ಹಿರಿಯ ಪತ್ರಕರ್ತ ವೈ.ಎನ್‌. ಜೋಶಿ ನಿಧನ

ಹುಬ್ಬಳ್ಳಿ, ಅಕ್ಟೋಬರ್ 27: ಹಿರಿಯ ಪತ್ರಕರ್ತ, ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೈ.ಎನ್. ಜೋಶಿ (86) ಅವರು ಶನಿವಾರ ನಿಧನರಾದರು.

ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರಿಗೆ ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಿಗ್ಗೆ 6.45 ಕ್ಕೆ ಕೊನೆಯುಸಿರೆಳೆದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ‌.

ಹಲವು ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು ಸಂಯಕ್ತ ಕರ್ನಾಟಕ ದಿನಪತ್ರಿಕೆಯಲ್ಲಿನ ತಮ್ಮ 'ಬೇವು ಬೆಲ್ಲ' ಅಂಕಣದಿಂದಾಗಿ ಮನೆಮಾತಾಗಿದ್ದರು. ಕೃಷಿಗೆ ಸಂಬಂಧಿದಂತೆ ಹಲವಾರು ಲೇಖನಗಳನ್ನು ಬರೆದಿದ್ದ ಅವರು ಕರಾರುವಕ್ಕಾಗಿ ಚುನಾವಣೆ ಸಮೀಕ್ಷೆ ಬರೆಯುವುದರಲ್ಲಿ ನಿಸ್ಸೀಮರಾಗಿದ್ದರು.

Senior journalist Y.N. Joshi no more

ಕರ್ನಾಟಕ ರಾಜ್ಯ ಪತ್ರಿಕಾ ಅಕಾಡೆಮಿ ಅವರ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗುರುತಿಸಿತ್ತು. ಇತ್ತೀಚೆಗೆ ಅವರಿಗೆ ಹಿರಿಯ ಪತ್ರಕರ್ತರಿಗೆ ನೀಡುವ ಮಾಸಾಶನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿತ್ತು. ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11 ಗಂಟೆಗೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ನೆರವೇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+