Hubballi Attack: ಎಚ್‌ಡಿ ಕುಮಾರಸ್ವಾಮಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ: ನಡೆದಿದ್ದೇನು?

ಹುಬ್ಬಳ್ಳಿ, ಏಪ್ರಿಲ್ 30: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿಯರು ಸಭೆ ನಡೆಸಿದ ಹುಬ್ಬಳ್ಳಿಯ ಹೋಟೆಲ್‌ ಮೇಲೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ಎಚ್‌ಡಿ ಕುಮಾರಸ್ವಾಮಿ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ. ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಯಿತು. ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ಇಂದು ನಡೆಯಿತು. ಜೆಡಿಎಸ್ ನಾಯಕ ಜಿಟಿ ದೇವೇಗೌಡ, ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

Prajwal Revanna Case Congress Workers Attack on HD Kumaraswamy at Hubballi

ಪೆನ್‌ಡ್ರೈವ್ ಪ್ರಕರಣದ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ, ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷಗಳ ವಿರುದ್ಧ ಕಿಡಿ ಕಾರುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸಭೆಯ ವಿಷಯ ತಿಳಿಯುತ್ತಿದ್ದಂತೆ ಹೋಟೆಲ್ ಮುಂದೆ ಜಮಾಯಿಸಿದರು.

ಮುತ್ತಿಗೆ ಯತ್ನ, ಘೋಷಣೆ: ಪೊಲೀಸ್ ತಡೆ, ವಾಗ್ವಾದ

ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಕುಮಾರಸ್ವಾಮಿ ಹೊರ ಬರುತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಯೇ ಇದ್ದ ಜೆಡಿಎಸ್ ಕಾರ್ಯಕರ್ತರು ಸಹ ಪ್ರತಿಯಾಗಿ ಘೋಷಣೆ ಕೂಗಿದರು.

ನೋಡ ನೋಡುತ್ತಿದ್ದಂತೆ ಕಾರ್ಯಕರ್ತರು ಜಮಾಯಿಸಿದರು. ಗಲಾಟೆ ಸಂಭವ ಕಂಡು ಅಲ್ಲಿಯೇ ಇದ್ದ ಪೊಲೀಸರು ಗುಂಪು ಚದುರಿಸಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರ ಮಧ್ಯೆಯು ವಾಗ್ವಾದ ನಡೆಯಿತು.

ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಗಲಾಟೆ ಹೆಚ್ಚಾಗುತ್ತಿದ್ದಂತೆ ವಾಹನ ಹತ್ತಿಸಿಕೊಂಡು ಪರಿಸ್ಥಿತಿ ನಿಯಂತ್ರಿಸಲಾಗಿದೆ. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+