ಪ್ರಜ್ವಲ್ ರೇವಣ್ಣ ಕೇಸ್‌ನಿಂದ 'ಮೈತ್ರಿ' ಅಭ್ಯರ್ಥಿಗಳಿಗೆ ತೊಡಕಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಏಪ್ರಿಲ್ 29: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ಮೈತ್ರಿ ಪಕ್ಷಗಳ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಕರಣದಿಂದ ಬಿಜೆಪಿಗೆ ತೊಂದರೆ ಆಗಲಿದೆ ಎಂದು ಹೇಳುತ್ತಿದ್ದಾರೆ. ಇದಕ್ಕೆ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪ್ರಕರಣದಿಂದ ಮೈತ್ರಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಅದಕ್ಕೆ ಸರ್ಕಾರ, ಕಾನೂನು ಕ್ರಮ ಕೈಗೊಳ್ಳಲಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ ಎಂದವರಿಗೆ ಅವರು ತಿರುಗೇಟು ನೀಡಿದ್ದಾರೆ.

Prahlad Joshi Clarified about Prajwal Revanna Case won t Trouble Alliance Candidates

ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮ ಆಗಲೇಬೇಕು. ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದು ಅವರು ಹೇಳಿದರು.

ಕೇವಲ ಪ್ರಹ್ಲಾದ್ ಜೋಶಿ ಮಾತ್ರವಲ್ಲದೇ ಆರ್‌.ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ತಪ್ಪು ಯಾರೇ ಮಾಡಿದರೂ ತಪ್ಪು. ಉಪ್ಪು ತಿಂದವ ನೀರು ಕುಡಿಯಲೇ ಬೇಕು ಎಂದಿರುವ ಎಚ್‌ಡಿ ಕುಮಾರಸ್ವಾಮಿಯವರ ಹೇಳಿಕೆಯನ್ನು ಆರ್‌. ಅಶೋಕ್ ಪುನುರುಚ್ಚರಿಸಿದ್ದಾರೆ. ಸರ್ಕಾರ ತನಿಖೆಯನ್ನು ಎಸ್‌ಐಟಿಗೆ ಕೊಟ್ಟಿದ್ದಾರೆ. ತನಿಖೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ ಪರಿಣಾಮ ಬೀರುವುದಿಲ್ಲ: ಜಿ.ಟಿ.ದೇವೆಗೌಡ

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ. ಎಸ್ ಐಟಿಯಿಂದ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ‌ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ‌ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ ಜೆಡಿಎಸ್ ಪಕ್ಷದಿಂದ ಹುಬ್ಬಳ್ಳಿಯಲ್ಲಿ ಕೋರ್ ಕಮೀಟಿ‌ಸಭೆ ಕರೆಯಲಾಗಿದೆ. ಕೋರ್ ಕಮೀಟಿ‌ ಸಭೆಯಲ್ಲಿ 14 ಕ್ಷೇತ್ರಗಳ‌ ಪ್ರಮುಖರು ಭಾಗಿಯಾಗಲಿದ್ದಾರೆ.‌ಮಾಜಿ ಶಾಸಕರು, ಹಾಲಿ‌ಶಾಸಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಈ ಪ್ರಕರಣದಿಂದಾಗಿ ಯಾವ ಅಭ್ಯರ್ಥಿಗೂ ಹಾಗೂ ಮೈತ್ರಿ ಪಕ್ಷಕ್ಕೂ ಪರಿಣಾಮ‌ ಬೀರಲ್ಲ. ಇದು ವೈಯಕ್ತಿಕ ಪ್ರಕರಣ ಆಗಿರುವುದರಿಂದ ಯಾರಿಗೂ ಪರಿಣಾಮ‌ ಬೀರಲ್ಲ ಎಂದು ಅವರು ಹೇಳಿದರು‌.

ಅಶ್ಲೀಲ ವಿಡಿಯೋ ಹರಿಬಿಡುವುದು ಸರಿಯಲ್ಲ

ಈ ಕುರಿತು ಸೋಮವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಹಾಸನದ ಸಂಸದ ಪ್ರಜ್ವಲ್ ರೇವಣ ಕರ್ಮ ಕಾಂಡಕ್ಕೆ ನೂರಾರು ಅಮಾಯಕ ಮಹಿಳೆಯರು ಬಲಿಯಾಗಿದ್ದಾರೆ ಎಂದು ಅವರು ಖಂಡಿಸಿದ್ದಾರೆ.

Prahlad Joshi Clarified about Prajwal Revanna Case won t Trouble Alliance Candidates

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಹರಿಬಿಡುವುದು ಸರಿಯಲ್ಲ. ಮಹಿಳೆಯರ ಹಿತ‌ ದೃಷ್ಟಿಯಿಂದ ಯಾರೂ ಬಿಡಬಾರದು ಎಂದರು. ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ನಾವು ಖಂಡಿಸಿದ್ದೇವೆ. ಆದರೆ ಕೆಲವು ನಾಯಕರು ಈ ಬಗ್ಗೆ ಮೌನ ವಹಿಸಿರುವುದು ಏಕೆ ಎಂದು ಅವರು ಪ್ರಶ್ನಿಸಿದರು.

ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಪ್ರಜ್ವಲ್ ರೇವಣ್ಣ ಅವರ ಕರ್ಮ ಕಾಂಡದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದರೆ ಅದು ಅವರ ಪಕ್ಷ ನೋಡಿಕೊಳ್ಳುತ್ತದೆ ಎಂದು ಹಾರಿಕೆ‌ ಉತ್ತರ ನೀಡಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದೆ. ನಿಮ್ಮ ಪಕ್ಷದ ನಿಲುವು ಏನು ಎಂದು ಅವರು ಕೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+