Tulabhara: ಶಿರಹಟ್ಟಿ ಮಠದಿಂದ ಹುಬ್ಬಳ್ಳಿಯಲ್ಲಿ ಫೆ.1ಕ್ಕೆ ಆನೆಸಹಿತ ತುಲಾಭಾರ ಸಮಾರಂಭ, ಸಮಯ, ವೇಳಾಪಟ್ಟಿ
ಬೆಂಗಳೂರು, ಜನವರಿ 30: ವಾಣಿಜ್ಯ ನಗರಿ ಹುಬ್ಬಳ್ಳಿಯು ಗುರುವಾರ ಫೆಬ್ರವರಿ 1ರಂದು ಬೃಹತ್ ತುಲಾಭಾರ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. 5555 ಕೆ.ಜಿ. ನಾಣ್ಯಗಳಿಂದ ಆನೆ ಸಹಿತ ಸ್ವಾಮೀಜಿಗಳ ತುಲಾಭಾರ ಅದ್ಧೂರಿ ಕಾರ್ಯಕ್ರಮವು ಜರುಗಲಿದೆ.
ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಪೀಠದ ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಈ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಭಕ್ತಾಧಿಕಗಳು ಸೇರುವ ನಿರೀಕ್ಷೆ ಇದೆ. ಈ ವಿಜೃಂಭಣೆಯ ಕಾರ್ಯಕ್ರಮಕ್ಕೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.

ಮಂಗಳವಾರ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ತುಲಾಭಾರದ ಸಿದ್ಧತೆಗಳು, ಆನೆಗಳ ರಿಹರ್ಸಲ್ ಅನ್ನು ಮಠದ ದಿಂಗಾಲೇಶ್ವರ ಸ್ವಾಮೀಜಿಗಳ ಪರಿಶೀಲಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಆನೆಯಂಭಾರಿ, ಉತ್ಸವ, ಅಗತ್ಯ ವ್ಯವಸ್ಥೆ
ಮೂರು ಸಾವಿರ ಮಠದ ಪ್ರೌಢಶಾಲೆ ಆವರಣದಲ್ಲಿ ಒಂದು ಲಕ್ಷ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ದಾಸೋಹದ ನಂತರ ಮಧ್ಯಾಹ್ನ 3 ಗಂಟೆಗೆ ಫಕೀರೇಶ್ವರರ ಆನೆಯಂಬಾರಿ ಉತ್ಸವ, ಫಕೀರ ಸಿದ್ಧರಾಮ ಸ್ವಾಮೀಜಿಯವರ ಪಲ್ಲಕ್ಕಿ ಮಹೋತ್ಸವ ಆರಂಭವಾಗಲಿದೆ ಎಂದು ತಿಳಿಸಿದರು.
ಗಣ್ಯಮಾನ್ಯರ ಉಪಸ್ಥಿತಿ
ಎರಡು ಕ್ವಿಂಟಲ್ ತೇಗದ ಕಟ್ಟಿಗೆಯಿಂದ ಅಂಬಾರಿ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಫಕೀರೇಶ್ವರರ ಬೆಳ್ಳಿಯ ಮೂರ್ತಿಯನ್ನು ಇಟ್ಟು ಮೆರವಣಿಗೆ ಮಾಡಲಾಗುವುದು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಖ್ಯಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇನ್ನು ಹುಬ್ಬಳ್ಳಿಯ ದಾಜಿಬಾನಪೇಟೆ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತದ ಮೂಲಕ ಮೆರವಣಿಗೆ ನೆಹರೂ ಮೈದಾನ ತಲುಪಲಿದೆ. 5 ಆನೆ, 5 ಕುದುರೆ, 2 ಒಂಟೆ, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.
ತುಲಭಾರ ಕಾರ್ಯಕ್ರಮದ ಸಮಯ, ವಿವಿರ
ಅಂದು ಗುರುವಾರ ಸಂಜೆ 4.30ಕ್ಕೆ ತುಲಾಭಾರ ಕಾರ್ಯಕ್ರಮ ನಡೆಯಲಿದೆ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಿಜೆಪಿ ಮುಖಂಡ ಮಾಜಿ ಸಿಎಂ ಜಗದೀಶ ಶೆಟ್ಟರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಜ್ಯೋತಿ ಬೆಳಗಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ಜೀವನ ದರ್ಶನ ಪ್ರವಚನದ ಕನ್ನಡ ಮತ್ತು ಇಂಗ್ಲಿಷ್ ಗ್ರಂಥಗಳನ್ನು ಬಿಡುಗಡೆ ಮಾಡಲಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ತುಲಾಭಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 5,555 ಕೆ.ಜಿ ನಾಣ್ಯಗಳ ಮೊತ್ತ ₹73.40 ಲಕ್ಷ ಮೌಲ್ಯದ್ದಾಗಿದೆ ಎಂದು ಶ್ರೀಗಳು ವಿವರಿಸಿದರು.
ಈ ಅದ್ಧೂರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 18 ಶಾಸಕರು ಭಾಗವಹಿಸಲಿದ್ದಾರೆ. ಅಕ್ಷರಸಂತ ಹಾಜಬ್ಬ ಹರೇಕಳ, ಪ್ರಗತಿಪರ ರೈತ ಡಿ.ಟಿ.ಪಾಟೀಲ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಗುವುದು.
75 ದಿನ ಪ್ರವಚನ
ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಶಿರಹಟ್ಟಿಯಲ್ಲಿ 75 ದಿನ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿ ದಿನ ದಾಸೋಹ ವ್ಯವಸ್ತೆ ಇರಲಿದೆ. ಕನ್ನಡ, ಹಿಂದಿ ಇಂಗ್ಲಿಷ್ ಭಾಷೆಗಳ 75 ಗ್ರಂಥಗಳ ಬಿಡುಗಡೆ, ಬಂಗಾರದ ತುಲಾಭಾರ, ಚಿನ್ನದ ಕಿರೀಟ ಧಾರಣೆ ಕಾರ್ಯಕ್ರಮ ಆಯೋಜಿಸಲಾಗುವುದು. ಇದರ ದಿನಾಂಕವನ್ನು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ತುಲಾಭಾರಕ್ಕೆ ನೀಡಿದ ಚಿನ್ನದಿಂದ ಸ್ಥಾಯಿನಿಧಿ ಸ್ಥಾಪಿಸಿ, ಅದನ್ನು ಬಡ ಮಕ್ಕಳ ಶಿಕ್ಷಣಕ್ಕೆ ವಿನಿಯೋಗಿಸಲಾಗುವುದು. ಹುಬ್ಬಳ್ಳಿಯಲ್ಲಿ ನಡೆಯುವ ನಾಣ್ಯಗಳ ತುಲಾಭಾರದ ಹಣವನ್ನು ಸಹ ಇದಕ್ಕೆ ಬಳಸಲಾಗುವುದು ಎಂದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications