ರಮೇಶ್ ಜಾರಕಿಹೊಳಿ "ಸಿಡಿ" ಬಾಂಬ್ ಪ್ರಕರಣ; ಸಂಸದ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ
ಹುಬ್ಬಳ್ಳಿ, ಮಾರ್ಚ್.02: ಕರ್ನಾಟಕದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ವರಿಷ್ಠರಿಗೆ ಮಾಹಿತಿ ನೀಡಲಾಗುವುದು ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಘಟನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುತ್ತದೆ ಎಂದರು.
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಯನ್ನು ಮಾಧ್ಯಮಗಳಲ್ಲಿ ವೀಕ್ಷಿಸಿದ್ದೇನೆ. ತಪ್ಪು ಮಾಡಿದ್ದು ನಿಜವಾಗಿದ್ದರೆ ಖಂಡಿತವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಏನಿದು ರಾಸಲೀಲೆ ಪ್ರಕರಣ:
ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ವಯಸ್ಕ ಮಹಿಳೆಗೆ ಕೆಪಿಟಿಸಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ರಾಸಲೀಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ವಿಡಿಯೋ ಬಿಡುಗಡೆಗೊಳಿಸಲಾಗಿದೆ. ಖಾಸಗಿ ಹೋಟೆಲ್ ವೊಂದರಲ್ಲಿ ಸಚಿವರು ನಡೆಸಿದ ರಾಸಲೀಲೆಗೆ ಸಂಬಂಧಿಸಿದ ವಿಡಿಯೋ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರವೇ ತಲೆ ತಗ್ಗಿಸುವಂಥ ಘಟನೆ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಚಿವರ ರಾಜೀನಾಮೆ ಕೂಗು ಕೇಳಿ ಬರುತ್ತಿದೆ.












Click it and Unblock the Notifications