ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕಿಸ್ತಾನ ಪರ ಘೋಷಣೆ; ಹುಬ್ಬಳ್ಳಿಯ ವಿದ್ಯಾರ್ಥಿಗಳು ಬಿಡುಗಡೆ

|
Google Oneindia Kannada News

ಹುಬ್ಬಳ್ಳಿ, ಫೆಬ್ರವರಿ 16: ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ. ಪಾಕ್ ಪರವಾಗಿ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿತ್ತು.

ಶನಿವಾರ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು. ಪೊಲೀಸರು ವಿಚಾರಣೆ ನಡೆಸಿದ ಬಳಿಕ ಭಾನುವಾರ ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಪಾಕಿಸ್ತಾನದ ಪರ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣಪಾಕಿಸ್ತಾನದ ಪರ ಘೋಷಣೆ: ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ

ಹುಬ್ಬಳ್ಳಿಯ ಕೆಎಲ್‌ಇ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕ್ ಪರವಾಗಿ ಘೋಷಣೆ ಕೂಗಿದ್ದರು. ಆ ವಿಡಿಯೋವನ್ನು ಸಾಮಾಜಿಕ ತಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.

ಪಾಕಿಸ್ತಾನ ತೊರೆದು ಭಾರತಕ್ಕೆ ನಡೆದು ಬಂದ ನೂರಾರು ಹಿಂದು ಕುಟುಂಬಗಳುಪಾಕಿಸ್ತಾನ ತೊರೆದು ಭಾರತಕ್ಕೆ ನಡೆದು ಬಂದ ನೂರಾರು ಹಿಂದು ಕುಟುಂಬಗಳು

Pro Pakistan Slogans Hubballi Students Released

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಸೆಕ್ಷನ್ 169 ಅಡಿ ವಿದ್ಯಾರ್ಥಿಗಳಿಂದ ಮುಚ್ಚಳಿಕೆ ಬರೆಸಿಕೊಂಡು, ವಿಚಾರಣೆಗೆ ಕರೆದಾಗ ಬರಬೇಕು ಎಂಬ ಷರತ್ತಿನ ಅನ್ವಯ ಬಿಡುಗಡೆ ಮಾಡಿದ್ದಾರೆ. ವಿದ್ಯಾರ್ಥಿಗಳ ವಿರುದ್ಧ ಕಾಲೇಜಿನ ಪ್ರಿನ್ಸಿಪಲ್ ದೂರು ಕೊಟ್ಟಿದ್ದರು.

ಭಾರತ-ಪಾಕಿಸ್ತಾನ ಕದನ ಟ್ವೀಟ್, ಕಪಿಲ್ ವಿರುದ್ಧ ಎಫ್ಐಆರ್ ಭಾರತ-ಪಾಕಿಸ್ತಾನ ಕದನ ಟ್ವೀಟ್, ಕಪಿಲ್ ವಿರುದ್ಧ ಎಫ್ಐಆರ್

ಫೆಬ್ರವರಿ 14ರಂದು ಪುಲ್ವಮಾ ದಾಳಿ ನಡೆದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಹುತಾತ್ಮರನ್ನು ಸ್ಮರಿಸಲಾಗಿತ್ತು. ಆದರೆ, ವಿದ್ಯಾರ್ಥಿಗಳಾದ ಅಮೀರ್, ಬಾಸಿತ್, ತಾಲೀಬ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಪಾಕ್ ಸೇನೆಯ ಹಾಡಿಗೆ ಧ್ವನಿ ಗೂಡಿಸಿದ್ದರು. ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು.

ಗೋಕುಲ ಠಾಣೆ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದರು. ಪಾಕ್ ಪರ ಘೋಷಣೆ ಕೂಗಿದ್ದ ವಿಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

English summary
Police released Kashmiri students who studying at Hubballi KLE Institute of Technology. Students arrested after they raising pro-Pakistani slogan along with a song hailing Pakistan in the background.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X