Breaking; ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, 7 ಜನರು ಸಾವು

ಹುಬ್ಬಳ್ಳಿ, ಮೇ 24; ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾರಿಹಾಳ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಈ ಅಪಘಾತ ನಡೆದಿದೆ. ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 12.45ರ ಸುಮಾರಿಗೆ ಈ ಅಪಘಾತ ನಡೆದಿದೆ. ಕೊಲ್ಲಾಪುರದಿಂದ ಅಕ್ಕಿ ತುಂಬಿಕೊಂಡು ಬರುತ್ತಿದ್ದ ಲಾರಿ ಮತ್ತು ನ್ಯಾಷನಲ್ ಟ್ರಾವೆಲ್ಸ್‌ಗೆ ಸೇರಿದ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಲಾರಿ ಡ್ರೈವರ್, ಕ್ಲೀನರ್, ಬಸ್ ಚಾಲಕ ಮೃತಪಟ್ಟಿದ್ದಾರೆ.

Hubballi Accident: 7 Killed, 26 Injured as Bus Rams into Truck in Tarihal

ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್‌ಗೆ ಡಿಕ್ಕಿ ಹೊಡೆದ ಲಾರಿ ಪಕ್ಕದಲ್ಲಿ ಬರುತ್ತಿದ್ದ ಟ್ರಾಕ್ಟರ್ ಮೇಲೆ ವಾಲಿದೆ. ಟ್ರಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಳೆದ ಶನಿವಾರ ಹುಬ್ಬಳ್ಳಿಯಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು 7 ಜನರು ಮೃತಪಟ್ಟ ಅಪಘಾತ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+