ಪ್ಲಾಸ್ಟಿಕ್ ಮಾರಾಟ ಮಾಡಲಾಗುತ್ತಿದೆ. ವಾಣಿಜ್ಯ ನಗರಿ ಹುಬ್ಬಳ್ಳಿ ದಿನದಿಂದ ದಿನಕ್ಕೆ ಹೆಮ್ಮರವಾಗಿ ಬೆಳೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಅದೇ ರೀತಿ ಅಕ್ರಮ ಚಟುವಟಿಕೆ ಸಹ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇಲ್ಲೊಂದು ಗೋಡೌನ್ ಮಾಲೀಕ ಲಕ್ಷ ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾನೆ. ಗೋಕುಲ ರೋಡ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಹದೇವ ಟ್ರೆಡಿಂಗ್ ಕಂಪನಿಯಲ್ಲಿ ಲಕ್ಷಾಂತರ ರೂಪಾಯಿ ಪ್ಲಾಸ್ಟಿಕ್ ಪತ್ತೆಯಾಗಿವೆ. ಈ ಜಾಲವನ್ನು ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ, ಅಕ್ರಮವಾಗಿಟ್ಡಿದ್ದ ಪ್ಲಾಸ್ಟಿಕ್ ಬಗ್ಗೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ದೌಡಾಯಿಸಿದ ಜೂನಲ್ ಐದು ಅಧಿಕಾರಿಗಳು, ಮತ್ತು ಪಾಲಿಕೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಗೋಡೌನ್‌ನಲ್ಲಿ ಸುಮಾರು 3 ಟನ್ ಪ್ಲಾಸ್ಟಿಕ್ ಸಂಗ್ರಹ ಮಾಡಲಾಗಿದ್ದು, ಸದ್ಯ ಸಂಪೂರ್ಣ ಗೋಡೌನ್ ಸೀಜ್ ಮಾಡಿದ್ದಾರೆ.
ಪ್ಲಾಸ್ಟಿಕ್ ನಿಷೇಧಿಸಿದ ಬಳಿಕ ಪಾಲಿಕೆ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದು, ನಗರದ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಣಕ್ಕೆ ತರಲು ಕ್ರಮವಹಿಸುತ್ತಿದ್ದಾರೆ. ಹೀಗಿದ್ದರೂ ಕೆಲವೊಂದು ಇಂಡಸ್ಟ್ರಿಯಲ್ ಸೇರಿದಂತೆ ದೂರದ ಪ್ರದೇಶಗಳಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ಪ್ಲಾಸ್ಟಿಕ್ ದಂಧೆ ನಡೆಸುತ್ತಿದ್ದಾರೆ. ಹೀಗಾಗಿ ಇದರ ಬಗ್ಗೆ ಕೂಡ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕಾಗಿದೆ.

ಸ್ಮಾರ್ಟ್ ಸಿಟಿ ಯೋಜನೆ: ಗ್ಲಾಸ್ ಹೌಸ್ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಅಡಿಯಲ್ಲಿ, ಹುಬ್ಬಳ್ಳಿಯ ಇಂದಿರಾ ಗ್ಲಾಸ್ ಹೌಸ್, ಮತ್ತು ಮಹಾತ್ಮ ಗಾಂಧಿ ಉದ್ಯಾನವನ ಕಾಮಗಾರಿ ನಡೆಸಲಾಗಿತ್ತು. ಈ ಎಲ್ಲ ಕಾಮಗಾರಿ ಕಳಪೆ ಮತ್ತು ಯಾವುದೇ ವಸ್ತುಗಳು ಗುಣಮಟ್ಟದ್ದಿಲ್ಲವೆಂದು ಹುಬ್ಬಳ್ಳಿಯ ಹೋರಾಟಗಾರರು ಲೋಕಾಯುಕ್ತಕ್ಕೆ ಅರ್ಜಿ ಸಲ್ಲಿಸಿದರು. ಈ ಬಗ್ಗೆ ಇಂದು ಲೋಕಾಯುಕ್ತ ಅಧಿಕಾರಿಗಳು ಇಂದಿರಾ ಗ್ಲಾಸ್ ಹೌಸ್‌ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಇನ್ನು ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬರೊಬ್ಬರಿ 26.11 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಮಾಡಿದ್ದರು. ಆ ಎಲ್ಲಾ ಕಾಮಗಾರಿಗಳು ಕಳಪೆ ಮಟ್ಟದ್ದಾಗಿವೆ ಎಂದು ಲೋಕಾಯುಕ್ತರಿಗೆ ಪತ್ರ ಬರೆದಿದ್ದು, ಸ ದ್ಯ ಲೋಕಾಯುಕ್ತ ಅಧಿಕಾರಿಗಳು ಸ್ಥಳಕ್ಕೆ ಬಂದು ಎಲ್ಲವನ್ನು ಪರಿಶೀಲನೆ ಮಾಡಿ ವರದಿ ಸಿದ್ಧಪಡಿಸಿದ್ದಾರೆ. ಅಲ್ಲದೇ ಕಾಮಗಾರಿ ಕಳಪೆ ಮಟ್ಟದ್ದಾಗಿದ್ದರೆ ಅಧಿಕಾರಿಗಳಿಗೆ ತಿಳಿಸಲಾಗುತ್ತದೆ ಎಂದರು. ಇನ್ನು ಹೋರಾಟಗಾರರು ಲೋಕಾಯುಕ್ತರಿಗೆ ಕಾಮಗಾರಿಗೆ ಸಂಬಂಧಿಸಿದ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಶಿಕ್ಷೆಯಾಗಬೆಂದು ಒತ್ತಾಯಿಸಿದ್ದಾರೆ.












Click it and Unblock the Notifications