ವೈದ್ಯರ ಮುಷ್ಕರದಿಂದಾಗಿ ಚಿಕಿತ್ಸೆ ಸಿಗದೆ ಜಗದೀಶ್ ಶೆಟ್ಟರ್ ಆಪ್ತ ಸಾವು
ಹುಬ್ಬಳ್ಳಿ, ನವೆಂಬರ್ 16: ವೈದ್ಯರ ಮುಷ್ಕರದಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭಿಸದೆ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚನ್ನಬಸಪ್ಪ ಹಳಿಯಾಳ (44) ಹೃದಯಾಘಾತದಿಂದ ಬುಧವಾರ ಸಂಜೆ ಸಾವನ್ನಪ್ಪಿದ್ದಾರೆ.
ಚನ್ನಬಸಪ್ಪ ಹಳಿಯಾಳ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ದೇಶಪಾಂಡೆನಗರದ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದರು. ನಂತರ ಕಿಮ್ಸ್ ಗೆ ಆಸ್ಪತ್ರೆಗೆ ದಾಖಲು ಮಾಡಲು ಕರೆದೊಯ್ಯಲಾಗುತ್ತಿದ್ದಂತೆ ಮಾರ್ಗ ಮಧ್ಯೆ ಕೊನೆಯುಸಿರೆಳೆದರು.

ಚನ್ನಬಸಪ್ಪ ಹಳಿಯಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪ್ತರಾಗಿದ್ದರು. ಜಗದೀಶ್ ಶೆಟ್ಟರ್ ಸ್ಪರ್ಧಿಸುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಬಿಜೆಪಿ ಪಕ್ಷ ಬಲವರ್ಧನೆ ಸಾಕಷ್ಟು ಶ್ರಮಿಸುತ್ತಿದ್ದರು.












Click it and Unblock the Notifications