ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾಣಿಜ್ಯ ನಗರಿ ಹುಬ್ಬಳ್ಳಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್‌, 19: ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ದ್ರೌಪದಿ‌ ಮುರ್ಮು ಅವರು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಅವರು ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿ ಧಾರವಾಡ ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಬಾರಿ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಆಗಮಿಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಾಣಿಜ್ಯ ನಗರಿ‌ ಹುಬ್ಬಳ್ಳಿಗೂ ಭೇಟಿ ನೀಡಲಿದ್ದಾರೆ.

ಇದುವರೆಗೂ ಯಾರೆಲ್ಲಾ ಮೈಸೂರು ದಸರಾ ಉದ್ಘಾಟನೆ ಮಾಡಿದ್ದಾರೆ; ಇಲ್ಲಿದೆ ಮಾಹಿತಿಇದುವರೆಗೂ ಯಾರೆಲ್ಲಾ ಮೈಸೂರು ದಸರಾ ಉದ್ಘಾಟನೆ ಮಾಡಿದ್ದಾರೆ; ಇಲ್ಲಿದೆ ಮಾಹಿತಿ

ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ.‌ ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 ಕೆ.ಜಿ ಬೆಳ್ಳಿಯ ಮೂರ್ತಿಯನ್ನು ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಜಿಮ್‌ ಖಾನಾ ಮೈದಾನದಲ್ಲಿ‌ 70 ನಿಮಿಷಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಂದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಪೌರಸನ್ಮಾನ ಕಾರ್ಯಕ್ರಮದಲ್ಲಿ 5 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. 500 ಜನ ಪೌರ ಕಾರ್ಮಿಕರಿಗೆ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಧಾರವಾಡ ಐಐಟಿಗೆ ಭೇಟಿ ನೀಡಿ 400 ವಿದ್ಯಾರ್ಥಿಗಳ ಜೊತೆಗೆ ಅವರು ಸಂವಾದ ನಡೆಸಲಿದ್ದಾರೆ ಎಂದರು.

President Draupadi Murmu will visit Hubballi on sep 26th

ಇನ್ನೂ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹುಬ್ಬಳ್ಳಿಗೆ ಭೇಡಿ ನೀಡಲಿದ್ದು, ಇವರು ಹುಬ್ಬಳ್ಳಿಗೆ ಭೇಟಿ ನೀಡಲಿರುವ ಮೂರನೇ ರಾಷ್ಟ್ರಪತಿಗಳಾಗಿದ್ದಾರೆ. ಈ ಹಿಂದೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಡಾ. ಎ.ಪಿ.ಜೆ ಅಬ್ದುಲ್‌ ಕಲಾಂ ಅವರು ಭೇಟಿ ನೀಡಿದ್ದರು.

ದಸರಾ ಉದ್ಘಾಟನೆಗೆ ಆಗಮಿಸಲಿರುವ ರಾಷ್ಟ್ರಪತಿ
2022ರ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿ ಆಗಲಿದ್ದಾರೆ. ಆದ್ದರಿಂದ ಮೊದಲ ದಿನದ ಆಹ್ವಾನ ಪತ್ರಿಕೆ ಇಂಗ್ಲಿಷ್​ನಲ್ಲಿ ಮುದ್ರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದರು. ಮೈಸೂರಿನಲ್ಲಿ ಮಾತನಾಡಿದ ಅವರು ರೈತ ಹಾಗೂ ಗ್ರಾಮೀಣ ದಸರಾ ಸೆಪ್ಟೆಂಬರ್‌ 23ಕ್ಕೆ ಆರಂಭಗೊಂಡು‌ 25ಕ್ಕೆ ಅಂತ್ಯ ಆಗಲಿದೆ. ಇದನ್ನು ಕೃಷಿ ಸಚಿವ ಬಿ.ಸಿ ಪಾಟೀಲ್ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದ್ದರು.

