Prahlad Joshi: ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಕೇಂದ್ರ ಸಚಿವ, ಇಂದೇ ಸಭೆ
ಹುಬ್ಬಳ್ಳಿ, ಜೂನ್ 11: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಐದನೇ ಭಾರಿಗೆ ಗೆದ್ದು ದಾಖಲೆ ಬರೆದಿರುವ ಪ್ರಹ್ಲಾದ್ ಜೋಶಿಯವರಿಗೆ ಮತ್ತೊಮ್ಮ ಕೇಂದ್ರ ಸಚಿವ ಸ್ಥಾನ ಲಭಿಸಿದೆ. ಅವರು 'ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಹಾಗೂ ನವೀಕೃತ ಇಂಧನ' ಖಾತೆ ಹೊಣೆ ಹೊತ್ತಿರುವ ಅವರು ಇಂದು ಮಂಗಳವಾರ ಜವಾಬ್ದಾರಿ ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಅವರ ಕುಟುಂಬಸ್ಥರು, ಕೆಲವು ರಾಜಕಾರಣಗಳಿಗೆ ಅವರಿಗೆ ಶುಭ ಹಾರೈಸಿದ್ದಾರೆ.

ಮೊದಲು ಶ್ರೀಪಾದ ನಾಯಕ್ ಅವರಿಂದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಅಧಿಕಾರ ಪ್ರಹ್ಲಾದ್ ಜೋಸಿಯವರಿಗೆ ಹಸ್ತಾಂತರವಾಯಿತು.
ಇಂಧನದಲ್ಲಿ ಸ್ವಾವಲಂಬನೆ
ಅಧಿಕಾರ ವಹಿಸಿಕೊಂಡು ಪ್ರತಿಕ್ರಿಯಿಸಿದ ನೂತನ ನವೀಕೃತ ಇಂಧನ ಖಾತೆ ಸಚಿವ ಪ್ರಹ್ಲಾದ್ ಜೋಸಿಯವರು, 2047ರ ವೇಳೆಗೆ ಭಾರತ ಇಂಧನ ಸ್ವಾವಲಂಬನೆ ಸಾಧಿಸುವುದೇ ನಮ್ಮ ಸಂಕಲ್ಪವಾಗಿದೆ ಎಂದು ತಿಳಿಸಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಯೊಂದಿಗೆ ಹೊಸ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂದುವರಿಯುತ್ತೇವೆ ಎಂದು ಹೇಳಿದರು.

ಕೇಂದ್ರದ ನೂತನ ಸಚಿವ ಪಿಯೂಷ್ ಗೋಯಲ್ ಅವರಿಂದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಅಧಿಕಾರ ಜೋಶಿಯವರು ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಜನರಿಗೆ ಆಹಾರ ಭದ್ರತೆ ಖಾತರಿಪಡಿಸಲು ಬದ್ಧರಾಗಿದ್ದೇವೆ ಮತ್ತು ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ಕಚೇರಿ ಪೂಜೆಯಲ್ಲಿ ಕುಟುಂಬಸ್ಥರು ಭಾಗಿ
ಕೇಂದ್ರ ಸಚಿವರಾಗಿ ಎರಡನೇ ಇನ್ನಿಂಗ್ಸ್ ನಲ್ಲಿ ಹೊಸ ಖಾತೆಗಳ ಜವಾಬ್ದಾರಿ ಹೊತ್ತಿರುವ ಸಚಿವ ಪ್ರಹ್ಲಾದ್ ಜೋಶಿ ಅವರು ಇಂದು ಕಚೇರಿಯಲ್ಲಿ ತಮ್ಮ ಕುಟುಂಬ ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಲಕ್ಷ್ಮಿ ಪೂಜೆ ನೆರವೇರಿಸುವ ಮೂಲಕ ಕಾರ್ಯಾರಂಭ ಮಾಡಿದರು.
ಈ ಸುದಿನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪತ್ನಿ ಜ್ಯೋತಿ ಜೋಶಿ ಹಾಗೂ ಮಕ್ಕಳು ಅವರೆಲ್ಲ ಕೂಡಿಕೊಂಡು ಲಕ್ಷ್ಮಿ ಪೂಜೆ ಸಲ್ಲಿಸಿ ಸಚಿವರಿಗೆ ಶುಭ ಹಾರೈಸಿದರು.
ಮೊದಲ ದಿನವೇ ಉನ್ನತ ಅಧಿಕಾರಿಗಳ ಸಭೆ
ನೂತನ ಖಾತೆಗಳ ಅಧಿಕಾರ ವಹಿಸಿಕೊಂಡ ಬಳಿಕ ಸಚಿವ ಪ್ರಹ್ಲಾದ್ ಜೋಶಿಯವರು ಆಯಾ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಇಂದೇ ಮೊಲದ ಔಪಚಾರಿಕ ಸಭೆ ನಡೆಸಿದರು. ಒಂದಷ್ಟು ಮಾಹಿತಿ ಪಡೆದುಕೊಂಡರು. ಇದೇ ವೇಳೆ ಅಧಿಕಾರಿ ವರ್ಗ ಸಚಿವರನ್ನು ಅಭಿನಂದಿಸಿ ಖಾತೆಯ ನಿರ್ವಹಣೆಗೆ ಸ್ವಾಗತ ಕೋರಿದರು.












Click it and Unblock the Notifications