ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕಿಸ್ತಾನದ ಪರ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 15: ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆ.ಎಲ್.ಇ ಕಾಲೇಜು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣವನ್ನು ಹುಬ್ಬಳ್ಳಿ ಪೊಲೀಸರು ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ಮೂವರು ಕಾಶ್ಮೀರಿ ಯುವಕರು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರ ವಿರುದ್ಧ ಕಾಲೇಜಿನ ಪ್ರಾಂಶುಪಾಲರೇ ಪೊಲೀಸರಿಗೆ ದೂರು ನೀಡಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಮೂರೂ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಬಂಧನದ ವೇಳೆ ಕೆಲವರು ಹಿಂದೂಪರ ಸಂಘಟನೆಯರು ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನೂ ಮಾಡಿದರು.

Pro Pakistan Post: Sedition Case Against Kashmiri Students

ಪ್ರಕರಣದ ಬಗ್ಗೆ ಮಾತನಾಡಿದ ಹುಬ್ಬಳ್ಳಿ ಪೊಲೀಸ್ ಆಯುಕ್ತ ದಿಲೀಪ್ ಅವರು, 'ಬಂಧಿತರನ್ನು ವಿಚಾರಣೆ ಒಳಪಡಿಸಲಾಗುವುದು. ಇವರು ಯಾವುದಾದರೂ ಸಂಘಟನೆಗೆ ಸೇರಿದವರೇ, ಇಂಥಹವರು ಇವರೊಂದಿಗೆ ಇನ್ನೂ ಇದ್ದಾರೆಯೇ? ಇನ್ನೂ ಹಲವು ವಿಷಯಗಳ ತನಿಖೆ ಆಗಬೇಕಿದೆ' ಎಂದಿದ್ದಾರೆ.

ಬಂಧಿತರಿಂದ ಮೊಬೈಲ್, ಲ್ಯಾಪ್‌ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ತನಿಖೆ ನಂತರ ಇನ್ನಷ್ಟು ಮಾಹಿತಿ ಹಂಚಿಕೊಳ್ಳುತ್ತೇವೆ' ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆ ಬಳಿ ಸೇರಿದ ಹಿಂದೂಪರ ಸಂಘಟನೆ ಕಾರ್ಯಕರ್ತರು, ಬಂಧಿತರನ್ನು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

English summary
Three Kashmiri students arrested in Hubli for posting social media post in which they said pro Pakistan slogans.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X