ಶೀಘ್ರವೇ ಲೋಕಸಭಾ ಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ- ಡಿ.ಕೆ ಶಿವಕುಮಾರ್

ಹುಬ್ಬಳ್ಳಿ, ನವೆಂಬರ್‌ 03: ಲೋಕಸಭಾ ಚುನಾವಣೆಗೆ ಪಕ್ಷ ಎಲ್ಲ ರೀತಿಯ ತಯಾರಿ ಮಾಡಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ‌.ಕೆ‌ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸರ್ವೇ ಕಾರ್ಯಕ್ಕೆ ಎಲ್ಲಾ ಮಂತ್ರಿಗಳನ್ನು ಕಳಿಸಿಕೊಟ್ಟಿದ್ದೇವೆ. ಇಷ್ಟೊತ್ತಿಗೆ ವರದಿ ಕೊಡಬೇಕಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿಯಾಗಿ ಬಂದಿದ್ದಾರೆ. ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ.‌ ಇನ್ನು ನಾಲ್ಕೈದು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಹ ಬಿಡುಗಡೆ ಮಾಡಲಾಗುವುದು ಎಂದರು.

Selection Of Congress Candidates For Lok Sabha Election Soon-D.K Shivakumar

ಬಿಜೆಪಿಯವರಿಗೆ ರಾಜ್ಯದ ನಾಯಕತ್ವವನ್ನೇ ತೀರ್ಮಾನ ಮಾಡಲು ಆಗುತ್ತಿಲ್ಲ. 6ನೇ ತಿಂಗಳಿಗೆ ಕಾಲಿಟ್ಟಿದ್ದೇವೆ. ಆದರೆ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಮರ್ಥ್ಯ ಅವರಿಗಿಲ್ಲ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ ಡಿ.ಕೆ ಶಿವಕುಮಾರ್‌ ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಮಾತನಾಡಿದ ಅವರು, ಕರ್ನಾಟಕಕ್ಕೆ 50 ವರ್ಷ. ಎಲ್ಲರಿಗೂ ಇದೊಂದು ಸುವರ್ಣಾವಕಾಶ. ಇಡೀ ವರ್ಷ ಹಬ್ಬದ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿ ಇಂದ ಜ್ಯೋತಿ ಶುರುವಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇವತ್ತು ಗದಗನಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ ಎಂದರು.

ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ. ಇಂದು ಹಲವಾರು ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಂಳ್ಳುತ್ತಿದ್ದೇವೆ ಎಂದು ವಿವರಿಸಿದರು.

ಬರಗಾಲ ಬಿಜೆಪಿ ಸಮೀಕ್ಷೆ ಬರಗಾಲ ಕಾಮಗಾರಿಗಳ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಅವರು ಸಮೀಕ್ಷೆ ಮಾಡಲಿ, ಅವರು ದೆಹಲಿಗೆ ಹೋಗಿ ಕೊಡಲಿ. ನಾವು ಚಲುವರಾಯ ಸ್ವಾಮಿ, ಕೃಷ್ಣ ಬೈರೇಗೌಡರು ಅಧ್ಯಯನ ಮಾಡಿ ಘೋಷಣೆ ಮಾಡಿದ್ದೇವೆ. ಬರಗಾಲ ಅಂತಾನೂ ಘೋಷಣೆ ಮಾಡಿದ್ದೇವೆ. ಸಿಎಂ ಎಲ್ಲಾ ಜಿಲ್ಲೆಗಳಲ್ಲೂ ಪರಿಶೀಲನೆ ಮಾಡಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+