ಜೂನ್‌ 17ರಂದು ಹುಬ್ಬಳ್ಳಿಯಲ್ಲಿ ಉಜ್ವಲ ಯೋಜನೆಗೆ ಚಾಲನೆ

ಹುಬ್ಬಳ್ಳಿ, ಮೇ 29 : ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕೇಂದ್ರದ 'ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಜೂನ್‌ 17ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಭಾನುವಾರ ಇಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, "ಅರ್ಹ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ಸೌಲಭ್ಯದ ಪತ್ರ ವಿತರಿಸುವ ಮೂಲಕ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದಲ್ಲಿ ಉಜ್ವಲ ಯೋಜನೆಗೆ ಚಾಲನೆ ನೀಡುವರು" ಎಂದರು.[ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?]

Pradhan Mantri Ujjwala Yojana to be launched on June 17th in Hubblli

ಎನ್‌ ಡಿಎ ಸರ್ಕಾರ ಮೂರು ವರ್ಷ ಪೂರೈಸಿರುವ ಕಾರಣ ಪಕ್ಷದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್‌ 19ರಂದು ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಹುಬ್ಬಳ್ಳಿಗೆ ಭೇಟಿ ನೀಡಲಿದ್ದು, ಅಂದು ಇಡೀ ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಜೋಶಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+