President Draupadi Murmu will visit Hubballi on sep 26th

ರಾಷ್ಟ್ರಪತಿ ಕಚೇರಿಗೆ ಗಣ್ಯರ ಪಟ್ಟಿ ರವಾನೆ:
ಹಿಂದಿನ ವರ್ಷಗಳಲ್ಲಿದ್ದಂತೆ ದಸರಾ ಉದ್ಘಾಟನಾ ಸಮಾರಂಭ ವೇದಿಕೆಯಲ್ಲಿ ಉಪಸ್ಥಿತರಿರಬಹುದಾದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಶಾಸಕರು, ಸಂಸದರು, ಸಂಬಂಧಿಸಿದ ಇಲಾಖೆ ಸಚಿವರು, ಮೇಯರ್, ಕಾರ್ಪೊರೇಟರ್ಗಳು, ಅಧಿಕಾರಿಗಳು ಸೇರಿದಂತೆ ಒಟ್ಟು 49 ಗಣ್ಯರ ಪಟ್ಟಿಯನ್ನು ರಾಷ್ಟ್ರಪತಿ ಕಚೇರಿಗೆ ಕಳುಹಿಸಲಾಗಿದೆ. ವೇದಿಕೆಯಲ್ಲಿ ಯಾರಿಗೆ ಅವಕಾಶ ಕಲ್ಪಿಸಬೇಕು ಎಂಬುದನ್ನು ರಾಷ್ಟ್ರಪತಿ ಕಚೇರಿಯಿಂದಲೇ ನಿರ್ದೇಶನ ನೀಡಲಾಗುತ್ತದೆ. ಒಂದು ವೇಳೆ ವೇದಿಕೆಯಲ್ಲಿ ಎಲ್ಲರಿಗೂ ಅವಕಾಶ ಇಲ್ಲವಾದರೆ ಮುಂಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗುವುದು. ಆ ದಿನ ಸಾರ್ವಜನಿಕರಿಗೆ ನಿರ್ಬಂಧವಿರುವುದಿಲ್ಲ. ಹಾಗಾಗಿ ಇನ್ನೂ 2 ಸಾವಿರ ಆಸನ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ದೀಪಾಲಂಕರದಲ್ಲೂ ಮೂಡಲಿರುವ ಅಪ್ಪು:
ದಸರಾ ವಸ್ತು ಪ್ರದರ್ಶನದಲ್ಲಿ ಮರಳಿನಲ್ಲಿ ಪುನೀತ್ ರಾಜ್‌ಕುಮಾರ್ ಅವರ ಆಕೃತಿ ನಿರ್ಮಿಸಲಾಗಿದೆ. ವಿದ್ಯುತ್ ದೀಪಾಲಂಕಾರದಲ್ಲೂ ಅಪ್ಪು ಅವರ ಆಕೃತಿ ಸೃಷ್ಟಿ ಆಗಲಿದೆ. ಸೆಪ್ಟೆಂಬರ್ 27ರಿಂದ ಯುವ ದಸರಾ ಆರಂಭವಾಗಲಿದ್ದು, ಅಕ್ಟೋಬರ್ 1ರಂದು ನಟ ಪುನೀತ್ ರಾಜ್ ಕು‌ಮಾರ್ ಹಾಡಿರುವ ಹಾಗೂ ಅಭಿನಯಿಸಿರುವ ಗೀತ ಗಾಯನ ನಡೆಯಲಿದೆ. ಇನ್ನು ದಸರಾ ಚಲನಚಿತ್ರೋತ್ಸವದಲ್ಲಿ ಸೆಪ್ಟೆಂಬರ್ 27ರಂದು ಅಪ್ಪು ಅಭಿನಯದ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ಇದನ್ನು ಅವರ ಪತ್ನಿ ಅಶ್ವಿನಿ ಅವರು ಉದ್ಘಾಟನೆ ನೆರವೇರಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

English summary
President Draupadi Murmu will visit Hubballi on September 26th, Hubballi-Dharwad Metropolitan Corporation Mayor Eresh Anchatageri informed. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X