• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ಕಟೀಲ್ ವಿವಾದಾತ್ಮಕ ಹೇಳಿಕೆ

|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 19; " ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್‌, ಪೆಡ್ಲರ್ ಅಂತಾ ವರದಿಗಳು ಹೇಳಿವೆ" ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿದರು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮುಂತಾದವರು ಉಪಸ್ಥಿತರಿದ್ದರು.

ಕೈ ನಾಯಕರದ್ದು ಒಂದೇ ಕೂಗು: ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ 2ನೇ ಬಾರಿ ರಾಹುಲ್ ಗಾಂಧಿ!?ಕೈ ನಾಯಕರದ್ದು ಒಂದೇ ಕೂಗು: ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ 2ನೇ ಬಾರಿ ರಾಹುಲ್ ಗಾಂಧಿ!?

ಈ ಸಭೆಯಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ?. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ. ಅವರಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಇನ್ನು ದೇಶವನ್ನುಮುನ್ನಡೆಸುತ್ತಾರಾ?" ಎಂದು ಪ್ರಶ್ನಿಸಿದರು.

 ಲಖಿಂಪುರ ಖೇರಿ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ತಪ್ಪಾಗಿ ಬಿಂಬಿಸುತ್ತಿದ್ದಾರೆ; ಬಿಜೆಪಿ ಲಖಿಂಪುರ ಖೇರಿ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ತಪ್ಪಾಗಿ ಬಿಂಬಿಸುತ್ತಿದ್ದಾರೆ; ಬಿಜೆಪಿ

"ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿಗಳು ನಡೆದರೆ ಪ್ರಧಾನಿ ಮನಮೋಹನ್ ಸಿಂಗ್ ಒಂದು ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಪ್ರತಿದಾಳಿ ನಡೆಸುವ ಕಾರ್ಯ ನಡೆದಿದೆ. ಇಂತಹ ಪ್ರಧಾನಿಯನ್ನು ಕಾಂಗ್ರೆಸ್‌ನವರು ಟೀಕಿಸುತ್ತಾರೆ" ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

 ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆ

ಸಿದ್ದರಾಮಯ್ಯಗೆ ಸೋಲಿನ ಭೀತಿ

ಸಿದ್ದರಾಮಯ್ಯಗೆ ಸೋಲಿನ ಭೀತಿ

"ದೇಶದ ಪ್ರಧಾನಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂದರೆ ಸಿದ್ದರಾಮಯ್ಯ ಅವರು ಸಾಬ್ರು ಕಾ ಸಾಥ್ ಸಾಬ್ರು ಕಾ ವಿಕಾಸ್ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲುವ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ" ಎಂದು ನಳಿನ್ ಕುಮಾರ್ ಕಟೀಲ್ ದೂರಿದರು.

"ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡೆತ್ತುಗಳಲ್ಲ. ಅವರು ಕಾಡೆತ್ತು, ಒಬ್ಬರಿಗೊಬ್ಬರು ಕಾದಾಟ ಮಾಡುತ್ತಿದ್ದಾರೆ" ಎಂದು ನಳಿನ್ ಕುಮಾರ್ ಕಟೀಲ್ ಟೀಕಿಸಿದರು.

ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ

ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ

"ಕಾಂಗ್ರೆಸ್ ಅಧ್ಯಕ್ಷರ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ ಅವರು ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗಿಯೇ ಮಾತನಾಡುವವರು. ಈ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ" ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

"ಕಾಂಗ್ರೆಸ್ ಅಧ್ಯಕ್ಷರು ತಿಹಾರ್ ಜೈಲಿಗೆ ಹೋಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಜೈಲಿಗೆ ಹೋದರೆ?. ಕಾಂಗ್ರೆಸ್ ವಿರೋಧ ಪಕ್ಷವಾಗಿ ಉಳಿಯಲು ಸಹ ಅರ್ಹತೆ ಕಳೆದುಕೊಂಡಿದೆ. ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ" ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ

ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ

"ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್‌, ಪೆಡ್ಲರ್ ಅಂತಾ ವರದಿಗಳು ಹೇಳಿವೆ" ಎಂಬ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು ಯಾವಾಗಲೂ ಇಂತಹ ಕೀಳು ಮಟ್ಟಕ್ಕೆ ಇಳಿಯಲ್ಲ. ಯಾರೂ ಅಂತಹ ಹೇಳಿಕೆಗಳನ್ನು ನೀಡಬಾರದು. ಯಾರೇ ಆಗಲಿ ಯಾರದ್ದೇ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಬಾರದು" ಎಂದರು.

  ಇಂಡೋ ಪಾಕ್ ಆಟಕ್ಕೆ ಬ್ರೇಕ್ | Oneindia Kannada
  ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ

  ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ

  "ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮಧ್ಯ ನೇರ ಹಣಾಹಣಿ ಇದ್ದು, ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಪರ್ಸೆಂಟೇಜ್ ತೆಗೆದುಕೊಳ್ಳುವುದರಲ್ಲಿ ಮುಂದಿದ್ದಾರೆ. ಈ ರಾಜ್ಯದಲ್ಲಿ ಎರಡೂ ಪಕ್ಷಗಳನ್ನು ಅಧಿಕಾರದಿಂದ ಕಿತ್ತು ಹಾಕಲು ರಾಜ್ಯದ ಜನರು ಮನಸ್ಸು ಮಾಡಬೇಕಿದೆ. ಎರಡೂ ಪಕ್ಷಗಳು ರಾಜ್ಯದ ಜನತೆಯ ದುಡ್ಡನ್ನು ಲೂಟಿ ಹೊಡೆಯುತ್ತಿವೆ" ಎಂದು ಕುಮಾರಸ್ವಾಮಿ ಆರೋಪಿಸಿದರು.

  English summary
  Karnataka BJP president Nalin Kumar Kateel sparked controversy after his comment on Congress leader Rahul Gandhi. Reports said that Rahul Gandhi drug addict and peddler said BJP state president.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X