ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಮಸಾಲಿ ಮೀಸಲಾತಿ: ಅ.1ರಿಂದ ಮತ್ತೆ ಸತ್ಯಾಗ್ರಹದ ಎಚ್ಚರಿಕೆ

|
Google Oneindia Kannada News

ಹುಬ್ಬಳ್ಳಿ, ಆಗಸ್ಟ್ 12: "ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಕಳೆದ ವಿಧಾನಸಭೆ ಅಧಿವೇಶನದಲ್ಲಿಯೇ ಭರವಸೆ ನೀಡಿದ್ದರು."

"ಇದೀಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು, ಕೂಡಲೇ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿಗೆ ಶಿಫಾರಸು ಮಾಡಬೇಕು," ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ಹುಬ್ಬಳ್ಳಿ ನಗರದ ಖಾಸಗಿ ಹೊಟೆಲ್‌ನಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಚಳುವಳಿಗಾರರ ಮಹತ್ವದ ದುಂಡು ಮೇಜಿನ ಸಭೆಯ ಬಳಿಕ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, "ಈ ಹಿಂದೆ ಸರ್ಕಾರ ಆರು ತಿಂಗಳ ಸಮಯ ಕೇಳಿದ್ದರು. ಆ ಗಡುವು ಸೆ.15ಕ್ಕೆ ಮುಗಿಯಲಿದೆ," ಎಂದರು.

Panchamasaali Lingayat Reservation: Warning Of Protest Again From Actober 1st

"ಈ ಹಿನ್ನೆಲೆಯಲ್ಲಿ ಸಿಎಂ ‍ಬಸವರಾಜ ಬೊಮ್ಮಾಯಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಹಾಗೂ ಲಿಂಗಾಯತ ಸಮುದಾಯಗಳಿಗೆ ಇತರೆ ಹಿಂದುಳಿದ ವರ್ಗಗಳ ಮೀಸಲಾತಿಗೆ ಶಿಫಾರಸು ಮಾಡಿ ಸರ್ಕಾರ ನುಡಿದಂತೆ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದುಂಡು ಮೇಜಿನ ಸಭೆ ನಡೆಸಲಾಗಿದೆ. ಸಭೆ ಯಶಸ್ವಿಗೊಂಡಿದ್ದು, ಪ್ರಮುಖ ಐದು ನಿರ್ಣಯ ಕೈಗೊಳ್ಳಲಾಗಿದೆ," ಎಂದರು.

"ಸರ್ಕಾರ ಸೆ.15ರ ಒಳಗೆ ಬೇಡಿಕೆ ಈಡೇರದಿದ್ದರೆ ಅ.1ರಿಂದ ಧರಣಿ ಸತ್ಯಾಗ್ರಹ ಮತ್ತೆ ಮುಂದುವರಿಯಲಿದೆ. ''ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್'' ಧ್ಯೇಯವಾಕ್ಯದಡಿ ಇಷ್ಟಲಿಂಗ ಪೂಜೆ ಮೂಲಕ ಜನಜಾಗೃತಿ ಹಮ್ಮಿಕೊಳ್ಳಲಾಗಿದೆ. ಇದು ಬೀದರ್‌ನಿಂದ ಮಲೆಮಹದೇಶ್ವರ ಬೆಟ್ಟದವರೆಗೆ ನಡೆಯಲಿದೆ," ಎಂದು ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.‌

ಹುನಗುಂದ ಮಾಜಿ ಶಾಸಕ ಹಾಗೂ ಪಂಚಮಸಾಲಿ ಲಿಂಗಾಯತ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮಾತನಾಡಿ, "ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೇಲೆ ವಿಶ್ವಾಸವಿದ್ದು, ಬಿಜೆಪಿ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿ ತಮ್ಮ ಮಾತು ಉಳಿಸಿಕೊಳ್ಳಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯವಾಗಲಿದೆ."

Panchamasaali Lingayat Reservation: Warning Of Protest Again From Actober 1st

"ಮೀಸಲಾತಿಗಾಗಿ ಆಗ್ರಹಿಸಿ ಈ ಹಿಂದೆ 10 ಲಕ್ಷ ಜನರನ್ನು ಸೇರಿಸಿ ಹೋರಾಟ ಮಾಡಲಾಗಿದೆ. ಬೇಡಿಕೆ ಈಡೇರದಿದ್ದರೆ ಮುಂದೆ 20 ಲಕ್ಷ ಜನರನ್ನು ಸೇರಿಸಿ ಹೋರಾಟ ಮಾಡಬೇಕಾಗುವುದು," ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಸವರಾಜ ಭೂತೆ, ಗಣೇಶ ಪಾಟೀಲ, ದಿನೇಶ ಪಾಟೀಲ, ವೀರೇಶ ಉಂಡಿ ಸೇರಿದಂತೆ ಮುಂತಾದವರು ಇದ್ದರು.

ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಲ್ಲ
"ಪಂಚಮಸಾಲಿ ಲಿಂಗಾಯತ ಮೀಸಲಾತಿ ಹೋರಾಟದ ಭಾಗವಾಗಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ದುಂಡು ಮೇಜಿನ ಸಭೆಯಲ್ಲಿ ನಾನು ಭಾಗವಹಿಸಿಲ್ಲ. ಜಯ ಮೃತ್ಯುಂಜಯ ಸ್ವಾಮೀಜಿಯವರ ಮೀಸಲಾತಿ ಹೋರಾಟದ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದು, ಮುಂದೆ ಸಕಾರಾತ್ಮಕ ಹೆಜ್ಜೆಯನ್ನು ಇಡಲಿದೆ," ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಭರವಸೆ ನೀಡಿದರು.

ಪಂಚಮಸಾಲಿ ಲಿಂಗಾಯತ ಮೀಸಲಾತಿಗಾಗಿ ಹುಬ್ಬಳ್ಳಿಯಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆಯೋಜಿಸಿರುವ ಚಳವಳಿಗಾರರ ದುಂಡು ಮೇಜಿನ ಸಭೆಗೆ ಮುನ್ನ, ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Recommended Video

ವಿಜಯೇಂದ್ರ ವಿರುದ್ದ ಗುಡುಗಿದ ಯತ್ನಾಳ್ | Oneindia Kannada

ನಾನು ಮಾತಾಡುವುದಿಲ್ಲ, ಕೆಲಸ ಮಾಡಿ ತೋರಿಸುವೆ. ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ, ಆಗಸ್ಟ್ 15ರ ಬಳಿಕ ಮುಖ್ಯಮಂತ್ರಿ ಮತ್ತು ಸ್ವಾಮೀಜಿ ಭೇಟಿಗೆ ವ್ಯವಸ್ಥೆ ಮಾಡುವೆ. ಸರ್ಕಾರದಿಂದ ಸಮಾಜದ ಬೇಡಿಕೆ ಈಡೇರಲಿದ್ದು, ಸಮುದಾಯದವರು ತಾಳ್ಮೆಯಿಂದ ಕಾಯಬೇಕು ಎಂದು ಮನವಿ ಮಾಡಿದರು. ನಂತರ ದುಂಡು ಮೇಜಿನ ಸಭೆ ಆರಂಭಕ್ಕೂ ಮುನ್ನವೇ ಸಚಿವ ಸಿ.ಸಿ. ಪಾಟೀಲ್ ಸ್ವಕ್ಷೇತ್ರ ಗದಗ ಜಿಲ್ಲೆಯ ನರಗುಂದಕ್ಕೆ ಪ್ರಯಾಣ ಬೆಳೆಸಿದರು.

English summary
Basava Jaya Mruthyunjaya Swamiji of the Koodalasangama Peeta demanded that the 2A reservation be recommended for the Panchamasali Lingayat community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X