ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ರಾಯಚೂರು ಕಲುಷಿತ ನೀರು ಪ್ರಕರಣ: ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ

|
Google Oneindia Kannada News

ಹುಬ್ಬಳ್ಳಿ, ಜೂನ್ 11: ರಾಯಚೂರು ಕಲುಷಿತ ನೀರು ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ.ಅಗತ್ಯ ಬಿದ್ದರೆ ಕ್ರಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎಲ್ಲಾ ವಾರ್ಡಿನ ನೀರಿನ ಮಾದರಿಯನ್ನು ಸಂಗ್ರಹಿಸಿ ತನಿಖೆ ಮಾಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ:

ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Raichur contaminated water case: Criminal case if necessary

ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್ ತುಕಡಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆ.ಎಸ್.ಆರ್.ಪಿ ತುಕಡಿಗಳ ಚಲನೆ ಪ್ರಾರಂಭವಾಗಿದೆ. ಹುಬ್ಬಳ್ಳಿ ಪೊಲೀಸ್ ಆಯುಕ್ತರು ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದೆ ಎಂದರು.

Raichur contaminated water case: Criminal case if necessary

ಸೌಹಾರ್ದತೆ ಕಾಪಾಡಿ

Recommended Video

ಗಾಬರಿಯಿಂದ ಸಿದ್ದು ಹೊರಟಿದ್ದು ಎಲ್ಲಿಗೆ?? | Oneindia Kannada

ಎಲ್ಲಾ ಸಮುದಾಯಗಳ ನಾಯಕರೊಂದಿಗೆ ಮಾತುಕತೆ ನಡೆಸಿ, ಸೌಹಾರ್ದತೆಯನ್ನು ಕಾಪಾಡುವಂತೆ ಪೊಲೀಸ್ ಇನ್ಸಪೆಕ್ಟರ್ ಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

English summary
Five people died in Raichur for contaminated water case. Criminal case if necessary- CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X