ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಹೋಟೆಲ್‌ ತಿಂಡಿ ದರದಂತೆ ನೇಮಕಾತಿಗೆ ರೇಟ್ ಇದೆ; ಡಿಕೆಶಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಮೇ 07; "ಎಲ್ಲಾ ನೇಮಕಾತಿಗಳಲ್ಲೂ ಸಹ ಒಂದೊಂದು ರೇಟ್ ಫಿಕ್ಸ್ ಆಗಿದೆ. ಹೋಟೆಲ್‌ನಲ್ಲಿ ತಿಂಡಿ ಬೆಲೆಗೆ ರೇಟ್ ಹಾಕಿದಂತೆ ಇವರು ರೇಟ್ ಹಾಕಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶನಿವಾರ ಹುಬ್ಬಳ್ಳಿಯಲ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿದರು. "ಇಡೀ ಭಾರತ ದೇಶವೇ ತಲ್ಲಣವಾಗುವ ಸುದ್ದಿ ನೀವು ಕೊಟ್ಟಿದ್ದೀರಿ. 2,500 ಕೋಟಿ ರೂ. ರೆಡಿ ಮಾಡಿಕೊಳ್ಳಿ ಅಂತ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ, ಹಾಲಿ ಶಾಸಕ ರಾಜ್ಯದ ಜನರಿಗೆ ತಿಳಿಸಿದ್ದಾರೆ" ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

"ಮಂತ್ರಿ ಸ್ಥಾನಕ್ಕೆ 50 ರಿಂದ 100 ಕೋಟಿ ರೆಡಿ ಮಾಡಿಕೊಂಡು ಬನ್ನಿ ಅಂತ ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗೆ ರಾಜಕೀಯ ಬದ್ಧತೆ ಇದ್ದರೆ ಪಕ್ಷದ ಗೌರವ ಉಳಿಸುಕೊಳ್ಳುವುದು ಅವರಿಗೆ ಬಿಟ್ಟ ವಿಚಾರ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಪಿಎಸ್‌ಐ ನೇಮಕಾತಿ ಹಗರಣ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯಪಿಎಸ್‌ಐ ನೇಮಕಾತಿ ಹಗರಣ; ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

Recruitment Scam DK Shivakumar Verbal Attack On BJP Govt

"ರಾಜ್ಯದ ಹಗರಣಗಳನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಈ ಸರ್ಕಾರ ಹುಟ್ಟಿದ್ದೇ ಶಾಸಕರ ಖರೀದಿ ಮಾಡೋಕೆ. ಬೇರೆ-ಬೇರೆ ಶಾಸಕರಿಗೂ ಬಿಜೆಪಿ ಆಮಿಷ ಒಡ್ಡಿದ್ದನ್ನು ನಾವು ನೋಡಿದ್ದೇವೆ. ರಾಜ್ಯದ ಜನತೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ" ಎಂದರು.

ಪಿಎಸ್‌ಐ ನೇಮಕಾತಿ ಹಗರಣ; ದರ್ಶನ್‌ ಗೌಡ ತಂದೆ ಪ್ರತಿಕ್ರಿಯೆ ಪಿಎಸ್‌ಐ ನೇಮಕಾತಿ ಹಗರಣ; ದರ್ಶನ್‌ ಗೌಡ ತಂದೆ ಪ್ರತಿಕ್ರಿಯೆ

"ಎಲ್ಲಾ ನೇಮಕಾತಿಗಳಲ್ಲೂ ಸಹ ಒಂದೊಂದು ರೇಟ್ ಫಿಕ್ಸ್ ಆಗಿದೆ. ಹೋಟೆಲ್‌ನಲ್ಲಿ ತಿಂಡಿಗಳಿಗೆ ರೇಟ್ ಹಾಕಿದಂತೆ ಇವರು ನೇಮಕಾತಿಗೆ ರೇಟ್ ಹಾಕಿದ್ದಾರೆ" ಎಂದು ಡಿ. ಕೆ. ಶಿವಕುಮಾರ್ ಲೇವಡಿ ಮಾಡಿದರು.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಶಾಮೀಲು ಎಂದ ಕಾಂಗ್ರೆಸ್ ಪಿಎಸ್ಐ ನೇಮಕಾತಿ ಹಗರಣದಲ್ಲಿ ಸರ್ಕಾರ ಶಾಮೀಲು ಎಂದ ಕಾಂಗ್ರೆಸ್

