ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶದ ವಿವಿಧ ಕಡೆ ಪ್ರತಿಭಟನೆ; ಹುಬ್ಬಳ್ಳಿಯಲ್ಲಿ ಪೊಲೀಸರ ಶಾಂತಿಸಭೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜೂನ್ 12 : ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ನೂಪೂರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿ ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೆಲವು ಕಡೆ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ಹುಬ್ಬಳ್ಳಿ ಪೊಲೀಸರು ಶಾಂತಿ ಸಭೆ ನಡೆಸಿದರು.

ಪ್ರತಿಭಟನೆ, ಹಿಂಸಾಚಾರ ಹಿನ್ನಲೆಯಲ್ಲಿ ರಾಜ್ಯ ಪೊಲೀಸರು ಅಲರ್ಟ್ ಆಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಹುಬ್ಬಳ್ಳಿ ಧಾರವಾಡದಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಆಯಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ಗಳಿಗೆ ನೀಡಿದ್ದು ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

 ದೇಶದೆಲ್ಲೆಡೆ ಹಿಂಸಾಚಾರ: ಶಾಂತಿ ಸ್ಥಾಪನೆಗೆ ಧರ್ಮಗುರುಗಳ ಸಭೆ ನಡೆಸಿದ ಕಮೀಷನರ್ ಪ್ರತಾಪ್ ರೆಡ್ಡಿ ದೇಶದೆಲ್ಲೆಡೆ ಹಿಂಸಾಚಾರ: ಶಾಂತಿ ಸ್ಥಾಪನೆಗೆ ಧರ್ಮಗುರುಗಳ ಸಭೆ ನಡೆಸಿದ ಕಮೀಷನರ್ ಪ್ರತಾಪ್ ರೆಡ್ಡಿ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, "ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು ನಿಯಂತ್ರಣದಲ್ಲಿದೆ. ಆದರೂ ಜಾಗೃತವಾಗಿರಬೇಕೆಂದು ಸೂಚಿಸಿದ್ದೇವೆ" ಎಂದರು.

Police Inspector Meeting With Hindu-Muslim Leaders to Ensure Peace in Hubbali

"ಪ್ರತಿಯೊಂದು‌ ಠಾಣೆಯ ಸಿಪಿಐ ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜೊತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಮಾತುಕತೆ ನಡೆಸಲು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್‌ಪಿ ಜೊತೆಯೂ ಚರ್ಚೆ ನಡೆಸಿದ್ದೇನೆ" ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸೂಚನೆಯ ಮೇರೆಗೆ ಹುಬ್ಬಳ್ಳಿ- ಧಾರವಾಡ ನಗರದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಇನ್ಸ್‌ಪೆಕ್ಟರ್‌ಗಳು ಕಾರ್ಯಪ್ರವರ್ತರಾಗಿದ್ದು ತಮ್ಮ ವ್ಯಾಪ್ತಿಯ ಎಲ್ಲಾ ಹಿಂದೂ-ಮುಸ್ಲಿಂ ಸಮಾಜದ ಮುಖಂಡರನ್ನು ಕರೆಸಿ ಶಾಂತಿ ಸಭೆ ನಡೆಸಿ ಸೌಹಾರ್ದತೆ ಕಾಪಾಡುವಂತೆ ಸೂಚನೆ ನೀಡುತ್ತಿದ್ದಾರೆ.

ಪ್ರವಾದಿ ಕುರಿತ ಹೇಳಿಕೆ ವಿರುದ್ಧ ಪ್ರತಿಭಟನೆ: ಯೋಗಿ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರಪ್ರವಾದಿ ಕುರಿತ ಹೇಳಿಕೆ ವಿರುದ್ಧ ಪ್ರತಿಭಟನೆ: ಯೋಗಿ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ

Police Inspector Meeting With Hindu-Muslim Leaders to Ensure Peace in Hubbali

ನಗರದ ಗೋಕುಲ ರೋಡ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜೆ. ಎಂ. ಕಾಲಿಮಿರ್ಚಿ ತಮ್ಮ ವ್ಯಾಪ್ತಿಯ ಎಲ್ಲಾ ಸಮಾಜದ ಮುಖಂಡರನ್ನು ಕರೆಯಿಸಿದ್ದರು. "ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಪ್ರತಿಭಟನೆ ವೇಳೆ ಹೆಸರಿನಲ್ಲಿ ಕೋಮು ಗಲಭೆ ಹಿನ್ನಲೆ ಹೆಚ್ಚಾಗುತ್ತಿದೆ. ಹಾಗಾಗಿ ಇಂತಹ ವಿಷಯಗಳ ಕುರಿತು ತಮ್ಮ ಏರಿಯಾಗಳಲ್ಲಿ ಚರ್ಚೆ ಮಾಡುವುದು , ವಾಗ್ವಾದ ಮಾಡುವುದು ಮಾಡಬಾರದು. ಓಣಿಯಲ್ಲಿ ಎಲ್ಲರೂ ಸೌಹಾರ್ದತವಾಗಿ ಸಹೋದರಂತೆ ಬಾಳಬೇಕು" ಎಂದು ಸೂಚನೆ ನೀಡಿದ್ದಾರೆ.

English summary
After chief minister Basavaraj Bommai instruction Hubballi police inspector meeting with Hindu and Muslim community leaders to ensure peace in city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X