ನೇಹಾ ಕೊಲೆ ಕೇಸು CID ತನಿಖೆಗೆ ನೀಡಿದ್ದಕ್ಕೆ 'ರಂಭಾಪುರಿ ಶ್ರೀಗಳು' ಅಸಮಾಧಾನ: ಶ್ರೀಗಳು ಹೇಳಿದ್ದೇನು?
ಹುಬ್ಬಳ್ಳಿ, ಏಪ್ರಿಲ್ 28: ಹುಬ್ಬಳ್ಳಿಯಲ್ಲಿ ಇದೇ ತಿಂಗಳ ಏಪ್ರಿಲ್ 18ರಂದು ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ನಡೆದಿದ್ದು, ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಕೊಟ್ಟಿರುವುದು ನಮಗೆ ಸಮಂಜಸವಾಗಿಲ್ಲ ಎಂದು ಜಗದ್ಗುರು ರಂಭಾಪುರಿ ಶ್ರೀಗಳು ತಿಳಿಸಿದ್ದಾರೆ.
ಮೃತ ನೇಹಾಳ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ನಿವಾಸಕ್ಕೆ ಭಾನುವಾರ ಜಗದ್ಗುರು ರಂಭಾಪುರಿ ಶ್ರೀಗಳು ಭೇಟಿ ನೀಡಿದರು. ಕುಟುಂಬಕ್ಕೆ ಸಾಂತ್ವನ ಹೇಳಿ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು.

ಅವಳಿ ನಗರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ ಹಾಗೂ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್ ವಿಧ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಸಿಐಡಿಗೆ ಕೊಟ್ಟಿರುವುದು ನಮಗೆ ಸಮಾಧಾನ ತಂದಿಲ್ಲ. ಏಕೆಂದರೆ ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತದೆ ಎಂದು ನೇಹಾಳ ನಿವಾಸದಲ್ಲಿ ರಂಭಾಪುರಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.
ಕೊಲೆ ಘಟನೆ ಎಲ್ಲರು ಖಂಡಿಸಬೇಕು
ಏಪ್ರಿಲ್ 18 ರಂದು ಕಾಲೇಜಿನಲ್ಲಿ ಹಾಡಹಗಲೇ ನಡೆದ ಕೊಲೆ ಘಟನೆ ಖಂಡನೀಯ. ಇಂತಹ ಕೃತ್ಯ ಮಾಡಿದವನಿಗೆ ತಕ್ಕ ಶಿಕ್ಷೆಯನ್ನು ನೀಡಬೇಕು. ಆದಾಗಿಯೂ ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು.
ನೇಹಾ ಕೊಲೆ ಮಾಡಿದ ದುಷ್ಟ ವ್ಯಕ್ತಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಈ ನೋವನ್ನ ಮರೆಯುವಂತದ್ದು ನಿರಂಜನ ಕುಟುಂಬಕ್ಕೆ ಆಗುತ್ತಿಲ್ಲ. ಈ ಸರ್ಕಾರ ಈಗಾಗಲೇ ಸಿಐಡಿಗೆ ಈ ಕೇಸ್ ಕೊಡಲಾಗಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂದು ಒತ್ತಾಯ ಮಾಡುತ್ತೇವೆ.

ಒಂದು ಸಮುದಾಯದ ತುಷ್ಟೀಕರಣ ಸರಿಯಲ್ಲ
ಯಾವುದೋ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಬಾರದು. ಎಲ್ಲ ರಾಜಕಾರಣಿಗಳು ಈ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು. ಈ ಪ್ರಕರಣವನ್ನು ಆದಷ್ಟು ಬೇಗನೆ ಮುಗಿಸಿ ನ್ಯಾಯ ಕೊಡಿಸುವ ಕೆಲಸ ಆಗಬೇಕು.
ಒಂದು ವೇಳೆ ನ್ಯಾಯ ಸಿಗದಿದ್ದರೆ ಎಲ್ಲಾ ಸಂಘಟನೆಗಳು ಒಂದಾಗಿ ಹೋರಾಟ ಮಾಡುತ್ತವೆ ಎಂದು ಅವರು ಎಚ್ಚರಿಸಿದರು.
ಪ್ರಕರಣದ ತನಿಖೆಯಲ್ಲಿ ಯಾವುದೇ ಲೋಪದೋಷವಾಗದ ರೀತಿ ಆದಷ್ಟು ಬೇಗ ಮುಗಿಸಿ ನ್ಯಾಯ ಕೊಡಿಸುವ ಕೆಲಸ ಆಗಬೇಕು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಹಲವು ರಾಜಕೀಯ ನಾಯಕರು ಬಂದು ಸಾಂತ್ವನ ಹೇಳಿದ್ದಾರೆ.
ರಾಜಕೀಯ ಮಾಡದೇ ನ್ಯಾಯ ಕೊಡಿ
ನಿರಂಜನ್ ಹಿರೇಮಠ ಸಹ ಕೂಡ ರಾಜಕೀಯವಾಗಿ ಸಾಮಾಜಿಕವಾಗಿ ಇರುವವರು ಈಗಾಗಲೇ ಅವರು ಕಾರ್ಪೊರೇಟರ್ ಕೂಡ ಇದ್ದಾರೆ. ಹಾಗಾಗಿ ಇದರಲ್ಲಿ ಯಾರು ರಾಜಕೀಯ ಮಾಡದೇ ಯಾವ ಜಾತಿಭೇದ ಮಾಡದೇ ನೇಹಾ ಹತ್ಯೆಗೆ ಶಾಶ್ವತ ಪರಿಹಾರ ದೊರಕಿಸಿ ಕೊಡಬೇಕು ಎಂದು ಅವರು ತಿಳಿಸಿದರು.
ನೇಹಾ ಕೊಲೆಗೆ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಅನೇಕ ಸಂಘಟನೆಗಳು, ಮಠಾಧೀಶರು, ರಾಜಕಾರಣಿಗಳು ಹೋರಾಟ ಮಾಡಿದರು. ಇನ್ನೂ ಹಲವೆಡೆ ಹೋರಾಟ ಮುಂದುವರಿದಿವೆ.
ಮತ್ತೊಂದು ಲವ್ ಜಿಹಾದ್ ಪ್ರಕರಣ?
ಹುಬ್ಬಳ್ಳಿಯಲ್ಲಿ ಗಬ್ಬೂರಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಫುಸಲಾಯಿಸಿ ಕರೆದುಕೊಂಡ ಬಂದಿದ್ದ ಎನ್ನಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಾಗಲಕೋಟೆಯಿಂದ ಕರೆದುಕೊಂಡು ಹುಬ್ಬಳ್ಳಿಗೆ ಬಂದಿದ್ದ. ಈತನು ಗಬ್ಬೂರಿನ ಹೋಟೆಲಿನಲ್ಲಿ ಓಡಾಡುತ್ತಿದ್ದನ್ನು ಗಮನಿಸಿದ ಹಿಂದೂ ಜಾಗರಣಾ ವೇದಿಕೆ ಮುಖಂಡರು ಆತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಸದ್ಯ ಪೊಲೀಸ್ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications