ಹುಬ್ಬಳ್ಳಿ: ಖಾಸಗಿ ಬಸ್‌ ಬೆಂಕಿಗಾಹುತಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹುಬ್ಬಳ್ಳಿಯ ಪೂನಾ -ಬೆಂಗಳೂರು ಹೆದ್ದಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಕಾರಣ ಖಾಸಗಿ ಬಸ್‌ ಸುಟ್ಟು ಕರಕಲಾಗಿದ್ದು, ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಹುಬ್ಬಳ್ಳಿ, ಫೆಬ್ರವರಿ, 28: ಹುಬ್ಬಳ್ಳಿಯಲ್ಲಿನ ಪೂನಾ -ಬೆಂಗಳೂರು ಹೆದ್ದಾರಿಯಲ್ಲಿ ಹೊರಟಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಇದರ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಬೆಂಗಳೂರಿನಿಂದ ಅಥಣಿಗೆ ಹೊರಟಿದ್ದ ವಿಆರ್‌ಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ನಲ್ಲಿ 20 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನ ಹಿಂಬದಿಯ ಚಕ್ರಕ್ಕೆ ಏಕಾಏಕಿ ಹೊತ್ತಿಕೊಂಡಿದ್ದು, ಈ ಬೆಂಕಿ ಇಡೀ ಬಸ್ಸನ್ನೇ ಆವರಿಸಿಕೊಂಡಿದೆ. ತಕ್ಷಣವೇ ಚಾಲಕ ಬೆಂಕಿ ಹೊತ್ತಿರುವುದನ್ನು ಗಮನಿಸಿ ಬಸ್ ನಿಲ್ಲಿಸಿದ್ದು, ಪ್ರಯಾಣಿಕರೆಲ್ಲರನ್ನು ಕೆಳಗಡೆ ಇಳಿಸಿದ್ದಾನೆ.

Private bus caught fire in hubballi

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ
ಅಷ್ಟೇ ಅಲ್ಲದೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆಗಲೇ ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಕ್ರೋಶಗೊಂಡ ಎಸ್‌ಸಿ ಸಮುದಾಯ
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಶ್ಮಶಾನ ಭೂಮಿಯನ್ನು ಅದೇ ಗ್ರಾಮದ ಖಾಸಗಿ ವ್ಯಕ್ತಿ ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಪರಿಶಿಷ್ಟ ಜಾತಿ ಸಮುದಾಯದವರೆಲ್ಲ ಒಟ್ಟಾಗಿ ದಿಢೀರ್ ಶ್ಮಶಾನ ಜಮೀನಿನಲ್ಲೇ ಪ್ರತಿಭಟನೆ ನಡೆಸಿದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಜರುಗಿದೆ.

Private bus caught fire in hubballi

ಸೋಮವಾರ (ಫೆಬ್ರವರಿ 28) ಬೆಳಗಿನ ಅವಧಿಯಲ್ಲಿ ಹಿರೇಹರಕುಣಿ ಗ್ರಾಮದ ಪರಿಶಿಷ್ಟ ಜಾತಿ ಶ್ಮಶಾನ ಜಮೀನಿನಲ್ಲಿನ ಮಣ್ಣಿನ ದಿಬ್ಬವನ್ನು ಅದೇ ಗ್ರಾಮದ ಖಾಸಗಿ ಜಮೀನಿನ ಮಾಲೀಕರು ಒತ್ತುವರಿ ಮಾಡುತ್ತಿದ್ದಾರೆ. ಇದರಿಂದ ಆಕ್ರೋಶ ಗೊಂಡ ಸಮುದಾಯದವರು ನಮ್ಮ ಜಾಗ ನಮಗೆ ಬಿಟ್ಟು ಕೊಡಿ ಎಂದು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+