ಪಾಕಿಸ್ತಾನ ಪರ ಘೋಷಣೆ ; ಜಾಮೀನು ಅರ್ಜಿ ತೀರ್ಪು ಮಾರ್ಚ್ 9ಕ್ಕೆ

ಹುಬ್ಬಳ್ಳಿ, ಮಾರ್ಚ್ 06 : ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಎಲ್ಲಾ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

ಹುಬ್ಬಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ. ಎನ್. ಗಂಗಾಧರ ಅವರು ಗುರುವಾರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದರು. ಮಾರ್ಚ್ 9ಕ್ಕೆ ಆದೇಶವನ್ನು ಕಾಯ್ದಿರಿಸಿದರು.

ಹುಬ್ಬಳ್ಳಿ ಕೆಎಲ್‌ಇ ಇಂಜಿನಿಯರಿಗ್ ಕಾಲೇಜಿನ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲಿಬ್ ಮಜೀದ್ ಮತ್ತು ಬಾಸಿತ್ ಸೋಫಿ ವಿರುದ್ಧ ದೇಶದ್ರೋಹದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಲ್ಲಾ ಆರೋಪಿಗಳು ಬೆಳಗಾವಿ ಜೈಲಿನಲ್ಲಿದ್ದಾರೆ.

Pro Pakistani Slogan Court Reserves Order On Bail Petition

ಆರೋಪಿಗಳ ಪರ ವಕಾಲತ್ತು ವಹಿಸುವ ವಿಚಾರವೇ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ವಕಾಲತ್ತು ವಹಿಸಲು ಬೆಂಗಳೂರಿನಿಂದ ಬಂದ ವಕೀಲರ ಮೇಲೆ ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ಪ್ರಸ್ತುತ ವಕೀಲ ಬಿ. ಟಿ. ವೆಂಕಟೇಶ ನೇತೃತ್ವದ ವಕೀಲರ ತಂಡ ಆರೋಪಿಗಳ ಪರವಾದ ಮಾಡಿದೆ.

ವಕಾಲತ್ತು ವಹಿಸುವ ವಿಚಾರದಲ್ಲಿ ವಿವಾದ ಉಂಟಾದಾಗ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಆರೋಪಿಗಳ ಪರ ವಾದಿಸುವ ವಕೀಲರಿಗೆ ತೊಂದರೆ ನೀಡಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+