ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕಿಸ್ತಾನ ಪರ ಘೋಷಣೆ; ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಇಲ್ಲ

|
Google Oneindia Kannada News

ಹುಬ್ಬಳ್ಳಿ, ಮಾರ್ಚ್ 09 : ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹುಬ್ಬಳ್ಳಿ ಕೆಎಲ್‌ಇ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.

ಹುಬ್ಬಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ. ಗಂಗಾಧರ ಅವರು ಸೋಮವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಗುರುವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

ಪಾಕ್ ಪರ ಘೋಷಣೆ ಪ್ರಕರಣ: ಹುಬ್ಬಳ್ಳಿ ವಿದ್ಯಾರ್ಥಿಗಳು ಪೊಲೀಸ್ ಕಸ್ಟಡಿಗೆ ಪಾಕ್ ಪರ ಘೋಷಣೆ ಪ್ರಕರಣ: ಹುಬ್ಬಳ್ಳಿ ವಿದ್ಯಾರ್ಥಿಗಳು ಪೊಲೀಸ್ ಕಸ್ಟಡಿಗೆ

Pro Pakistani Slogan Kashmiri Students Bail Application Rejected

ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲಿಬ್ ಮಜೀದ್ ಮತ್ತು ಬಾಸಿತ್ ಸೋಫಿ ವಿರುದ್ಧ ದೇಶದ್ರೋಹದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಲ್ಲಾ ಆರೋಪಿಗಳು ಹಿಂಡಲಗಾ ಜೈಲಿನಲ್ಲಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.

ಪಾಕಿಸ್ತಾನ ಪರ ಘೋಷಣೆ: ಅರುದ್ರಾ ಪೋಷಕರಿಗೆ ಆಘಾತಪಾಕಿಸ್ತಾನ ಪರ ಘೋಷಣೆ: ಅರುದ್ರಾ ಪೋಷಕರಿಗೆ ಆಘಾತ

ಆರೋಪಿಗಳ ಪರವಾಗಿ ಬೆಂಗಳೂರಿನ ಬಿ. ಟಿ. ವೆಂಕಟೇಶ ನೇತೃತ್ವದ ವಕೀಲರ ತಂಡ ವಾದ ಮಂಡನೆ ಮಾಡಿತ್ತು. ಆರೋಪಿಗಳ ಪರ ವಕಾಲತ್ತು ವಹಿಸುವ ವಿಚಾರದಲ್ಲಿಯೇ ದೊಡ್ಡ ವಿವಾದವಾಗಿತ್ತು. ಬೆಂಗಳೂರಿನಿಂದ ವಕಾಲತ್ತು ವಹಿಸಲು ಬಂದ ವಕೀಲರ ಮೇಲೆ ಕಲ್ಲು ತೂರಾಟ ನಡೆದಿತ್ತು.

ಪಾಕಿಸ್ತಾನ ಪರ ಅಮೂಲ್ಯ ಲಿಯೋನಾ ಘೋಷಣೆ: ಯಾರು, ಏನು ಹೇಳಿದರು?ಪಾಕಿಸ್ತಾನ ಪರ ಅಮೂಲ್ಯ ಲಿಯೋನಾ ಘೋಷಣೆ: ಯಾರು, ಏನು ಹೇಳಿದರು?

ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳನ್ನು ಹುಬ್ಬಳ್ಳಿ ಕೆಎಲ್‌ಇ ಕಾಲೇಜು ವಜಾಗೊಳಿಸಿತ್ತು. ಮೊದಲು ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ವಿದ್ಯಾರ್ಥಿಗಳನ್ನು ಇಡಲಾಗಿತ್ತು. ಬಳಿಕ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

English summary
Hubballi session court rejected bail petition of three Kashmiri students who raised pro-Pakistani slogan in Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X