ಬಿಜೆಪಿ ಪಕ್ಷದಲ್ಲಿ ಬಕೆಟ್ ಹಿಡಿದವರಿಗೆ ರಾಜ ಮರ್ಯಾದೆ, ಅದ್ಕೆ ರಾಜ್ಯದಲ್ಲಿ ಹಳ್ಳ ಹಿಡಿದಿರೋದು: ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ, ಸೆಪ್ಟೆಂಬರ್, 03: ಕಳೆದ ವಿಧಾನಸಭೆ ಚುನಾವಣೆ ಸೋತು ಸುಣ್ಣಾವಾಗಿರುವ ಭಾರತೀಯ ಜನತಾ ಪಕ್ಷದಲ್ಲಿ ಇದೀಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ಸಂಬಂಧ ಗೊಂದಲಗಳು ಮುಂದುವರೆದಿವೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣಗಳ ಮಧ್ಯೆ ಪೈಪೋಟಿ ಶುರುವಾಗಿದೆ.
ಸಿಟಿ ರವಿ ಅವರನ್ನು ರಾಜ್ಯಾಧ್ಯಕ್ಷ ಮಾಡಬೇಕೆಂದು ಬಿಎಲ್ ಸಂತೋಷ್ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇತ್ತ ಲಿಂಗಾಯತರಿಗೆ ನಾಯಕತ್ವ ನೀಡಬೇಕೆಂಬ ಕೂಗು ಕೇಳಿಬಂದಿದೆ. ಅಲ್ಲದೇ ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಪೋಟಗೊಂಡಿದೆ. ಇದರ ಜೊತೆಗೆ ಧಾರವಾಡ ಲೋಕಸಭಾ ಅಭ್ಯರ್ಥಿಯನ್ನಾಗಿ ಲಿಂಗಾಯತರನ್ನೇ ಕಣಕ್ಕಿಳಿಸಿಲು ಸಹ ಒತ್ತಾಯವನ್ನು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರು ಮಾಡಿದರು.
ರಾಜ್ಯ ಬಿಜೆಪಿಯಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಬೇಕೆಂದು ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಬಹಿರಂಗವಾಗಿಯೆ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳಿದಿದ್ದೆ ಸೋಲಿಗೆ ಕಾರಣವಾಗಿದೆ. ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ, ಮಾಧುಸ್ವಾಮಿ, ರೇಣುಕಾಚಾರ್ಯ, ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲನ್ನು ಹೊರಗಡೆ ಇಟ್ಟಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ನಾನು ವಿಧಾನ ಪರಿಷತ್ ಸದಸ್ಯನಾಗಿದ್ದರೂ ಕೆಲ ಕಾರ್ಯಕ್ರಮಗಳಿಗೆ ನನ್ನ ಕಡೆಗಣನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನನ್ನ ಕರೆದಿಲ್ಲ. ಇದೊಂದೆ ಕಾರ್ಯಕ್ರಮ ಅಲ್ಲ. ನಾಲ್ಕೈದು ಕಾರ್ಯಕ್ರಮಕ್ಕೆ ಕಡೆಗಣಿಸಿದ್ದಾರೆ. ಇದು ನನಗೆ ಬೇಸರವಾಗಿದೆ. ಯಾಕೆ ಹೀಗೆ ಆಗುತ್ತಿದೆ ಎನ್ನುವುದು ಅರ್ಥ ಆಗುತ್ತಿಲ್ಲ. ಆದರೆ ವೀರಶೈವ ಲಿಂಗಾಯತ ನಾಯಕರಿಗೆ ನಾಯಕತ್ವ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ವೀರಶೈವ ಲಿಂಗಾಯತರಿಗೆ ಕೊಡಬೇಕು ಎಂದು ಆಗ್ರಹಿಸಿದರು.
