ದರ್ಶನ್ ಮಾಡಿದ ತಪ್ಪಿಗೆ ಇಡೀ ಚಿತ್ರರಂಗ ಹೊಣೆ ಮಾಡಬಾರದು: ನೂತನ ಕೇಂದ್ರ ಸಚಿವ
ಹುಬ್ಬಳ್ಳಿ, ಜೂನ್ 15: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇತ್ತ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಬಿಎಸ್ ಯಡಿಯೂರಪ್ಪ ಪ್ರಕರಣಗಳು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿವೆ. ಈ ಕುರಿತು ಕೇಂದ್ರ ಸಚಿವರು ಮಹತ್ವದ ಮಾಹಿತಿ ನೀಡಿದ್ದಾರೆ.
ಯಾರೋ ಒಬ್ಬರು ತಪ್ಪು ಮಾಡಿದರೆ ಅದನ್ನ ಇಡೀ ಚಿತ್ರರಂಗಕ್ಕೆ ಹೊಣೆ ಮಾಡುವುದು ಬೇಡ. ನಮ್ಮ ಕನ್ನಡ ಚಿತ್ರರಂಗದಲ್ಲಿ ಅನೇಕ ಒಳ್ಳೆಯ ನಟರು ಸಹ ನಮ್ಮ ನಡುವೆ ಇದ್ದು ಹೋಗಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕನ್ನಡದ ನಟ ದರ್ಶನ್ ಅನ್ನು ಕೃಷಿ ರಾಯಭಾರಿ ಹಿಂದೆ ಮಾಡಲಾಗಿತ್ತು. ಚಿತ್ರರಂಗದಲ್ಲಿನ ನಟ ನಟಿಯರನ್ನು ಸರ್ಕಾರದ ರಾಯಭಾರಿಗಳಾಗಿ ನೇಮಕ ಮಾಡುವುದು ಎಷ್ಟು ಸರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಶನಿವಾರ ಹುಬ್ಬಳ್ಳಿಯಲ್ಲಿ ಉತ್ತರಿಸಿದರು.
ಚಿತ್ರರಂಗ ಹೊಣೆ ಮಾಡುವುದು ಬೇಡ
ಯಾರೋ ಒಬ್ಬರು ತಪ್ಪು ಮಾಡಿದರೆ ಅದನ್ನ ಇಡೀ ಚಿತ್ರರಂಗಕ್ಕೆ ಹೊಣೆ ಮಾಡುವುದು ಬೇಡ. ಅದು ಸರಿಯಲ್ಲ. ನಮ್ಮ ಕನ್ನಡ ಚಿತ್ರರಂಗದಲ್ಲಿ ಅನೇಕ ಒಳ್ಳೆಯ ನಟರು ಆಗಿ ಹೋಗಿದ್ದಾರೆ. ಇನ್ನೂ ಅನೇಕ ಒಳ್ಳೆಯ ನಟರು ಚಿತ್ರರಂಗದಲ್ಲಿದ್ದಾರೆ. ವರನಟ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್ ಮೇರು ನಟರ ಜೀವನ, ಬದುಕಿದ ರೀತಿ ಇಡೀ ದೇಶಕ್ಕೆ ಮಾದರಿ ಆಗಿದೆ ಎಂದು ತಿಳಿಸಿದರು.
ಇನ್ನೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಂಧನ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರವೇ ಇದರ ಹಿಂದಿನ ಸೋತ್ರದಾರಿ. ನ್ಯಾಯಾಲಯ ಸಹ ಸ್ಪಷ್ಟವಾಗಿ ಹೇಳಿದ್ದು ಬಿಎಸ್ ಯಡಿಯೂರಪ್ಪ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸುವುದು ತಪ್ಪು ಎಂದಿದೆ.

ಯಡಿಯೂರಪ್ಪ ವಿರುದ್ಧ ಪಕ್ಷದ ಮೇಲೆ 'ರಾಗಾ' ಒತ್ತಡ?
ಕಾಂಗ್ರೆಸ್‌ನ ರಾಹುಲ್ ಗಾಂಧಿ ಒತ್ತಡದ ಮೇಲೆ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರನ್ನು ಬಂಧಿಸಿ ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಬಿಎಸ್ ಯಡಿಯೂರಪ್ಪ ಅವರನ್ನು ಬಂಧನ ಮಾಡಬಾರದು ಎಂದು ಹೈಕೋರ್ಟ್ ತಕ್ಕ ಉತ್ತರ ಕೊಟ್ಟಿದೆ ಎಂದು ಅವರು ತಿಳಿಸಿದರು.
ಹಿಂದೂ ಕಾರ್ಯಕರ್ತನ ಹಲ್ಲೆ ಖಂಡನೀಯ
ಧಾರವಾಡದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇವಲ ಧಾರವಾಡ ಮಾತ್ರವಲ್ಲ ಇತ್ತೀಚಿನ ದಿನಗಳಲ್ಲಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ ದೌರ್ಜನ್ಯ ನಡೆಯುತ್ತಲೇ ಇದೆ. ಕರ್ನಾಟಕ ಒಂದು ರೀತಿಯಲ್ಲಿ ಇನ್ನೊಂದು ಕೋಮಿನವರಿಗೆ ಸುರಕ್ಷಿತ ಧಾಮ (Safe Haven) ಆಗಿದೆ ಎಂದು ಕುಟುಕಿದರು.
ಧಾರವಾಡದಲ್ಲಿ ದೇಶಿಯ ಗೋವುಗಳನ್ನು ಸಾಗಿಸಿಸುವ ಸಂದ ಪೊಲೀಸರಿಗೆ ಮಾಹಿತಿ ನೀಡಿದ್ದ ಆವಾಗ ಮುಸ್ಲಿಂ ಮತಾಂತರಿಗಳಿಗೆ ಗೋಂಡಾಗಳಿಗೆ ರಕ್ಷಣೆ ಕೊಡಬಾರದು. ಈ ಕುರಿತು ನಾನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಅವರಲ್ಲಿ ಒತ್ತಾಯ ಮಾಡುತ್ತೇನೆ. ತಪ್ಪಿತಸ್ಥರು ಯಾರು ಅವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications