• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ ಪೊಲೀಸ್ ಕಮಿಷನರ್ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಏರ್ ಲಿಫ್ಟ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲು

|

ಹುಬ್ಬಳ್ಳಿ, ನವೆಂಬರ್ 12: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬುರಾಮರನ್ನು ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ‌ ಬಂದಿದ್ದ ಲಾಬೂರಾಮ್ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಮಧ್ಯರಾತ್ರಿ ವಿಶೇಷ ವಿಮಾನದ ಮೂಲಕ ಏರ್ ಲಿಫ್ಟ್ ಮಾಡಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೊರೊನಾ ಸೋಂಕಿತರ ಏರ್ ಲಿಫ್ಟ್‌ಗೆ ತಯಾರಾದ ನೌಕಾಪಡೆ

ಎರಡು ದಿನದ ಹಿಂದಿನಿಂದಲೂ ಎಸ್ ಡಿಎಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದರಿಂದ ಕುಟುಂಬದ ಸದಸ್ಯರು ರಾತ್ರಿಯೇ ಬೇರೆ ಆಸ್ಪತ್ರೆಗೆ ರವಾನೆ ಮಾಡಿರುವುದು ಗೊತ್ತಾಗಿದೆ.

ಅವಳಿನಗರದ ಪೊಲೀಸ್ ಆಯುಕ್ತರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಲಾಬುರಾಮ್ ಖಡಕ್ ಅಧಿಕಾರಿ ಎಂದೇ ಹೆಸರು ಗಳಿಸಿದ್ದಾರೆ. ಅವರು ಬಂದ ನಂತರ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಸಮನ್ವಯತೆ ಕಂಡುಬಂದಿದ್ದು, ಅಪರಾಧ ಪ್ರಕರಣಗಳು ಕೂಡ ಕಡಿಮೆಯಾಗಿದ್ದವು.

   Donald Trump ನಾನೇ ಅಮೆರಿಕ ಅಧ್ಯಕ್ಷ!! | Oneindia Kannada

   ಅವರಿಗೆ ನಿಖರವಾಗಿ ಯಾವ ಆರೋಗ್ಯ ಸಮಸ್ಯೆ ಎದುರಾಗಿದೆ ಎಂಬ ಕುರಿತು ಮಾಹಿತಿ ಇಲ್ಲ.

   English summary
   Hubballi Dharwad Police Commissioner Laburam was admitted to a private hospital in Bangalore late last night through airlift from hubballi,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X