ನಾನು ಪಕ್ಷ ಬಿಟ್ಟು ಹೋಗುವುದಿಲ್ಲ. ಅನೇಕ ಕಾಂಗ್ರೆಸ್ ದೊಡ್ಡ ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ಸಮಸ್ಯೆ ಆಗಿದೆ. ಪಕ್ಷದಲ್ಲಿ ಹೇಳೋರು ಕೇಳೋರು ಇಲ್ಲದಂತಾಗಿದೆ. ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಎರಡು ದಿನದ ಮುಂಚೆ ನನ ಬಳಿ ಕೇಂದ್ರ ಸಚಿವರು ಮಾತಾಡಿದ್ದಾರೆ. ಆದರೆ ನನ್ನ ಪಕ್ಷದವರು ತಡೆದಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರೇ ಇಲ್ಲ. ಬಿಜೆಪಿ ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ ಎಂದು ಆರೋಪ ಮಾಡಿದರು.
ಲಿಂಗಾಯತ ನಾಯಕರಿಗೆ ಮೋಸ ಆಗುತ್ತಿರುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇವೆ ಎಂದು ಹೇಳಿದರು. ಅಲ್ಲದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಿದರು. ಬಿಜೆಪಿಯಲ್ಲಿ ಇರುವುದೇ ಅಲ್ಪ ಸ್ವಲ್ಪ ಲಿಂಗಾಯತ ನಾಯಕರು. ಅವರನ್ನು ಅವೈಡ್ ಮಾಡಿದ್ರೆ ಬಿಜೆಪಿ ಕೆಟ್ಟ ಸ್ಥಿತಿಗೆ ಹೋಗತ್ತೆ. ರಾಜ್ಯದ ಬಿಜೆಪಿ ಉಸ್ತುವಾರಿಗಳು ಬದಲಾಗಬೇಕು. ಹಾಗೆಯೇ ಲಿಂಗಾಯತ ನಾಯಕರಿಗೆ ನಾಯಕತ್ವ ನೀಡಿದರೆ ಮಾತ್ರ ಬಿಜೆಪಿ ಗೆಲ್ಲಲು ಸಾಧ್ಯ ಎಂದರು.
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇದರಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರಿಗೆ ರಾಜಕೀಯ ವಾಸನೆ ತೋರಿಸಿದ್ದಾರೆ. ಮೋದಿ ಅವರು ಸಂವಿಧಾನ ಬದಲಿಸಿ ಲೋಕಸಭಾ ಚುನಾವಣೆ ಮುಂದೂಡಿದರೆ ಜನರು ಸುಮ್ಮನ್ನಿರಲ್ಲ ಎಂದು ಹರಿಹಾಯ್ದರು.
ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ದೇವೆಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ, ಕರ್ನಾಟಕ ಹಿತ ರಕ್ಷಣೆಗೆ ಕಾನೂನು ಹೋರಾಟ ಮಾಡಿದ್ದೇವೆ. ಎಲ್ಲ ಪಕ್ಷಗಳ ಸಭೆ ಕರೆದು ಮಾರ್ಗದರ್ಶನ ಪಡೆದಿದ್ದೇವೆ. ಇದರಲ್ಲಿ ಯಾವುದೇ ರಾಜಕಾಣ ಮಾಡಿಲ್ಲ. ಆದರೆ ಸಂಕಷ್ಟ ಸೂತ್ರ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂದರು.
ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಬರಲು ಅಭಿಪ್ರಾಯ ಪಡುತ್ತಿದ್ದಾರೆ. ಸಮಾಜದಲ್ಲಿ ಬಡವರ ಪರ ಮನಸ್ಥಿತಿ ಇರುವವರು ಪಕ್ಷಕ್ಕೆ ಬರುವವರು ಆಸಕ್ತರಾಗಿದ್ದಾರೆ ಎಂದರು. ಮಹದಾಯಿ ಯೋಜನೆ ಅನುಷ್ಠಾನ ಬಿಜೆಪಿ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆ ಅನುಮತಿ ಕೊಡಿಸಬೇಕು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಡ ತರುತ್ತದೆ. ಬಿಜೆಪಿ ನುಡಿದಂತೆ ನಡೆಯಬೇಕು. ರಾಜ್ಯದ ಜನರ ಹಿತಕ್ಕಾಗಿ ಅನುಮತಿ ಕೊಡಿಸಬೇಕು ಎಂದು ಹೇಳಿದರು.












Click it and Unblock the Notifications