"ಸಿಎಂ ಸ್ಥಾನಕ್ಕೆ 2500 ಕೋಟಿ ಅಂತಾದರೆ ಇನ್ನು ಯಾವ ರೀತಿ ತನಿಖೆ ಮಾಡಿಸುತ್ತೀರಿ. ಸಿಎಂ ತಮ್ಮನ್ನೇ ರಕ್ಷಣೆ ಮಾಡುತ್ತಿದ್ದಾರೋ, ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೋ ಗೊತ್ತಿಲ್ಲ" ಎಂದು ತಿಳಿಸಿದರು.

ಯತ್ನಾಳ್ ವಶಕ್ಕೆ ಪಡೆಯಿರಿ; "ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪದ ಬಗ್ಗೆ ಕೇಂದ್ರ ಸರ್ಕಾರದ ಏಜೆನ್ಸಿಯವರು ತನಿಖೆ ಮಾಡಬೇಕು. ಯತ್ನಾಳ್‌ರನ್ನು ಕೂಡಲೇ ವಶಕ್ಕೆ ಪಡೆಯಬೇಕು. ಅವರನ್ನು ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು. ನಳಿನ್ ಕುಮಾರ್ ಕಟೀಲ್ ಸಹ ಇದರಲ್ಲಿ ಭಾಗಿಯಾಗಿದ್ದಾರೆ" ಎಂದು ಆರೋಪಿಸಿದರು.

"ಶಾಸಕ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ಮಾಡಿದರೆ ಅವರಿಗೆ ನೋಟಿಸ್ ಕೊಟ್ಟಿದ್ದೀರಿ. ಬಸನಗೌಡ ಪಾಟೀಲ್ ಯತ್ನಾಳ್‌ಗೆ ಯಾಕೆ ನೋಟಿಸ್ ಕೊಟ್ಟಿಲ್ಲ?. ಬಿಜೆಪಿ ಅಧ್ಯಕ್ಷರೇ ಯಾಕೆ ಅಕ್ರಮವನ್ನು ಬಯಲಿಗೆಳೆಯುತ್ತಿಲ್ಲ?" ಎಂದು ಡಿ. ಕೆ. ಶಿವಕುಮಾರ್ ಪ್ರಶ್ನಿಸಿದರು.

ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ. ಕೆ. ಶಿವಕುಮಾರ್, "ಯಾವ ಮಂತ್ರಿ ಇದರಲ್ಲಿ ಭಾಗಿಯಾಗಿದ್ದರೂ ಅದರ ಬಗ್ಗೆ ತನಿಖೆ ಆಗಬೇಕು. ಇದರಲ್ಲಿ ಯಾರು ಭಾಗಿಯಾಗಿದ್ದಾರೆ? ಅವರ ವಿರುದ್ಧ ಕ್ರಮ ಆಗಲಿ" ಎಂದು ಡಿ. ಕೆ. ಶಿವಕುಮಾರ್ ಒತ್ತಾಯಿಸಿದರು.

Recommended Video

ಗ್ರೀನ್ ಜೆರ್ಸಿ ತೊಟ್ಟ RCB ಗೆ ಸಿಕ್ಕಿರೋದು ಬರೀ ಸೋಲು:ಈ ಮ್ಯಾಚ್ ನಲ್ಲಿ ಏನ್ ಕಥೆ? | Oneindia Kannada

"ನಾವು ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಲ್ಲ. ನಾವು ಕೇಳಿದರೆ ಅವರು ರಾಜೀನಾಮೆ ಕೊಡುತ್ತಾರಾ?. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ್ತು ನನ್ನ 40 ವರ್ಷದ ರಾಜಕಾರಣದಲ್ಲಿ ಈ ರೀತಿಯ ಸರ್ಕಾರ ನೋಡಿರಲಿಲ್ಲ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

English summary
Recruitment scam in Karnataka. KPCC president D. K. Shivakumar verbal attack on Basavaraj Bommai lead Karnataka BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X