Railway Exam: ಜನಿವಾರ, ಮಂಗಳ ಸೂತ್ರ ಅಲ್ಲ ಮೆಹಂದಿ ಹಾಕಿಕೊಳ್ಳುವಂತಿಲ್ಲ, ಯಾಕೆ ?!
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಮುಖ ಪರೀಕ್ಷೆಗಳಿಗೆ ಹಾಜರಾಗುವ ಸಂದರ್ಭದಲ್ಲಿ ಜನಿವಾರ ಧರಿಸುವುದು ಹಾಗೂ ಮಂಗಳ ಸೂತ್ರಕ್ಕೆ ಸಂಬಂಧಿಸಿದಂತೆ ವಿಧಿಸಲಾಗುತ್ತಿರುವ ನಿರ್ಬಂಧಗಳು ಭಾರೀ ವಿರೋಧಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿರುವುದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೇ ರಾಜ್ಯದಾದ್ಯಂತ ಈ ವಿಷಯಕ್ಕೆ ಸಂಬಂಧಿಸಿದಂತೆ ಭಾರೀ ಪ್ರತಿಭಟನೆಗಳು ನಡೆದಿದ್ದವು. ಕೆಲವು ಕಡೆಗಳಲ್ಲಿ ಜನಿವಾರ ಕತ್ತರಿಸಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿ ಬಂದಿದ್ದವು. ಇದೀಗ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಷಿದ್ಧ ವಸ್ತುಗಳಿಗೆ ಸಂಬಂಧಿಸಿದಂತೆ ವಿವಾದ ಶುರುವಾಗಿದೆ. ಈ ಸಂಬಂಧ ರೈಲ್ವೆ ನೇಮಕಾತಿ ಮಂಡಳಿ (RRB) ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಷಿದ್ಧ ವಸ್ತುಗಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ನಡೆಸುವ ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯುವುದರ ಮೇಲಿನ ನಿರ್ಬಂಧಗಳ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ, ಮಂಡಳಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ರೈಲ್ವೆ ಮಂಡಳಿಯು ದಿನಾಂಕ 28.04.2025 ರಂದು ಪತ್ರ ಸಂಖ್ಯೆ 2025/E(RRB)/25/08 ರ ಮೂಲಕ ಸ್ಪಷ್ಟನೆಯನ್ನು ನೀಡಿದೆ.

RRB ನಡೆಸುವ ಪರೀಕ್ಷೆಗಳಲ್ಲಿ ಕೆಲವು ನಿಯಮಾವಳಿಗಳಿವೆ. ಅವುಗಳನ್ವಯ ಕೆಲವು ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ. ಆದಾಗ್ಯೂ, ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಸಕ್ಷಮ ಪ್ರಾಧಿಕಾರವು ಇದೀಗ ಕೆಲವೊಂದು ನಿರ್ದಿಷ್ಟ ಬದಲಾವಣೆಗಳನ್ನು ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಹೇಳಿದೆ. ಇದರ ಭಾಗವಾಗಿ ಸೂಚನೆಗಳ ಪ್ಯಾರಾ 7 ಅನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ.
7(i) ಮೊಬೈಲ್ ಫೋನ್‌ಗಳು, ಪೇಜರ್, ವಾಚ್‌ಗಳು, ಇಯರ್‌ಫೋನ್, ಬ್ಲೂಟೂತ್ ಸಾಧನಗಳು, ಮೈಕ್ರೊಫೋನ್, ಹೆಲ್ತ್ ಬ್ಯಾಂಡ್‌ಗಳು, ಕ್ಯಾಲ್ಕುಲೇಟರ್‌ಗಳು, ಪುಸ್ತಕ, ಪೆನ್, ಪೇಪರ್, ಪೆನ್ಸಿಲ್, ಎರೇಸರ್, ಪೌಚ್, ಸ್ಕೇಲ್, ರೈಟಿಂಗ್-ಪ್ಯಾಡ್, ಬೆಲ್ಟ್‌ಗಳು, ಹ್ಯಾಂಡ್‌ಬ್ಯಾಗ್, ಕ್ಯಾಪ್, ಪರ್ಸ್, ಕ್ಯಾಮೆರಾ, ನೀರಿನ ಬಾಟಲ್, ಪ್ಯಾಕ್ ಮಾಡಿದ/ತೆರೆದ ಆಹಾರ ಪದಾರ್ಥಗಳು ಮುಂತಾದ ನಿಷಿದ್ಧ ವಸ್ತುಗಳು/ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗಲು ಅನುಮತಿಸುವುದಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ಕೇವಲ ಇ-ಕರೆ ಪತ್ರವನ್ನು ಮಾತ್ರ ಅನುಮತಿಸಲಾಗುವುದು. ಅಭ್ಯರ್ಥಿಗಳು ಯಾವುದೇ ಪೆನ್/ಪೆನ್ಸಿಲ್ ಅನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯಬಾರದು. ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಪೆನ್ ಅನ್ನು ಒದಗಿಸಲಾಗುವುದು ಎಂದು ಹೇಳಲಾಗಿದೆ.
ಮೆಹಂದಿ ಹಾಕಿಕೊಳ್ಳುವಂತಿಲ್ಲ: ಇನ್ನು ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ತಮ್ಮ ಕೈ/ಕಾಲುಗಳಿಗೆ ಮೆಹಂದಿ ಹಾಕಿಕೊಳ್ಳದಂತೆ ಸೂಚಿಸಲಾಗಿದೆ. ಏಕೆಂದರೆ ಇದು ಬಯೋಮೆಟ್ರಿಕ್ಸ್ ಸೆರೆಹಿಡಿಯುವಿಕೆಗೆ ಅಡ್ಡಿಯುಂಟು ಮಾಡುತ್ತದೆ ಎಂದು ಹೇಳಲಾಗಿದೆ.
7(ii) ತಪಾಸಣೆಯ ಸಮಯದಲ್ಲಿ, ಲೋಹದ ವಸ್ತುಗಳು, ಧಾರ್ಮಿಕ ಚಿಹ್ನೆಗಳು, ಬಳೆಗಳು, ಆಭರಣಗಳು, ಮಂಗಳ ಸೂತ್ರ, ಕಡಗಗಳನ್ನು ಧರಿಸಿರುವ ಅಭ್ಯರ್ಥಿಗಳನ್ನು ಅವರ ಕರೆ ಪತ್ರದಲ್ಲಿ ಸೂಕ್ತವಾದ ಅನುಮೋದನೆಯೊಂದಿಗೆ ಪರೀಕ್ಷಾ ಹಾಲ್‌ನೊಳಗೆ ಅನುಮತಿಸಲಾಗುವುದು. ಅಂತಹ ಅಭ್ಯರ್ಥಿಗಳ ಮೇಲೆ ಮೇಲ್ವಿಚಾರಕರು ಹೆಚ್ಚಿನ ನಿಗಾ ಇಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications