ಉತ್ತರ ಕರ್ನಾಟಕ ಬಂದ್: ಧಾರವಾಡ ಪೊಲೀಸ್ ಕ್ರೀಡಾ ಕೂಟ ಮುಂದೂಡಿಕೆ
ಧಾರವಾಡ, ಡಿಸೆಂಬರ್ 27 : ಮಹದಾಯಿ, ಕಳಸಾ ಬಂಡೂರಿ ವಿಚಾರವಾಗಿ ರೈತ ಸಂಘಟನೆ ಕರೆ ನೀಡಿರುವ ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಬುಧವಾರ ನಡೆಯಬೇಕಿದ್ದ ಜಿಲ್ಲಾ ಪೊಲೀಸ್ ಕ್ರೀಡಾಕೂಟದ ಉದ್ಘಾಟನೆಯನ್ನು ಡಿ.28 ಕ್ಕೆ ಮುಂದೂಡಲಾಗಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನಲ್ಲಿ ಬುಧವಾರದಿಂದ ಆರಂಭಗೊಳ್ಳಲಿದ್ದ ಮೂರು ದಿನಗಳ ಕ್ರೀಡಾ ಕೂಟ ಇದಾಗಿತ್ತು. ಕ್ರೀಡಾಕೂಟದಲ್ಲಿ ಸ್ಪರ್ಧಿಸಬೇಕಿದ್ದ ಪೊಲೀಸರು ಬಂದೋಬಸ್ತ್ ನಲ್ಲಿ ಪಾಲ್ಗೊಂಡ ಹಿನ್ನೆಲೆ ಗುರುವಾರದಿಂದ ಕ್ರೀಡಾಕೂಟ ಆರಂಭವಾಗಲಿದೆ.

ಸಿಲ್ವರ್ ಜ್ಯುಬ್ಲಿ ವೃತ್ತದಲ್ಲಿ ರೈತರ ಪ್ರತಿಭಟನೆ: ಧಾರವಾಡದ ಸಿಲ್ವರ್ ಜುಬ್ಲಿ ವೃತ್ತದಲ್ಲಿ ವಿವಿಧ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಸ್ವಯಂ ಪ್ರೇರಿತವಾಗಿ ಮಾರುಕಟ್ಟೆ ಬಂದ್ ಮಾಡಲಾಗಿದ್ದು ಆರಂಭವಾಗಿರುವ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಾಸಕ ಎನ್.ಎಚ್. ಕೋನರೆಡ್ಡಿ ಬೆಂಬಲ ಸೂಚಿಸಿದ್ದಾರೆ.











Click it and Unblock the Notifications