ಕಿರೇಸೂರ ಬಳಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಸಾವನ್ನಪ್ಪಿದ ಕರ್ತವ್ಯ ನಿರತ PSI
ಹುಬ್ಬಳ್ಳಿ, ಏಪ್ರಿಲ್, 30: ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಕರ್ತವ್ಯ ನೀರತ ಪಿಎಸ್ಐ ಸಾವನ್ನಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಕಾರು ಬ್ರಿಡ್ಜ್‌ಗೆ ಗುದ್ದಿದ್ದ ಪರಿಣಾಮ ಅಪಘಾತ ಸಂಭವಿಸಿದ್ದು, ಕರ್ತವ್ಯ ನೀರತ ಪಿಎಸ್ಐ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ನಡೆದಿದೆ. ಅಮ್ಮಿನಗಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದಾರೆ.

ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿಯಾದ ಇವರು ನಿಯಂತ್ರಣ ತಪ್ಪಿದ ಕಾರಣ ಕಾರು ಬ್ರಿಡ್ಜ್‌ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಪಿಎಸ್ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನವಲಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಾರು ಅಪಘಾತದಲ್ಲಿ ಮೂವರು ದುರ್ಮರಣ
ಹಾಗೆಯೆ ಇತ್ತೀಚೆಗಷ್ಟೇ ಬೆಂಗಳೂರು-ಮೈಸೂರು ನೂತನ ದಶಪಥ ಹೆದ್ದಾರಿಯಲ್ಲಿ ಅಪಘಾತ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಬೆಂಗಳೂರು-ಮೈಸೂರು ನೂತನ ದಶಪಥ ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡದ ಸಮೀಪ ಕಾರು ಅಪಘಾತ ಸಂಭವಿಸಿದ್ದು, ಅತೀ ವೇಗವಾಗಿ ಬಂದ ಆಲ್ಟೋ ಕಾರು ಚಕ್ರ ಸಿಡಿದು ಡಿವೈಡರ್ ಹಾರಿ ಇನ್ನೊಂದು ಇನ್ನೋವಾ ಕಾರಿಗೆ ಡಿಕ್ಕಿಯಾಗಿದೆ. ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಘಟನೆಯಲ್ಲಿ ಟಿ.ನರಸೀಪುರ ಮೂಲದ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇನ್ನು ಅಪಘಾತದ ಭೀಕರತೆಗೆ ಎರಡೂ ಕಾರುಗಳು ಸಂಪೂರ್ಣ ನುಜ್ಜುಗುಜ್ಜಾಗಿದ್ದವು.
ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ಮತ್ತೊಂದೆಡೆ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯ ಮುತ್ತಸಾಗರ ಗ್ರಾಮದಲ್ಲಿ ನಡೆದಿತ್ತು. ನಾಗರಾಜು(30) ಜ್ಯೋತಿ(35) ಹಾಗೂ ಲಕ್ಷ್ಮೀ(22) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ಮಾಗಡಿಯ ಮುತ್ತಸಾಗರದ ಗೊಲ್ಲರಹಟ್ಟಿಯವರು ಎಂದು ತಿಳಿದುಬಂದಿತ್ತು
ಕೆರೆಯಲ್ಲಿ ಕುರಿ ಮೈ ತೊಳೆಯಲು ಹೋದ ವೇಳೆ ದುರ್ಘಟನೆ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಕೆರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಮನಗರ ಜಿಲ್ಲೆಯ ಮಾಗಡಿಯ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.












Click it and Unblock the Notifications