Prajwal Revanna: ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ: ಕಾರ್ಯಕರ್ತರ ಆಕ್ರೋಶ, ಬಂಧನಕ್ಕೆ ಆಗ್ರಹ

ಹುಬ್ಬಳ್ಳಿ, ಏಪ್ರಿಲ್ 29: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಕುರಿತಂತೆ ಹುಬ್ಬಳ್ಳಿ, ಬೆಂಗಳೂರು, ಹಾಸನ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ನಾಯಕರು, ಮಹಿಳಾ ಘಕಗಳಿಂದ ಪ್ರತಿಭಟನೆ ನಡೆಯುತ್ತಿವೆ.

ಹುಬ್ಬಳ್ಳಿಯಲ್ಲಿ ಯವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೋಡ ನೋಡುತ್ತಿದ್ದಂತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಭುಗೆಲೆದ್ದಿತು.

Prajwal Revanna Case Protest By led Youth Congress President Mohammed Nalapad in Hubballi

ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಫೋಟೋ‌, ಪ್ರತಿಕೃತಿಗೆ ಬೆಂಕಿ ಇಟ್ಟರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜನರು, ಮಹಿಳೆಯರು ತಕ್ಕ ಉತ್ತರ ಕೊಡಬೇಕು

ಈ ವೇಳೆ ಮಾತನಾಡಿದ ಮೊಹಮ್ಮದ್ ನಲಪಾಡ್ ಹ್ಯಾರೀಸ್, ಅನೇಕ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇವರಿಗೆ ಕರ್ನಾಟಕದ ಜನತೆ ತಕ್ಕ ಉತ್ತರ ನೀಡಬೇಕು. ಇಂತಹ ಹೀನ ಕೃತ್ಯವನ್ನು ಕರ್ನಾಟಕದ ಅಕ್ಕ ತಂಗಿಯರು, ಮಹಿಳೆಯರು ಸಹಿಸಬಾರದು ಎಂದು ಹೇಳಿದರು.

ಬಹಿರಂಗವಾದ ವಿಡಿಯೋ ಕುರಿತು ಮಾತನಾಡಿದ ಅವರು, ಮನೆ ಕೆಲಸದವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅವರನ್ನು ಬೆದರಿಸಲಾಗಿದೆ. ಕೈ ಮುಗಿದರೂ ಬಿಡದೇ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ. ಸೂಕ್ತ ತನಿಖೆ ನಡೆಸಿ ಕೂಡಲೇ ಪ್ರಜ್ವಲ್ ರೇವಣ್ಣನನ್ನ ಬಂಧಿಸಬೇಕು ಎಂದು ಆಗ್ರಹಿಸಿದರು.

Prajwal Revanna Case Protest By led Youth Congress President Mohammed Nalapad in Hubballi

ಜೆಡಿಎಸ್ ಕುಟುಂಬಸ್ಥರ ಫೋಟೊ ಹಿಡಿದು ಪ್ರತಿಭಟನೆ

ಬೆಂಗಳೂರಿನ ಕೆಪಿಸಿಸಿ ಕಚೇರಿ, ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆಗಳು ನಡೆದಿವೆ. ಪ್ರಜ್ವಲ್ ರೇವಣ್ಣ, ರೇವಣ್ಣ, ಎಚ್‌ಡಿ ಕುಮಾರಸ್ವಾಮಿ ಅವರ ಫೋಟೋ, ನಾಮಫಲಕ ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ.

ಇಂತಹ ಕಾಮುಕನನ್ನು ಕೂಡಲೇ ಸರ್ಕಾರ ಬಂಧಿಸಬೇಕು. ಇಂತವರು ಸಮಾಜಕ್ಕೆ ಮಾರಕ ಎಂದೆಲ್ಲ ಧಿಕ್ಕಾರ ಘೋಷಣೆ ಕೂಗಿದ್ದಾರೆ. ನನ್ನ ಕೈಗೆ ಒಂದು ವೇಳೆ ಪ್ರಜ್ವಲ್ ರೇವಣ್ಣ ಸಿಕ್ಕರೆ ಕಲ್ಲೆಟಿನಿಂದ ಹೊಡೆದು ಕೊಲ್ಲುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರು ಕಿಡಿ ಕಾರಿದ್ದಾರೆ.

ಇಂದು ಎಸ್‌ಐಟಿಗೆ ತನಿಖೆ ಕಡತ ಹಸ್ತಾಂತರ

ಸದ್ಯ ಪ್ರಕರಣ ತನಿಖೆ ನಡೆಸಿರುವ ಕರ್ನಾಟಕ ಪೊಲೀಸರು ಸರ್ಕಾರ ಆದೇಶದ ಮೇರೆಗೆ ಎಸ್‌ಐಟಿ ತನಿಖೆಗೆ ಹಸ್ತಾಂತರಿಸಲಿದ್ದಾರೆ. ತನಿಖೆ ಕಡತ ವರದಿಗಳನ್ನು ಎಸ್‌ಐಟಿ ತನಿಖಾಧಿಕಾರಿಗಳಿಗೆ ನೀಡಲಿದ್ದಾರೆ.

ರಾಜ್ಯ ಸರ್ಕಾರ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌ಐಟಿಗೆ ವಹಿಸುತ್ತಿದ್ದಂತೆ ಹಾಸನ ಸಂಸದ ಪ್ರಜ್ವಲ ರೇವಣ್ಣ ಶನಿವಾರ ರಾತ್ರಿ ವಿದೇಶಕ್ಕೆ ತೆರಳಿದ್ದಾರೆ. ಸದ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ವಿರುದ್ಧ ಜನರು ಕೆಂಡ ಕಾರುತ್ತಿದ್ದಾರೆ. ಕಾಂಗ್ರೆಸ್ ಈ ವಿಷಯವನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+