ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ
ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ನಾಳೆ ಸೆಪ್ಟಂಬರ್ 07ರಂದು ಶನಿವಾರ 'ರಾಮರೂಪಿ ಗಣೇಶ' ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಒಂದು ದಿನ ಬಾಕಿ ಇರುವಾಗಲೇ ಇದೀಗ ಎಸ್‌ಡಿಪಿಐ ಆಕ್ಷೇಪ ವ್ಯಕ್ತಪಡಿಸಿದೆ.

ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಎಸ್‌ಡಿಪಿಐ ಹೇಳುತ್ತಿರುವ ಕಾರಣವೇನು?
ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ' ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ವಿವಾದಾತ್ಮಕ ಮೈದಾನದಲ್ಲಿ ಪದೇ ಪದೆ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ, ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಬೇಕು' ಎಂದು ಒತ್ತಾಯಿಸಿದ್ದಾರೆ.
ಎಸ್‌ಡಿಪಿಐ ಪ್ರಮುಖರಾದ ಅಮನ ಖಾನ ಶಿವಳ್ಳಿ, ಆದಮ ಅತ್ತಾರ, ಹಮೀದ ಬಂಗಾಲಿ, ಬಶೀರ್ ಮುದುಗಲ್, ಎಜಾಜ್ ಶೇಖ್ ಹಾಗೂ ಇತರರು ಪಾಲಿಕೆಗೆ ಒತ್ತಾಯಿಸಿದ್ದಾರೆ.
ಶಾಂತಿಯುತವಾಗಿ ಸಾಗುತ್ತಿದೆ ಗಣೇಶೋತ್ಸವ ಸಿದ್ಧತೆ
ಒಂದು ಕಡೆ ಗಣೇಶೋತ್ಸವಕ್ಕೆ ಈದ್ಗಾ ಮೈದಾನದಲ್ಲಿ ಸಕಲ ಸಿದ್ಧತೆ, ಪೆಂಡಾಲ್ ಹಾಕುವುದು, ಭದ್ರತೆ, ಇನ್ನಿತರ ಎಲ್ಲ ತಯಾರಿ ನಡೆದಿವೆ. ಶಾಂತಿಯುತವಾಗಿ ಉತ್ಸವದಾಚರಣೆಗೆ ಮೂರು ಸಾವಿರ ಮಠದ ಸ್ವಾಮೀಜಿ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಕರೆ ನೀಡಿದ್ದಾರೆ.
ಸದ್ಯದವರೆಗೆ ಎಲ್ಲವು ಶಾಂತಿಯುತವಾಗಿ ಸಾಗುತ್ತಿದೆ. ಈ ಮಧ್ಯೆ ಎಸ್‌ಡಿಪಿಐ ಆಕ್ಷೇಪ ಎತ್ತಿದೆ. ಇದರಿಂದ ಪರಿಸ್ಥಿತಿ ಹದಗೆಡದಂತೆ ಪೊಲೀಸರು ಮತ್ತಷ್ಟು ಕಟ್ಟೆಚ್ಚರ ವಹಿಸಲಿದ್ದಾರೆ. ಈದ್ಗಾ ಮೈದಾನದಲ್ಲಿ ಕಳೆದ ಎರಡು ಬಾರಿಯು ಅನುಮತಿ ನೀಡಿದ್ದರೂ ಈ ಬಾರಿಯು ನೀಡಿದ್ದಾರೆ. ಹೀಗಾಗಿ ಅನುಮತಿ ಹಿಂಪಡೆಯುವುದು ಅನುಮಾನ ಎನ್ನಬಹುದು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications