• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ; ಇನ್ಸ್‌ಪೆಕ್ಟರ್ ಅಮಾನತು

|

ಹುಬ್ಬಳ್ಳಿ, ಜೂನ್ 12 : ಹುಬ್ಬಳ್ಳಿಯಲ್ಲಿ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರವಾಗಿ ಘೋಷಣೆಗಳನ್ನು ಕೂಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾ ಅಮಾನತು ಮಾಡಲಾಗಿದೆ.

ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ವಿಳಂಬ ಮಾಡಿದ ಕಾರಣಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ. 2020ರ ಫೆಬ್ರವರಿ 14ರಂದು ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಘೋಷಣೆ ಕೂಗಿದ್ದರು.

ಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆ

ಯಾವುದೇ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು 90 ದಿನದ ಅವಕಾಶ ಇರುತ್ತದೆ. ಆದರೆ, ಚಾರ್ಜ್ ಶೀಟ್ ಸಲ್ಲಿಕೆ ಮಾಡದ ಕಾರಣ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪಾಕ್ ಪರ ಘೋಷಣೆ; ಹಿಂಡಲಗಾ ಜೈಲು ಅಂಧೇರಿ ಸೆಲ್‌ಗೆ ವಿದ್ಯಾರ್ಥಿಗಳು

ಫೆಬ್ರವರಿ 14ರಂದು ಪುಲ್ವಮಾ ದಾಳಿ ನಡೆದು ವರ್ಷ ಪೂರೈಸಿದ ಸಂದರ್ಭದಲ್ಲಿ ಕೆಎಲ್‌ಇ ಕಾಲೇಜಿನಲ್ಲಿ ಹುತಾತ್ಮ ಯೋಧರನ್ನು ಸ್ಮರಿಸಲು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಾಪಸ್ ಪಡೆದ ಅಮೂಲ್ಯ

ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲೀಬ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಪಾಕ್ ಸೇನೆಯ ಹಾಡಿಗೆ ನೃತ್ಯ ಮಾಡಿದ್ದರು. ಪಾಕಿಸ್ತಾನ ಪರವಾದ ಘೋಷಣೆಗಳನ್ನು ಕೂಗಿದ್ದರು. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.

ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆದ ಬಳಿಕ ವಿದ್ಯಾರ್ಥಿಗಳನ್ನು ಸೆಕ್ಷನ್ 169ರ ಅಡಿ ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿತ್ತು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಬಳಿಕ ಗೋಕುಲ ಠಾಣೆ ಪೊಲೀಸರು ವಿದ್ಯಾರ್ಥಿಗಳನ್ನು ಪುನಃ ಬಂಧಿಸಿದ್ದರು. ಅವರು ಹುಬ್ಬಳ್ಳಿ ಜೈಲಿನಲ್ಲಿದ್ದರೆ ಹಲ್ಲೆ ನಡೆಯಬಹುದೆಂದು ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿತ್ತು.

English summary
Hubli rural police station inspector has been suspended for delaying the submission of the charge sheet in the case of pro Pakistan slogan by three Kashmiri students in the month of February 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X