Railway Updates: ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸೇವೆಗಳಲ್ಲಿ ಬದಲಾವಣೆ
ಹುಬ್ಬಳ್ಳಿ, ಡಿಸೆಂಬರ್ 24: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 64ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸೇವೆಗಳಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಜನವರಿ 2 ಮತ್ತು 9, 2025 ರಂದು ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್ (07346), ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ (07328), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ (16239), ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್ ಪ್ರೆಸ್ (16240), ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್ (06576), ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06575), ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್ ಸಿಟಿ ಡೈಲಿ ಎಕ್ಸ್ ಪ್ರೆಸ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ ಇಂಟರ್ ಸಿಟಿ ಡೈಲಿ ಎಕ್ಸ್ ಪ್ರೆಸ್ (16580) ರೈಲುಗಳ ಸಂಚಾರ ತಾತ್ಕಾಲಿಕ ರದ್ದಾಗಲಿದೆ.

ಭಾಗಶಃ ರದ್ದು
ಜನವರಿ 02 ಮತ್ತು 09, 2025 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ, ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06572) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ, ತಾಳಗುಪ್ಪ-ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (20652) ರೈಲು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ, ಕೆಎಸ್ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (12725) ರೈಲು ಕೆಎಸ್ಆರ್ ಬೆಂಗಳೂರು-ಅರಸೀಕೆರೆ ನಿಲ್ದಾಣಗಳ ನಡುವೆ, ಧಾರವಾಡ-ಕೆಎಸ್ಆರ್ ಬೆಂಗಳೂರು ಸಿದ್ಧಗಂಗಾ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ (12726) ರೈಲು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಮತ್ತು ತುಮಕೂರು-ಯಶವಂತಪುರ ಮೆಮು ವಿಶೇಷ (06201) ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿವೆ.
ರೈಲುಗಳ ಮಾರ್ಗ ಬದಲಾವಣೆ
ಜನವರಿ 1 ಮತ್ತು 8ರಂದು ವಾಸ್ಕೋ ಡ ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ಇರುವುದಿಲ್ಲ.
ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ಇರುವುದಿಲ್ಲ.

ರೈಲು ಸಂಖ್ಯೆ 20667 ಯಶವಂತಪುರ-ಜೈಪುರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ಈ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲಿನ ನಿಯಮಿತ ನಿಲುಗಡೆ ತುಮಕೂರು ನಿಲ್ದಾಣದಲ್ಲಿ ತಪ್ಪಿರುತ್ತದೆ.
ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಜನವರಿ 2 ಮತ್ತು 9, 2025 ರಂದು ಮೈಸೂರಿನಿಂದ ಹೊರಡುವ ಈ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮತ್ತು ದಾವಣಗೆರೆ ನಿಲ್ದಾಣಗಳ ಮೂಲಕ ಚಲಿಸಲಿದೆ.
ಜನವರಿ 2 ಮತ್ತು 9, 2025 ರಂದು ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ತನ್ನ ನಿಯಮಿತ ನಿಲುಗಡೆ ತಪ್ಪಿರುತ್ತದೆ.
ರೈಲುಗಳ ನಿಯಂತ್ರಣ
ಡಿಸೆಂಬರ್ 31, 2024 ಮತ್ತು ಜನವರಿ 7, 2025 ರಂದು ಬಿಕಾನೇರ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷ ನಿಯಂತ್ರಿಸಲಾಗುವುದು.
ಜನವರಿ 2 ಮತ್ತು 9 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ದ್ವಿ-ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 50 ನಿಮಿಷ, ರೈಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ10 ನಿಮಿಷ, ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 30 ನಿಮಿಷ ಮತ್ತು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ದೈನಂದಿನ ಪ್ಯಾಸೆಂಜರ್ ರೈಲು ಮಾರ್ಗ ಮಧ್ಯದಲ್ಲಿ 120 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸಮಯ ಮರು ನಿಗದಿ
ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋ ಡ ಗಾಮಾ ಡೈಲಿ ಎಕ್ಸ್ ಪ್ರೆಸ್ ಜನವರಿ 2 ಮತ್ತು 9 ರಂದು ಯಶವಂತಪುರ ನಿಲ್ದಾಣದಿಂದ 30 ನಿಮಿಷ ತಡವಾಗಿ ಹೊರಡಲಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications